ಕೊಪ್ಪಳ | 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನ: ಸದುಪಯೋಗ ಪಡೆದುಕೊಳ್ಳುವಂತೆ ನ್ಯಾ. ಎಂ ಎಸ್‌ ದರಗದ ಕರೆ

Date:

ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮಹಾಂತೇಶ ಎಸ್ ದರಗದ ತಿಳಿಸಿದರು.

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ರಾಷ್ಟೀಯ ಲೋಕ್ ಅದಾಲತ್, ಮಧ್ಯಸ್ಥಿಕೆಯ ವಿಶೇಷ ಆಂದೋಲನ ಹಾಗೂ ಕಾಯಂ ಜನತಾ ನ್ಯಾಯಾಲಯ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

“ಮಧ್ಯಸ್ಥಿಕೆಯು ರಾಜಿ ಸಂಧಾನದ ಮೂಲಕ ಕಡಿಮೆ ಅವಧಿಯಲ್ಲಿ ಶೀಘ್ರ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇದರಿಂದ ಉಭಯ ಪಕ್ಷಗಾರರು ಸಮಯದ ಜತೆಗೆ ಹಣದ ಉಳಿತಾಯವನ್ನು ಮಾಡಬಹುದಾಗಿದೆ. ರಾಷ್ಟ್ರವ್ಯಾಪಿ ಮಧ್ಯಸ್ಥಿಕೆಯ ಕುರಿತು 90 ದಿನಗಳ ಕಾಲ ವಿಶೇಷ ಅಂದೋಲನದ ವ್ಯವಸ್ಥೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸರ್ವೋಚ್ಛ ನ್ಯಾಯಾಲಯವು ಈ ವಿಶೇಷ ವ್ಯವಸ್ಥೆಯನ್ನು ಮಾಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಪ್ರಕ್ರಿಯೆಯ ಮೂಲಕ ಉಭಯ ಪಕ್ಷಗಾರರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ತಟಸ್ಥ ಹೊಂದಿದ ಮಧ್ಯಸ್ಥಿಕೆಗಾರರು ಮಧ್ಯಸ್ಥಿಕೆ ಮಾಡುವ ಮೂಲಕ ವಿವಾದವನ್ನು ಸೃಜನಾತ್ಮಕವಾಗಿ ಇತ್ಯರ್ಥಪಡಿಸಲು ಅನುಕೂಲವಾಗುತ್ತದೆ. ಮಧ್ಯಸ್ಥಿಕೆಯು ಸ್ವಪ್ರೇರಿತವಾದುದಲ್ಲದೇ ಗೌಪ್ಯವಾಗಿಯೂ ಇರುತ್ತದೆ. ಇದು ಪಾರದರ್ಶಕತೆಯಿಂದ ಕೂಡಿರುತ್ತದೆ. ಮಧ್ಯಸ್ಥಿಕೆಯಲ್ಲಿ ಕಡಿಮೆ ಕಾಲ ಮಿತಿಯಲ್ಲಿ ಆಪ್ತ ಸಮಾಲೋಚನೆ ಮೂಲಕ ಮಧ್ಯಸ್ಥಿಕೆ ನಡೆಯುವುದರಿಂದ ಅರ್ಥಪೂರ್ಣ ಚರ್ಚೆ ನಡೆದು ಪ್ರಕರಣವು ವ್ಯಾಜ್ಯ ಮುಕ್ತವಾಗಿ ಬಗೆಹರಿಯಲು ಸಹಾಯಕವಾಗುತ್ತದೆ” ಎಂದರು.

“ಮಧ್ಯಸ್ಥಿಕೆಯಲ್ಲಿ ಕೌಟುಂಬಿಕ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ವಿಚ್ಛೇದನ ಪ್ರಕರಣಗಳು, ಚೆಕ್ ಬೌನ್ಸ್‌ ಪ್ರಕರಣಗಳನ್ನು ಬಗೆಹರಿಸಬಹುದಾಗಿದೆ. 90 ದಿನಗಳ ವಿಶೇಷ ಮಧ್ಯಸ್ಥಿಕೆಯು ಪ್ರತಿ ದಿನವು ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ. ಇದರಿಂದ ವಕೀಲರು ತಮ್ಮ ಕಕ್ಷಿದಾರರ ಮನವೊಲಿಸುವ ಮೂಲಕ ಮಧ್ಯಸ್ಥಿಕೆಯ ವಿಶೇಷ ಆಂದೋಲನವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ” ಎಂದು ಹೇಳಿದರು.

ಕಾಯಂ ಜನತಾ ನ್ಯಾಯಾಲಯ

“ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ಉದ್ಭವಿಸುವ ವಿವಾದಗಳ ಅತಿ ಶೀಘ್ರ ಹಾಗೂ ಖರ್ಚಿಲ್ಲದ ತೀರ್ಮಾನಕ್ಕಾಗಿ ಕಾಯಂ ಜನತಾ ನ್ಯಾಯಾಲಯಗಳು ವರವೆಂದೇ ಹೇಳಬಹುದು. 1987ರ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯನ್ನು 2002ರಲ್ಲಿ ಕೇಂದ್ರ ಸರ್ಕಾರವು ತಿದ್ದುಪಡಿ ಮಾಡಿ, ವಿಐಎ ಅಧ್ಯಾಯವನ್ನು ಹೊಸದಾಗಿ ಸೇರಿಸುವುದರ ಮೂಲಕ ಕಾಯಂ ಜನತಾ ನ್ಯಾಯಾಲಯಗಳನ್ನು ಅಸ್ಥಿತ್ವಕ್ಕೆ ತಂದಿದೆ. 2007ರಲ್ಲಿ ಕರ್ನಾಟಕ ಸರ್ಕಾರವು ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಕಾಯಂ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಿದೆ” ಎಂದರು.

“1987ರ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯ 22ಎ(ಬಿ)ನೇ ವಿಧಿಯನ್ವಯ `ಸಾರ್ವಜನಿಕ ಉಪಯುಕ್ತತಾ ಸೇವೆ’ಗಳ ವ್ಯಾಪ್ತಿಯೊಳಗೆ ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂಸಾರಿಗೆ, ಜಲಸಾರಿಗೆ ಹಾಗೂ ವಾಯುಸಾರಿಗೆ ಸೇವೆ. ಅಂಚೆ, ತಂತಿ ಮತ್ತು ದೂರವಾಣಿ ಸೇವೆ. ವಿದ್ಯುತ್ ಮತ್ತು ನೀರು ಸರಬರಾಜು ಸೇವೆ. ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ, ಕನ್ನರ್‌ವೆನ್ನಿ. ಆಸ್ಪತ್ರೆ, ಔಷಧಾಲಯಗಳಲ್ಲಿನ ಸೇವೆ, ವಿಮಾ ಸೇವೆ, ಬ್ಯಾಂಕಿಂಗ್ ಹಾಗೂ ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಸೇವೆಗಳು. ಶಿಕ್ಷಣ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಸೇವೆಗಳು. ಗೃಹ ಅಥವಾ ರಿಯಲ್ ಎಸ್ಟೇಟ್‌ಗಳಿಗೆ ಸಂಬಂಧಪಟ್ಟ ಸೇವೆಗಳು ಹಾಗೂ ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಸಾರ್ವಜನಿಕ ಹಿತದೃಷ್ಟಿಯಿಂದ ʼಸಾರ್ವಜನಿಕ ಉಪಯುಕ್ತತಾ ಸೇವೆʼಯೆಂದು ಘೋಷಿಸುವ ಇನ್ನಿತರ ಸೇವೆಗಳು ಬರುತ್ತವೆ” ಎಂದು ಹೇಳಿದರು.

“ಈ ಸಾರ್ವಜನಿಕ ಉಪಯುಕ್ತತಾ ಸೇವೆಗಳಿಗೆ ಸಂಬಂಧಿಸಿದಂತಹ ವಿವಾದಗಳು ಮಾತ್ರ ಕಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತವೆ. ಅಲ್ಲದೇ, ವಿವಾದಕ್ಕೆ ಸಂಬಂಧಿಸಿದ ಉಭಯ ಪಕ್ಷಗಾರರಲ್ಲಿ ಒಬ್ಬರು ಸಾರ್ವಜನಿಕ ಉಪಯುಕ್ತತಾ ಸೇವೆಗೆ ಸಂಬಂಧಿಸಿದ ಸಂಸ್ಥೆ ಅಥವಾ ವ್ಯಕ್ತಿಯಾಗಿರಲೇಬೇಕು. ಯಾವುದೇ ಕಾನೂನಿನನ್ವಯ ರಾಜಿಯಾಗದ ಹಾಗೂ ಕೋಟಿ ರೂಪಾಯಿಗೂ ಮೀರಿದ ಮೌಲ್ಯದ ವಿವಾದಗಳು ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ” ಎಂದರು. ‌

ಈ ಸುದ್ದಿ ಓದಿದ್ದೀರಾ? ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ 39ನೇ ರ‍್ಯಾಂಕ್

“ಕಾಯಂ ಜನತಾ ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ನಿಯಮಕ್ಕನುಸಾರ ನಡೆದರೆ, ಅತಿ ಶೀಘ್ರವಾಗಿ ಮತ್ತು ಖರ್ಚಿಲ್ಲದೆ ಪರಿಹಾರ ಪಡೆಯಲು ಸಾಧ್ಯವಿದ್ದು, ಸಾರ್ವಜನಿಕರು ಹಾಗೂ ಸಾರ್ವಜನಿಕ ಉಪಯುಕ್ತತಾ ಸೇವೆಯ ಸಂಸ್ಥೆಗಳು ಇದರ ಸದುಪಯೋಗ ಪಡೆಯಬಹುದಾಗಿದೆ. ವಕೀಲರೂ ಕೂಡ ಈ ಕಾಯಂ ಜನತಾ ನ್ಯಾಯಾಲಯದ ವೇದಿಕೆಯನ್ನು ಉಪಯೋಗಿಸಿಕೊಂಡು ತಮ್ಮ ಕಕ್ಷಿಗಾರರಿಗೆ ಖರ್ಚಿಲ್ಲದೆ ಶೀಘ್ರವಾಗಿ ಪರಿಹಾರವನ್ನು ಕೊಡಿಸಬಹುದಾಗಿದೆ” ಎಂದರು.

“ಈ ಹಿಂದೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಅತಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಜಿಲ್ಲೆಯ ವಕೀಲರು, ನ್ಯಾಯಾಧೀಶರು, ಮಧ್ಯಸ್ಥಗಾರರಿಗೆ ರಾಜಿ ಸಂಧಾನಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದಕ್ಕೆ ಮತ್ತು ಈ ಕುರಿತು ಹೆಚ್ಚಿನ ಪ್ರಚಾರ ನೀಡಿದ ಮಾಧ್ಯಮವರಿಗೆ ಅಬಿನಂಧನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...