ಕೊಪ್ಪಳ | ಕುಷ್ಟಗಿ-ಹುಬ್ಬಳ್ಳಿ ನಡುವೆ ರೈಲು ಸಂಚಾರಕ್ಕೆ ಸಚಿವ ವಿ ಸೋಮಣ್ಣ ಚಾಲನೆ

Date:

ಬಹುದಿನಗಳ ಬೇಡಿಯಾಗಿದ್ದ ಕುಷ್ಟಗಿ-ತಳಕಲ್ ಗ್ರಾಮ ಮಾರ್ಗದ ಹೊಸ ರೈಲು ಸಂಚಾರಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಕುಷ್ಟಗಿಯಲ್ಲಿ ಹಸಿರು ನಿಶಾನೆ ತೋರಿ‌ ಚಾಲನೆ ನೀಡಿದರು.

ಈ ವೇಳೆ ಸಚಿವ ವಿ.ಸೋಮಣ್ಣ ಮಾತನಾಡಿ, “ದೇಶದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳಾಗಿ ಕೆಲಸ ಮಾಡಬೇಕು. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಾಗ ಪಕ್ಷ ಬೇಧ ಮರೆತು ದೇಶ ಪ್ರೇಮ ತೋರಿದ್ದೇವೆ.‌ ದೇಶದ ಎಲ್ಲ ರೈಲು ಮಾರ್ಗಗಳನ್ನು ವಿದ್ಯುದೀಕರಣ ಮಾಡಲಾಗುತ್ತಿದೆ. ಅದೇ ಯೋಜನೆಯಲ್ಲಿ ಕುಷ್ಟಗಿ ಹಾಗೂ ತಳಕಲ್ ಮಾರ್ಗವನ್ನೂ ವಿದ್ಯುದೀಕರಣ ಮಾಡಲಾಗುವುದು” ಎಂದರು.

ಕುಷ್ಟಗಿ, ಯಲಬುರ್ಗಾ, ಕುಕನೂರು ತಾಲೂಕುಗಳ ಜನರು ಬಹುದಿನಗಳ ಕನಸು ನನಸಾಗಿದ್ದು ಕಂಡು ಹರ್ಷ ವ್ಯಕ್ತಪಡಿಸಿದರು. ಕುಷ್ಟಗಿ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಜನ ಜಮಾಯಿಸಿದ್ದರು. ಕುಷ್ಟಗಿಯಿಂದ ತಳಕಲ್‌ವರೆಗೂ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಸಚಿವರು ಆದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 15 at 4.38.45 PM 1

ನಿತ್ಯ ಬೆಳಿಗ್ಗೆ 7 ಗಂಟೆಗೆ ಕುಷ್ಟಗಿಯಿಂದ ಹೊರಡುವ ರೈಲು 10-30ಕ್ಕೆ ತಲುಪುತ್ತದೆ. ಹುಬ್ಬಳ್ಳಿಯಿಂದ ಸಂಜೆ 5 ಗಂಟೆಗೆ ಹೊರಡುತ್ತದೆ. ಕುಷ್ಟಗಿ ಹಾಗೂ ತಳಕಲ್ ನಡುವಿನ 56 ಕಿಮೀ ದೂರದ ಈ ಮಾರ್ಗದಲ್ಲಿ ರೈಲು ಕುಷ್ಟಗಿಯಿಂದ ಹೊರಡುವಾಗ ಲಿಂಗನಬಂಡಿ, ಹನುಮಾಪುರ, ಯಲಬುರ್ಗಾ, ಸಂಗನಾಳ, ಕುಕನೂರು ಹಾಗೂ ತಳಕಲ್ ಮಾರ್ಗದ ಮೂಲಕ ಹುಬ್ಬಳ್ಳಿ ತಲುಪಲಿದೆ.

ಇದನ್ನೂ ಓದಿ: ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಇಬ್ಬರ ಬಂಧನ

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ, ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ, ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...