ತಾಯಿಯೇ ತನ್ನಿಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಕ್ಷ್ಮೀ ಹನುಮೇಶ್ ಭಜಂತ್ರಿ(30), ರಮೇಶ(3) ಹಾಗೂ ಸಾನ್ವಿ ಒಂದು ವರ್ಷದ ಹೆಣ್ಣು ಮಗುವನ್ನು ಕೊಂದು ತಾನೂ ನೇಣು ಬಿಗಿದುಕೊಂಡು 3 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲವಾದರೂ, ಕೌಟುಂಬಿಕ ಕಲಹವೇ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಕೇಳಿ ಬರುತ್ತಿದೆ. ಮೃತ ಲಕ್ಷ್ಮೀಯನ್ನು ಕೊಪ್ಪಳ ತಾಲೂಕಿನ ಕರ್ಕಿಹಳ್ಳಿಗೆ ಮದುವೆ ಮಾಡಿಕೊಡಲಾಗಿದ್ದು, ಮದುವೆಯಾದ ಮೇಲೆ ಗಂಡನೊಂದಿಗೆ ತವರೂರಾದ ಬೆಣಕಲ್‌ಗೆ ಬಂದು ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಈ ಸುದ್ಧಿ ಓದಿದ್ದೀರಾ? ಕೊಪ್ಪಳ | ದಲಿತ ಯುವಕನ ಮನೆಗೆ ಬೆಂಕಿ ಹಚ್ಚಿದವರ ವಿರುದ್ಧ ಕ್ರಮಕ್ಕೆ ಎಸ್‌ಎಸ್‌ಎಚ್‌ಎಸ್ ಆಗ್ರಹ
ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭಿಸಲಾಗಿದೆ. ಗ್ರಾಮದಲ್ಲಿ ಈ ಪ್ರಕರಣದಿಂದ ಶೋಕದ ವಾತಾವರಣ ಆವರಿಸಿಕೊಂಡಿದೆ.





