ಕೊಪ್ಪಳ | ಉಚಿತ ಸರಬರಾಜಿನ 20ಕ್ಕೂ ಹೆಚ್ಚು ಗೋಧಿ ಚೀಲಗಳು ಕುರಬನಾಳ ಹಳ್ಳದಲ್ಲಿ ಪತ್ತೆ; ಕ್ರಮಕ್ಕೆ ಕರವೇ ಆಗ್ರಹ

Date:

ಮಹಿಳೆಯರು ಹಾಗೂ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಸರ್ಕಾರದಿಂದ ಉಚಿತವಾಗಿ ಸರಬರಾಜಾಗುತ್ತಿರುವ ಗೋಧಿ ತುಂಬಿದ ಚೀಲಗಳು ಕೊಪ್ಪಳದ ಕುರುಬನಾಳ ಹಳ್ಳದಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಪ್ರಮಾಣದ ಗೋಧಿ ಮಣ್ಣುಪಾಲಾಗಿರುವ ಘಟನೆ ನಡೆದಿದೆ.

ಚೀಲಗಳ ಮೇಲೆ ಕುಷ್ಟಗಿ ಎಂಎಸ್‌ಪಿಟಿಸಿ ಎಂದು ಸ್ಪಷ್ಟವಾಗಿ ನಮೂದಿಸಲಾಗಿದ್ದ ಗೋಧಿ ಚೀಲಗಳು ಹಳ್ಳದಲ್ಲಿ ಬಿದ್ದಿರುವುದನ್ನು ಫೋಟೋ, ವಿಡಿಯೋ ಮೂಲಕ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ‌ ಹಂಚಿಕೊಂಡಿದ್ದಾರೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಮ್ಮ ಹಂಡಿಯವರನ್ನು ಈದಿನ.ಕಾಮ್ ಸಂಪರ್ಕಿಸಿದಾಗ, “ಕುರಬನಾಳ ಹಳ್ಳದಲ್ಲಿ ಎಸೆದ ಗೋಧಿ ಚೀಲಗಳು ನಮ್ಮ ಅಂಗನವಾಡಿ ಕೇಂದ್ರಕ್ಕೆ ಸೇರಿದವುಗಳಲ್ಲ. ಅದು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ (ಎಂಎಸ್‌ಪಿಟಿಸಿ) ಸೇರಿದ ಚೀಲಗಳು. ನಮ್ಮ ಅಂಗನವಾಡಿ ಕೇಂದ್ರಗಳಿಗೆ ಸಂಪೂರ್ಣವಾಗಿ ಗೋಧಿ ಹಿಟ್ಟು ಹಾಗೂ ನುಚ್ವಿನಿಂದ ತಯಾರಿಸಿದ ಪ್ಯಾಕೆಟ್‌ಗಳನನ್ನು ಪೂರೈಕೆ ಮಾಡಲಾಗುತ್ತಿದ್ದು, ಅವುಗಳನ್ನು ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿತರಿಸಲಾಗುತ್ತದೆ. ಅಲ್ಲದೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ನಾವು ವಿತರಿಸುವ ಗೋಧಿ ಬಿಳಿ ರವೆ ಮಿಶ್ರಿತ ಇರುತ್ತದೆ. ಹಳ್ಳದಲ್ಲಿ ಎಸೆಯಲಾದ ಗೋಧಿ ಕೆಂಪಾಗಿದೆ. ಹಾಗಾಗಿ ಅವು ಅಂಗನವಾಡಿ ಕೇಂದ್ರದ ಗೋಧಿ ಚೀಲಗಳಲ್ಲ. ಹಾಗೂ ನಾನು ಇದರ ಕುರಿತು ಮಾಹಿತಿಗಾಗಿ ಎಮ್‌ಎಸ್‌ಪಿಟಿಸಿಗೆ ನೋಟೀಸ್ ಜಾರಿ ಮಾಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 04 at 10.56.19 PM

“ಸುಮಾರು 5-6 ವರ್ಷಗಳಿಂದ ಬಳಕೆ ಮಾಡದ ಕಾರಣ ಹಾಳಾಗಿದ್ದ ಸ್ಥಿತಿಯಲ್ಲಿದ್ದ 20ಕ್ಕೂ ಹೆಚ್ವು ಗೋಧಿ ಮೂಟೆಗಳು ಹಳ್ಳದ ನೀರಿನಲ್ಲಿ ಹೋಗುತ್ತಿದ್ದುದ್ದು ಕಂಡುಬಂದಿತು. ಅಹಾರ ಇಲಾಖೆಯವರು ಭೇಟಿ ನೀಡುವಷ್ಟರಲ್ಲಿ ವ್ಯವಸ್ಥಿತ ರೀತಿಯಲ್ಲಿ ಹಳ್ಳದಲ್ಲಿ ಬಿದ್ದ ಗೋಧಿ ಚೀಲಗಳು ನಾಪತ್ತೆಯಾಗಿವೆ. ಖಾಲಿಯಾದ ಚೀಲಗಳಿಂದ ಸಾಕಷ್ಟು ಪ್ರಮಾಣದ ಗೋಧಿ ಮಾತ್ರ ಹಳ್ಳದಲ್ಲಿ ಹರಿದಿರುವುದು ಸ್ಥಳವನ್ನು ಪರಿಶೀಲಿಸಿದಾಗ ಕಂಡು ಬಂದಿದೆ. ಗೋಧಿ ಮೂಟೆಗಳನ್ನು ಹಳ್ಳದಲ್ಲಿ ಎಸೆದ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಹಾರ ಇಲಾಖೆ ಶಿರಸ್ತೆದಾರ ಚನ್ನಬಸಪ್ಪ, ಆಹಾರ ನಿರೀಕ್ಷಕ ರಮೇಶ ತಾಳಕೇರಿ ಗೋಧಿಯ ಮಾದರಿ ಸಂಗ್ರಹಿಸಿದರು. ಈ ವಿಷಯದ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ” ತಿಳಿಸಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಿದ್ದು ಅದರ ನಿವಾರಣೆಗೆ ಸರ್ಕಾರ ಶಿಶು ಅಭಿವೃದ್ಧಿ ಯೋಜನೆ ಮೂಲಕ ಅಂಗನವಾಡಿಗಳಲ್ಲಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸುತ್ತಿದೆ. ಸಿದ್ಧರೂಪದ ಈ ಪೌಷ್ಟಿಕ ಆಹಾರ ಉತ್ಪನ್ನಗಳನ್ನು ಎಂಎಸ್‌ಪಿಟಿಸಿ ಘಟಕದ ಮೂಲಕ ಅಂಗನವಾಡಿಗಳಿಗೆ ತಲುಪಿಸಲಾಗುತ್ತದೆ. ಹಿಂದೆ ಈ ಗೋಧಿ ಈ ಘಟಕಕ್ಕೆ ಬರುತ್ತಿತ್ತು. ಈಗ ಮೌಲ್ಯವರ್ಧನೆಗೊಂಡ ಗೋಧಿ ಮೂಲದ ಪೂರಕ ಆಹಾರ ಎಂಎಸ್‌ಪಿಟಿಸಿಗೆ ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊಪ್ಪಳ | ದಶಕದ ಹಿಂದಿನ ಯಲ್ಲಾಲಿಂಗನ ಕೊಲೆ ಪ್ರಕರಣ: 9 ಆರೋಪಿಗಳ ಖುಲಾಸೆ

ಸ್ವಾಭಿಮಾನಿ ಕರವೇ ಅಧ್ಯಕ್ಷ ಮಾತನಾಡಿ, “ಕೊಪ್ಪಳ ಜಿಲ್ಲೆಯ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರಕಾರ ಅಂಗನವಾಡಿಗಳಲ್ಲಿನ ಮಕ್ಕಳಿಗೆ ಪೂರಕವಾದ ಪೌಷ್ಟಿಕ ಆಹಾರ ಒದಗಿಸುತ್ತಿದೆ. ಮಕ್ಕಳ ಹಾಗೂ ಮಹಿಳೆಯರಿಗೆ ಪೂರೈಕೆ ಆಹಾರ ಇವತ್ತು ಹಳ್ಳಕ್ಕೆ ಎಸೆದಿದ್ದು ಮಹಾಪರಾಧ. ಎಂಎಸ್‌ಪಿಟಿಸಿ ಕೇಂದ್ರದಲ್ಲಿ ಗೋಧಿಯನ್ನು ಬಳಕೆ ಮಾಡದೆ ನಿರ್ಲಕ್ಷ್ಯದಿಂದ ಹಾಳು ಮಾಡಿ ನಂತರ ಚೀಲಗಳನ್ನು ಹಳ್ಳದಲ್ಲಿ ಎಸೆದಿದ್ದಾರೆ. ಸಂಬಂಧಿಸಿದ ಇಲಾಖಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...