ಕೊಪ್ಪಳ | ಒಳ ಮೀಸಲಾತಿಯಲ್ಲಿ ಅನ್ಯಾಯ; ತಲೆ ಬೋಳಿಸಿ ಕೊಲಂಬೋ ಸಮುದಾಯಗಳ ಪ್ರತಿಭಟನೆ

Date:

ರಾಜ್ಯ ಸರ್ಕಾರವು ಒಳಮೀಸಲಾತಿ ವರ್ಗೀಕರಣವನ್ನು ವೈಜ್ಞಾನಿಕತೆಯ ಆಧಾರದ ಮೇಲೆ ಮಾಡಿರುವುದಿಲ್ಲ. ಇದು ಅವೈಜ್ಞಾಕ ಕಾನೂನು ಕ್ರಮವಾಗಿದೆ. ಇದರಿಂದ ಬಂಜಾರ, ಕೊರಮ, ಕೊರಚ ಹಾಗೂ ಬೋವಿ ಸಮುದಾಯಗಳಿಗೆ ಘೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಸಮುದಾಯ ಕೊಪ್ಪಳ ಜಿಲ್ಲೆ ಕುಕುನೂರುನಲ್ಲಿ ಪ್ರತಿಭಟಿಸಿದರು.

ಕುಕನೂರು ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಿಂದ ಶಿರೂರು ವೀರಭದ್ರಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸಿದ ಬಳಿಕ ಕುಕನೂರ ತಹಶೀಲ್ದಾರ್‌ ಹೆಚ್ ಪ್ರಾಣೇಶ್ ಅವರಿಗೆ ಮನವಿ ಸಲ್ಲಿಸಿದರು.  

ಸಾಂಪ್ರದಾಯಿಕ ವೇಷ-ಭುಷಣ ತೊಟ್ಟು, ಕುಲ ಕಸುಬು ಕಟ್ಟಿಗೆ ಮಾರುವುದರೊಂದಿಗೆ ಹಾಗೂ ಯುವಕರು ತಲೆ ಬೋಳಿಸಿಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ  ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋರ್‌ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಳೂಟಗಿ ಮಾತನಾಡಿ, “ಕೊಲಂಬೋ (ಕೊರಮ, ಕೊರಚ, ಲಂಬಾಣಿ, ಭೋವಿ) ಸಮುದಾಯಗಳ ಜನಸಂಖ್ಯೆಯು ಹೆಚ್ಚಾಗಿದ್ದು, ಈ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಹಾಗೂ  ಔದ್ಯೋಗಿಕ ಸೌಲಭ್ಯಗಳಿಂದ ವಂಚಿತವಾಗಿದೆ. ಹೀಗಾಗಿ ನ್ಯಾ. ನಾಗಮೋಹನದಾಸ್ ಆಯೋಗವು ಪರಿಶಿಷ್ಠ ಜಾತಿಗಳ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಲಂಬಾಣಿ ಸಮುದಾಯದ ಜನರು ಗೋವಾ, ಕೇರಳ, ಆಂಧ್ರ, ಮಹಾರಾಷ್ಟ್ರ ರಾಜ್ಯಗಳಿಗೆ ಹೊಟ್ಟೆಪಾಡಿಗಾಗಿ ವಲಸೆ ಹೋಗಿದ್ದರು. ಹೀಗಾಗಿ ಅವರು ಈ ಸಮೀಕ್ಷೆಯಿಂದ ಹೊರ ಉಳಿದಿದ್ದಾರೆ” ಎಂದರು.

ಈ ಸಮೀಕ್ಷೆ ಮಾಡುವ ಸಂಧರ್ಭದಲ್ಲಿ ಉಪಜಾತಿ ಕಾಲಂನಲ್ಲಿ ಬಂಜಾರ, ಕೊರಮ, ಕೊರಚ, ಬೋವಿ ಸಮುದಾಯಗಳ ಜಾತಿಯನ್ನು ಸರಿಯಾಗಿ ನಮೂದಿಸಿರುವುದಿಲ್ಲ. ಕೊಲಂಬೋ ಸಮುದಾಯಗಳು ವಾಸಿಸುವ ಕೆಲವೊಂದು ಭಾಗಗಳಲ್ಲಿ ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ ಎಂದು ತಪ್ಪಾಗಿ ನಮೂದಿಸಲಾಗಿದೆ. ಹೀಗೆ ವಿವಿಧ ರೀತಿಯ ಧೋರಣೆಗಳಿಂದ ಈ ಸಮೀಕ್ಷೆಯಲ್ಲಿ ನಮಗೆ ಅನ್ಯಾಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಈ ಹಿಂದಿನ ಸರ್ಕಾರವು (ಕೊಲಂಬೋ) ಶೇ. 4.5 ರಷ್ಟು ಒಳ ಮೀಸಲಾತಿಯನ್ನು ನೀಡುವುದಾಗಿ ತೀರ್ಮಾನಿಸಿತ್ತು. ಆದರೆ, ಅದನ್ನು ತಿರಸ್ಕರಿಸಿದೆವು. ಈಗ ನಾಗಮೋಹನ್ ದಾಸ್ ವರದಿಯು ಈ ಸಮುದಾಯಗಳಿಗೆ ಶೇ. 4 ರಷ್ಟು ಒಳಮೀಸಲಾತಿ ನೀಡಬೇಕೆಂದು ಹೇಳಿದೆ ಇದು ಯಾವ ನ್ಯಾಯ?” ಎಂದು ಪ್ರಶ್ನಿಸಿದರು.

“ಸರ್ಕಾರದ ಸಚಿವ ಸಂಪುಟದ ತೀರ್ಮಾನ, ಕರಡು ಅಧಿಸೂಚನೆ ಹಾಗೂ ನಾಗಮೋಹನದಾಸ ವರದಿ ಕೊಲಂಬೋ ಸಮುದಾಯಗಳಿಗೆ ಮಾರಕವಾಗಿವೆ .ಇಬ್ಬಗೆಯ ನೀತಿಯ ಮೂಲಕ ಒಳಮೀಸಲಾತಿ ಸೌಲಭ್ಯ ವರ್ಗೀಕರಣ ಮಾಡುವಲ್ಲಿ ತಾರತಮ್ಯ ಮಾಡಿರುತ್ತದೆ ಹಾಗಾಗಿ ಈ ನೀತಿಯನ್ನು ನಾವು ತೀವ್ರವಾಗಿ  ವಿರೋಧಿಸುತ್ತೇವೆ. 

ಇದನ್ನೂ ಓದಿ: ಕೊಪ್ಪಳ | ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ; AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

“ಒಳಮೀಸಲಾತಿಯ ವೈಜ್ಞಾನಿಕ ವರ್ಗೀಕರಣ ಮಾಡುವುದಾದರೆ ಎಲ್ಲರಿಗೂ ಸಮಪಾಲು ನೀಡುವ ಮೂಲಕ ಕೊಲಂಬೋ ಸಮುದಾಯಗಳಿಗೆ ಶೇ. 5ರಷ್ಟು  ಮೀಸಲಾತಿಯ ಪ್ರಮಾಣವನ್ನು ನೀಡಬೇಕು. ಬುಡಗ ಜಂಗಮ ಸೇರಿದಂತೆ ಅಲೆಮಾರಿ ಸಮುದಾಯಗಳ 59 ಜಾತಿಯ ಸಹೋದರ ಸಮುದಾಯಗಳನ್ನು ʼಸಿʼ ಗುಂಪಿನಿಂದ ತೆಗೆದು ಅವರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು. ನಮ್ಮ ಸಮುದಾಯದಕ್ಕೆ ಸಾಂವಿಧಾನಿಕವಾಗಿ ಮೀಸಲಾತಿಯ ನ್ಯಾಯ ನೀಡಬೇಕು. ಹೋರಾಟವನ್ನು ಕಡೆಗೆಣಸಿದರೇ, ಮುಂದಿನ ದಿನದಲ್ಲಿ ಉಗ್ರ ಹೋರಾಟಕ್ಕೂ ಸಿದ್ದ” ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮೇಘರಾಜ್‌ ಬಳಗೇರಿ, ಬಸವರಾಜ ನಾಯ್ಕ್, ಜೀತು ನಾಯ್ಕ್‌, ಹಂಪಣ್ಣ ಕಟ್ಟಿಮನಿ, ಯಮನೂರಪ್ಪ ಕಟ್ಟಮನಿ, ಯಲ್ಲಪ್ಪ ಕಾರಭಾರಿ, ಯಮನೂರಪ್ಪ ಭಾನಾಪೂರ್‌, ಪರಸಪ್ಪ ಕಾರಭಾರಿ, ತುಕಾರಂ ಹೊನ್ನುಂಚಿ, ಸೋಮಪ್ಪ ಚಿಕೇನಕೊಪ್ಪ, ಕಳಕೇಶ್ ನಾಯ್ಕ್, ದೇವವ್ವ ಕಟ್ಟಿಮನಿ, ಶಿವವ್ವ ಭಾನಾಪುರ, ಲಕ್ಷ್ಮವ್ವ ಬಳಗೇರಿ, ಸೋನವ್ವ ಚಿಕೆನಕೊಪ್ಪ, ಶ್ರೀಕಾಂತ್ ಕಟ್ಟಿಮನಿ, ರಾಘವೇಂದ್ರ ಬಳಗೇರಿ, ಪ್ರಕಾಶ್‌ ಬಳಗೇರಿ , ಹೋಬಣ್ಣ ಚವ್ಹಾಣ, ಬಸುವರೆಡ್ದೆಪ್ಪ ಬಳಗೇರಿ, ಹನುಮಂತಪ್ಪ ಚವ್ಹಾಣ, ಕಲ್ಲಪ್ಪ ಕಟ್ಟಿಮನಿ, ತಿರುಪತಿ ಕಟ್ಟಿಮನಿ, ಕುಮಾರ್ ಬಳಗೇರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...