ಕೊಪ್ಪಳ | ಮಳೆ ಅಬ್ಬರ: ₹100 ಕೋಟಿ ಮೌಲ್ಯದ ಬೆಳೆ ಹಾನಿ

Date:

ಕಳೆದ ಎರಡು ದಿನಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ 110 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕುಗಳಲ್ಲಿ ಗುರುವಾರ-ಶುಕ್ರವಾರ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಆಲಿಕಲ್ಲಿನ ಹೊಡೆತಗಳಿಂದಾಗಿ ಭತ್ತ, ಸಜ್ಜೆ, ಮೆಕ್ಕೆಜೋಳ, ಬಾಳೆ ಸೇರಿದಂತೆ ನಾನಾ ಬೆಳೆಗಳು ನೆಲಕಚ್ಚಿವೆ. ನಾಶವಾಗಿವೆ ಎಂದು ಜಿಲ್ಲೆಯ ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಂಭವಿಸಿರುವ ಬೆಳೆ ಹಾನಿಯ ಬಗ್ಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಪಟ್ಟದಕಲ್ ನೇತೃತ್ವದಲ್ಲಿ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10,631 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸುಮಾರು 110 ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ ಎಂದು ಸಮೀಕ್ಷೆಯಿಂದ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ 3,925 ಹೆಕ್ಟೇರ್, ಕಾರಟಗಿ ತಾಲೂಕಿನಲ್ಲಿ 4,181 ಹೆಕ್ಟೇರ್ ಹಾಗೂ ಕನಕಗಿರಿ ತಾಲೂಕಿನಲ್ಲಿ 2,522 ಹೆಕ್ಟೇರ್ ಪ್ರದೇಶದಲ್ಲಿ (ಒಟ್ಟು 10,631 ಹೆಕ್ಟೇರ್) ಬೆಳೆ ಹಾನಿಯಾಗಿದೆ.

ಈ ವರದಿ ಓದಿದ್ದೀರಾ?: ವಕ್ಫ್‌ ತಿದ್ದುಪಡಿ ಕಾಯ್ದೆ | ಮೂಗಿಗೆ ತುಪ್ಪ ಹಚ್ಚಲು ಮನೆ ಬಾಗಿಲಿಗೆ ಬರುತ್ತಿದೆ ಬಿಜೆಪಿ!

ಮಳೆ ಅಬ್ಬರ ಮತ್ತು ಬೆಳೆ ಹಾನಿಯ ಬಗ್ಗೆ ಮಾತನಾಡಿರುವ ಸಹಾಯಕ ಕೃಷಿ ನಿರ್ದೇಶಕ ಸಂತೋಷ್ ಪಟ್ಟದಕಲ್, “ಕೊಪ್ಪಳ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರಿ ಮಳೆಯಾಗಿದೆ. ಜೋರು ಗಾಳಿಯೂ ಬೀಸಿದೆ. ಪರಿಣಾಮ ದೊಡ್ಡ ಪ್ರಮಾಣದ ಹಾನಿಯಾಗಿದೆ. ರೈತರ ಜಮೀನಿನಲ್ಲಿ ಬೆಳೆಯಲಾಗಿದ್ದ ಬೇಸಿಗೆ ಭತ್ತದ ಬೆಳೆ ಹಾನಿಯಾಗಿದೆ. ಬೆಳೆ ವಿಮೆಯಡಿ ನೋಂದಾಯಿಸಿಕೊಂಡ ರೈತರಿಗೆ ವಿಮೆ ಯೋಜನೆಯಡಿ ಪರಿಹಾರ ದೊರಕಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆ ಕಳೆದುಕೊಂಡಿರುವ ರೈತರು ತಮ್ಮ ಸಮೀಪದ ರೈತ ಕೇಂದ್ರಕ್ಕೆ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...