ಕೊಪ್ಪಳ | ಭಾರೀ ಮಳೆಗೆ ಏಕಾಏಕಿ ಕುಸಿದ ಮನೆ; ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರನ ರಕ್ಷಣೆ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದಲ್ಲಿ ಭಾರೀ ಮಳೆಗೆ ಮಣ್ಣಿನ ಮನೆ ಏಕಾಏಕಿ ಕುಸಿದಿದ್ದು, ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರರೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗಿನ ಜಾವ ಭಾರೀ ಮಳೆಯಾಗಿದ್ದು, ಢಾಣಾಪುರ ಗ್ರಾಮದ ಕುಸಿದ ಮಣ್ಣಿನ ಮನೆಯಲ್ಲಿ ಮ್ಯಾರಥಾನ್‌ ಓಟಗಾರ 45 ವರ್ಷದ ಪ್ರಕಾಶ ಮತ್ತು ಅವರ ಅಕ್ಕ ಮಾತ್ರ ವಾಸವಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ನಿವಾಸಿ ಹನುಮೇಶ್‌ ಬಾವಿಕಟ್ಟಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕೊಪ್ಪಳ ಜಿಲ್ಲಾದ್ಯಂತ ಭಾರೀ ಮಳೆಯಾಗಿದೆ. ರಾತ್ರಿಪೂರ್ತಿ ಸುರಿದ ಮಳೆಗೆ ತೋಯ್ದಿದ್ದ ಮಣ್ಣಿನ ಮನೆಯ ಗೋಡೆ ಏಕಾಏಕಿ ಕುಸಿದಿದೆ. ಘಟನೆ ನಡೆದಾಗ ಬೆಳಗಿನ ಜಾವವಾಗಿದ್ದರಿಂದ ಪ್ರಕಾಶ ಅವರ ಅಕ್ಕ ಮನೆಯಿಂದ ಹೊರಬಂದು ಕೆಲಸ ಮಾಡುತ್ತಿದ್ದರು. ತಮ್ಮ ಪ್ರಕಾಶ ಅವರು ಮನೆಯೊಳಗೆ ಚಾರ್ಜ್‌ ಇಟ್ಟಿದ್ದ ಮೊಬೈಲ್‌ ತರಲು ಒಳಗಡೆ ಹೋದಾಗ ಮನೆ ಕುಸಿದು ಅವರ ಮೇಲೆ ಬಿದ್ದಿದೆ. ಇದರಿಂದ ದೇಹದ ಮುಕ್ಕಾಲು ಭಾಗ ಮಣ್ಣಿನಲ್ಲಿ ಹೂತು ಹೋಗಿತ್ತು. ತಕ್ಷಣವೇ ಅಕ್ಕಪಕ್ಕದವರು ಬಂದು ರಕ್ಷಿಸಿದ್ದು, ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವರು ಕ್ರೀಡಾಪಟುವಾಗಿದ್ದು, ಮ್ಯಾರಥಾನ್‌ ಕ್ರೀಡೆಯಲ್ಲಿ 45 ಕಿ.ಮೀವರೆಗಿನ ರನ್ನಿಂಗ್‌ ರೇಸ್‌ನಲ್ಲಿ ಭಾಗವಹಿಸುತ್ತಿದ್ದರು. ತುಂಬಾ ಬಡವರು, ಜೀವನ ನಡೆಸುವದೇ ಸವಾಲಾಗಿದೆ. ಇದೀಗ ಅವರ ಮೇಲೆ ಇಡೀ ಗೋಡೆ ಕುಸಿದಿರುವುದರಿಂದ ಅವರ ಬೆನ್ನು, ಕಾಲಿನ ಭಾಗಕ್ಕೆ ಸಾಕಷ್ಟು ಪೆಟ್ಟಾಗಿದೆ. ಆಸ್ಪತ್ರೆಯಲ್ಲಿ ಆಪರೇಷನ್‌ ಮಾಡಬೇಕೆಂದು ಹೇಳುತ್ತಿದ್ದಾರೆ. ಆದರೆ ಅವರ ಬಳಿ ಅಷ್ಟು ಹಣವಿಲ್ಲ. ಯಾರಾದರೂ ಧನಸಹಾಯ ಮಾಡಿದರೆ ಅವರಿಗೆ ಅನುಕೂಲವಾಲಿದೆ” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಈಜು ಬಾರದೆ ನೀರಿನಲ್ಲಿ ಮುಳುಗಿ ಯುವಕ ಸಾವು

“ಗ್ಯಾರಂಟಿ ಯೋಜನೆಯ ಮುಖಂಡ ಶ್ರೀನಿವಾಸ್ ಎಂಬುವವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿ ₹5000 ನೀಡಿದ್ದಾರೆ. ಇನ್ನುಳಿದ ಖರ್ಚುಗಳಿಗೆ ಹಣ ಹೊಂದಿಸುವವರಿಲ್ಲ. ಅವರ ಅಕ್ಕನಿಗೂ ವಯಸ್ಸಾಗಿದೆ” ಎಂದು ಮರುಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...