ಕೊಪ್ಪಳ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು, ₹5,000 ದಂಡ

Date:

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಹೆಚ್ಚುವರಿ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯ ಆದೇಶ ಹೊರಡಿಸಿದೆ.

ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಬಸಾಪುರ ಗ್ರಾಮದ ಭೀಮೇಶ ಎಂಬಾತ ಶಹಾಪುರ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಬಾಲಕಿ ಶಹಾಪುರ ಉರುಸಿಗೆ ಹೋದಾಗ ಆಕೆಯನ್ನು ಪರಿಚಯ ಮಾಡಿಕೊಂಡಿದ್ದು, ಕಾಲೇಜಿಗೆ ಹೋಗಿ ಬರುವಾಗ ಹಿಂಬಾಲಿಸಿ ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿದ್ದಾನೆ. ಬಳಿಕ ಬಾಲಕಿಯನ್ನು ಪುಸಲಾಯಿಸಿ 2022ರ ಆಗಸ್ಟ್ 13ರಂದು ಸಾಲು ಮರದ ತಿಮ್ಮಕ್ಕ ಪಾರ್ಕ್‌ನಲ್ಲಿ ಆಕೆಯ ಮೇಲೆ ಪ್ರಥಮ ಬಾರಿಗೆ ಸಂಭೋಗ ಮಾಡಿರುತ್ತಾನೆ.

ಆರೋಪಿತನು ಬೇರೆ ಬೇರೆ ಸ್ಥಳಗಳಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. 2022ರ ಸೆಪ್ಟೆಂಬರ್ 1ರಂದು ಸಂತ್ರಸ್ತೆ ಕಾಲೇಜಿಗೆಂದು ಕೊಪ್ಪಳಕ್ಕೆ ಹೋಗಿ ಅಲ್ಲಿ ಪರೀಕ್ಷೆ ಬರೆದು ಗಂಗಾವತಿಗೆ ತೆರಳಿ ಯಾರಿಂದಲೋ ₹500 ಫೋನ್‌ ಪೇ ಮಾಡಿಸಿಕೊಂಡು ಮಂಡ್ಯಕ್ಕೆ ಹೋಗಿ ಅಲ್ಲಿಂದ ಮಳವಳ್ಳಿಗೆ ಹೋಗಿ ಅಲ್ಲಿನ ಒಂದು ನರ್ಸರಿಯಲ್ಲಿ ಹಾಕಿರುವ ಶೆಡ್ಡಿನಲ್ಲಿ ವಾಸವಾಗಿದ್ದು, ಆರೋಪಿ ಅಲ್ಲಿಯೂ ಅತ್ಯಾಚಾರ ಎಸಗಿದ್ದನು. ಈ ಆರೋಪದ ಹಿನ್ನೆಲೆಯಲ್ಲಿ ಮುನಿರಾಬಾದ್ ಪೋಲಿಸರು ದೂರು ಸ್ವೀಕರಿಸಿ ಶ್ರೀದೇವಿ ಸಿಎಚ್‌ಸಿ ಇವರು ಪ್ರಕರಣದ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ ಮುಂದಿನ ತನಿಖೆಯನ್ನು ಕೊಪ್ಪಳ ಸಿಪಿಐ ವಿಶ್ವನಾಥ ಹಿರೇಗೌಡರ ಅವರು ಪ್ರಕರಣ ನಿರ್ವಹಿಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗಾಗಿ ಮೂಲಸೌಲಭ್ಯಗಳ ಹೆಚ್ಚಳ: ಸಚಿವ ಪ್ರಿಯಾಂಕ್‌ ಖರ್ಗೆ

ಸರ್ಕಾರದ ಪರವಾಗಿ ಗೌರಮ್ಮ ಎಲ್ ದೇಸಾಯಿ ವಿಶೇಷ ಸರ್ಕಾರಿ ಅಭಿಯೋಜಕರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಮುನಿರಾಬಾದ್ ಪೊಲೀಸ್ ಠಾಣೆಯ ಸಿಬ್ಬಂದಿ ಹನುಮಂತಪ್ಪ ಸಿಎಚ್‌ಸಿ ಇವರು ಸಕಾಲಕ್ಕೆ ಸಾಕ್ಷಿದಾರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಸಹಕರಿಸಿರುತ್ತಾರೆ ಎಂದು ವಿ ಸರ್ಕಾರಿ ಅಭಿಯೋಜಕರು(ಪೋಕ್ಸೊ) ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...