ಕೊಪ್ಪಳ | 6ನೇ ಗ್ಯಾರಂಟಿ ಜಾರಿ ಮಾಡುವಂತೆ ಬಿಸಿಯೂಟ ನೌಕರರ ಪ್ರತಿಭಟನೆ

Date:

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಚುನಾವಣಾ ಪೂರ್ವದಲ್ಲಿ ಬಿಸಿಯೂಟದ ನೌಕರರಿಗೆ ₹6,000 ವೇತನ ಹೆಚ್ಚು ಮಾಡುತ್ತೇವೆಂದು ಘೋಷಿಸಿದ್ದ ಪ್ರಕಾರವಾಗಿ ಕೂಡಲೇ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ದುಡಿಯುವ ವರ್ಗ‌ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಕೊಪ್ಪಳ ಜಿಲ್ಲಾ ಸಮಿತಿಯು ಹೋರಾಟಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಕೊಪ್ಪಳ ತಾಲೂಕಿನ ಬಿಸಿಯೂಟ ನೌಕರರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದರು.”

“ಚುನಾವಣೆಯ ಪೂರ್ವದಲ್ಲಿ ಪ್ರಿಯಾಂಕ ಗಾಂಧಿಯವರು ಘೋಷಿಸಿದ್ದ 6ನೇ ಗ್ಯಾರಂಟಿಯನ್ನು ಈಗಿನ ಸರ್ಕಾರ ಕೂಡಲೇ ಜಾರಿ ಮಾಡುವ ಮೂಲಕ ಬಿಸಿಯೂಟ ಯೋಜನೆಯಡಿ ದುಡಿಯುವ ನೌಕರರ ಈಗಿರುವ ವೇತನವನ್ನು ₹6,000ಕ್ಕೆ ಹೆಚ್ಚಿಸಬೇಕು. ನಿವೃತ್ತಿಯಾಗುವ ನೌಕರರಿಗೆ ಸರ್ಕಾರವು ಇಡುಗಂಟು ಹಣ ₹40‌,000 ಮಂಜೂರು ಮಾಡುತ್ತಿದ್ದು, ಅದನ್ನು 2 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಪ್ಪಳದ ಬಿಸಿಯೂಟ ನೌಕರರ ಪ್ರತಿಭಟನೆ 1

“ಅಪಘಾತಕ್ಕೀಡಾಗಿ ಸಾವನಪ್ಪಿದರೆ, ಆ ಕುಟುಂಬದವರಿಗೆ ₹10 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಒಂದು ವೇಳೆ ಗಾಯಗೊಂಡರೆ ಅಂಥವರಿಗೆ ಚಿಕಿತ್ಸೆಯ ವೆಚ್ಚ ಹಾಗೂ ಸೂಕ್ತ ಪರಿಹಾರವನ್ನು ನೀಡಬೇಕು. ಎಸ್‌ಡಿಎಂಸಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರ ಹೆಸರಿನಲ್ಲಿರುವ ಜಂಟಿ ಖಾತೆಯನ್ನು ರದ್ದುಗೊಳಿಸಿ ಮುಖ್ಯ ಅಡುಗೆದಾರರು ಹಾಗೂ ಶಾಲಾ ಮುಖ್ಯೋಪಾಧ್ಯಾಯರ ಹೆಸರಿನಲ್ಲಿ ಖಾತೆಯನ್ನು ತೆರೆಯಬೇಕು. ಪಿಂಚಣಿ ಯೋಜನೆ ಜಾರಿಯಾಗಬೇಕು. ಜತೆಗೆ ಬಿಸಿಯೂಟ ಮಹಿಳೆಯರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ? ವಿಜಯಪುರ ಜಿಲ್ಲೆ ಶೇ.100ರಷ್ಟು ರಾಷ್ಟ್ರ ಪ್ರಗತಿ ಸಾಧನೆ; ಜಿಲ್ಲಾಧಿಕಾರಿ ಟಿ. ಭೂಬಾಲನ್‌ಗೆ ಪ್ರಶಂಸನಾ ಪತ್ರ

“ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ವೇತನವನ್ನು ಪಾವತಿಸಬೇಕು. ಬಿಸಿಯೂಟ ಅಡುಗೆಗೆ ಬಳಸಲು ಯೋಗ್ಯವಲ್ಲದ ದುರಸ್ತಿಯಲ್ಲಿರುವ ಒಲೆ, ಅಡುಗೆ ಸಾಮಾಗ್ರಿಗಳು ಸೇರಿದಂತೆ ಇತರ ಸಾಮಾಗ್ರಿಗಳನ್ನು ಕೂಡಲೇ ಬದಲಾಯಿಸಬೇಕು. ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡಿದಲ್ಲಿ ಈಗ ಧರಣಿ ನಡೆಸಿದ ಮಹಿಳೆಯರಿಂದ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಬಸವರಾಜ ಶೀಲವಂತರ, ಗಾಳೆಪ್ಪ ಮುಂಗೋಲಿ, ಮಕ್ಬೂಲ್ ರಾಯಚೂರು, ಪುಷ್ಪಾ ಮೇಸ್ತ್ರಿ, ಸುಮಂಗಲಾ ಕೊತಬಾಳ, ಶರಣಮ್ಮ ಬಂಡಿಹರ್ಲಾಪುರ, ರಾಜೇಶ್ವರಿ ಗಿಣಿಗೇರಿ, ಪದ್ಮಾ ಹುಲಗಿ, ಕಮಲಾದೇವಿ ದೊಡ್ಡಮನಿ, ಅನ್ನಪೂರ್ಣ, ರೆಹಮತಬಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...