ಕೊಪ್ಪಳ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Date:

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ‌ ಮಸೂದೆಯ ಸಂವಿಧಾನ ಬಾಹಿರ ಕಾನೂನು ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮುಸ್ಲಿಂ ವಯಕ್ತಿಕ ಕಾನೂನು ಮಂಡಳಿ ಹಾಗೂ ಪ್ರಗತಿಪರ ಸಂಘಟನೆಗಳಿಂದ ಕೊಪ್ಪಳ ನಗರದ ಗಡಿಯಾರ ವೃತ್ತದಿಂದ ಅಶೋಕ ವೃತ್ತದವರೆಗೂ ಬೃಹತ್ ಪ್ರತಿಭಟನೆ ನಡೆಯಿತು.

“ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಲ್ಪಸಂಖ್ಯಾತರ ವಕ್ಫ್ ತಿದ್ದುಪಡೆ ಮಸೂದೆ ಜನ ವಿರೋಧಿ ಕಾನೂನು. ಇದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹಾಗೂ ಸಂವಿಧಾನಬಾಹಿರ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡಲೇ ಸಂವಿಧಾನ ಬಾಹಿರ ಕಾಯ್ದೆಯನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಯ್ಧೆ ವಿರೋಧಿಸಿದರು.

ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, “ಕೇಂದ್ರ ಸರ್ಕಾರ ಯಾವಾಗಲೂ ಜನ ವಿರೋಧಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿ ಕಾಯ್ದೆ ರೂಪಿಸುತ್ತದೆ. ದೇಶದಲ್ಲಿ ಅರ್ಥಿಕತೆ ಕುಸಿಯುತ್ತಿದೆ, ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ಇದರ ಬಗ್ಗೆ ಗಮನಿಸುತ್ತಿಲ್ಲ. ಕೇವಲ ಓಟಿಗಾಗಿ ಅನ್ಯಕೋಮಿನ ಸಮುದಾಯದ ಗದಾ ಪ್ರಹಾರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಪ್ಪಳದಲ್ಲಿ ಪ್ರತಿಭಟನೆ 2

ವಕ್ಫ್‌ಗೆ ದಾನ ಕೊಡುವವರು ಹೆಚ್ಚಾದರೆ ಬಿಜೆಪಿಗೆ ನೋವಾಗುತ್ತದೆ. ಕಾಯಕ ಹಾಗೂ ದಾಸೋಹ ಪದ್ದತಿ ಶರಣರ ಕಾಲದಿಂದ ಬಂದಿದೆ. ಅದು ಇಸ್ಲಾಂನಲ್ಲೂ ಇದೆ. ಕೇಂದ್ರ ಸರ್ಕಾರ ಅಭಿವೃದ್ಧಿ ಕಡೆ ಗಮನ ಕೊಡದೆ, ಸಮುದಾಯಗಳು ಹಾಗೂ ಜಾತಿಗಳ ಮಧ್ಯೆ ಕಂದಕ ಸೃಷ್ಟಿಸುತ್ತಿದೆ” ಎಂದರು.

ಕೊಪ್ಪಳದಲ್ಲಿ ಪ್ರತಿಭಟನೆ 1

ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತಾನಾಡಿ, “ವಕ್ಫ್ ತಿದ್ದುಪಡಿ ಮಸೂದೆಯು, ಹಿಂದೂ, ಸಿಖ್, ಬೌದ್ಧ, ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಲಭ್ಯವಿರುವ ವಕ್ಫ್ ಆಸ್ಥಿಗಳಿಗೆ ನೀಡಲಾದ ರಕ್ಷಣೆ ಹಾಗೂ ಸುರಕ್ಷತೆಯನ್ನು ಕಸಿದುಕೊಂಡು ತಾರತಮ್ಯ ಮಾಡುತ್ತಿದೆ. ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ಭಾವೈಕ್ಯತೆಯನ್ನು ಕದಡುತ್ತಿದೆ. ಇದು ಧರ್ಮದ ಮುಕ್ತ ಆಚರಣೆಯ ಹಕ್ಕಿಗೆ ಹಾಗೂ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸುವ ಹಕ್ಕಿಗೆ ವಿರುದ್ಧವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಜಾತಿ ಜನಗಣತಿ; ಕಾಲಂ 61ರಲ್ಲಿ ಮಾದಿಗ ಎಂದು ನಮೂದಿಸಿ; ಸಿದ್ದರಾಜು ಸ್ವಾಮೀಜಿ

ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, “ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೂರದೃಷ್ಟಿಯಿಂದ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದ್ವೇಷ ಹರಡುತ್ತ ಹೋದರೆ ಅಧಿಕಾರದಲ್ಲಿ ಶಾಶ್ವತವಾಗಿ ಇರಬಹುದು ಎಂಬ ಹುಚ್ಚು ಕಲ್ಪನೆಯಲ್ಲಿ ಅಧಿಕಾರ ನಡೆಸುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಿಂದ ಸಂವಿಧಾನ ವಿರೋಧಿ ಕಾಯ್ದೆ ಜಾರಿಗೆ ತರುತ್ತಲೇ ಇದೆ. ಆದರೆ, ಅದರ ವಿರುದ್ಧ ಗಟ್ಟಿಯಾಗಿ ಪ್ರತಿಭಟನೆ ಮಾಡಬೇಕಾಗಿದೆ. ಸಿಎಎ, ಎನ್‌ಆರ್‌ಸಿ ಕಾಯ್ದೆ ತಂದು ಅಲ್ಪಸಂಖ್ಯಾತರನ್ನು ಮಣಿಸಲು ಸತತ ಯತ್ನ ನಡೆಯಿತು, ಇದೂ ಕೂಡ ಸಮುದಾಯ ದ್ವೇಷದ ತಿದ್ದುಪಡಿ ಕಾಯ್ದೆ. ಇದು ಭಾವೈಕ್ಯತೆಯ ವಿರೋಧಿ ಕಾನೂನು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...