ಕೊಪ್ಪಳ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ: ಭಾರತೀಯ ಮಹಿಳಾ ಒಕ್ಕೂಟ

Date:

ಕಲಬುರಗಿ ಜಿಲ್ಲೆಯ ಯಡ್ರಾಮಿನಲ್ಲಿ ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಬಸ್ ನಿಲ್ದಾಣ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ತಹಶೀಲ್ದಾರ್‌ ಅವರಿಗೆ ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿ, “ಹನ್ನೊಂದು ವರ್ಷದ ಬಾಲಕಿ ಮೇಲೆ ಬೋಧಕ ಹಾಜಿಮಲಂಗ ಗಿಣಿಯಾರ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಪುಂಡ ಕಾಮುಕನಿಗೆ ತೀವ್ರವಾದ ಶಿಕ್ಷೆ ವಿಧಿಸಿ, ಆತನನ್ನು ಗಲ್ಲಿಗೇರಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

“ಇತ್ತೀಚಿಗೆ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕಿರುಕುಳ, ಹಿಂಸೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಅತ್ಯಾಚಾರ ಎಸಗಿದ ಕಾಮುಕರನ್ನು ಸರ್ಕಾರ ಕಠಿಣ ಶಿಕ್ಷೆಗೆ ಗುರಿಪಡಿಸುತ್ತಿಲ್ಲ. ಶೋಷಿತ ಸಮುದಾಯಗಳ ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಪ್ರಧಾನಿ ʼಭೇಟಿ ಬಚಾವೋ, ಭೇಟಿ ಪಡಾವೋʼ ಎಂದು ಎದೆಯುಬ್ಬಿಸಿಕೊಂಡು ಬೀಗಿ ಭಾಷಣ ಬಿಗಿಯುತ್ತಾರೆ. ಈವರೆಗೂ ಯಾವುದೇ ಭೇಟಿಯನ್ನು ಬಚಾವ್ ಮಾಡಿಲ್ಲ, ಯಾವುದೇ ಭೇಟಿಗಳಿಗೆ ಉನ್ನತ ಪಡಾವ್ ಕೂಡಾ ಸಿಗದಂತಾಗಿದೆ. ಘೋಷಣೆ ಮಾತ್ರ ಕೇವಲ ಭಾಷಣಕ್ಕೆ ಸೀಮಿತವಾಗಿದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

“ಅತ್ಯಾರವೆಸಗಿದ ಆರೋಪಿಗೆ ಶಿಕ್ಷೆ ವಿಧಿಸಬೇಕು ಮತ್ತು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ರಕ್ಷಣೆ ಹಾಗೂ ಪರಿಹಾರ ಕೊಡಬೇಕು. ಬಾಲಕಿಯ ವ್ಯಾಸಂಗದ ಖರ್ಚನ್ನು ಸರಕಾರವೇ ಭರಿಸಬೇಕು. ಸಂತ್ರಸ್ತೆ ಬಾಲಕಿಯ ವ್ಯಾಸಂಗ ಮುಗಿದ ಸರ್ಕಾರಿ ಉದ್ಯೋಗ ಒದಗಿಸಬೇಕು” ಎಂದು ಸರರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ಭಾರತ ಮಹಿಳಾ ಒಕ್ಕೂಟ ತಾಲೂಕು ಅಧ್ಯಕ್ಷೆ ಶೇಖಮ್ಮ ಹೊಸಳ್ಳಿ, ಹಂಪಸದುರ್ಗ, ತಾರಾ ಬೇಗಂ, ಗಂಗಮ್ಮ‌ ಹೊಸಳ್ಳಿ, ಸೋಮಮ್ಮ, ಜರೀನಾ ಬೇಗಂ, ಎಐಆರ್‌ಡಿ‌ಎಂ ಅಧ್ಯಕ್ಷ ಎ ಹುಲಪ್ಪ, ಮಂಜುನಾಥ, ಎ ಎಲ್ ತಿಪ್ಪಣ್ಣ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...