ಕೊಪ್ಪಳ | ವಿವಾಹೇತರ ಸಂಬಂಧ ಆರೋಪ; ತಾಯಿಯ ಸ್ನೇಹಿತನನ್ನು ಕೊಂದ ಯುವಕ ಬಂಧನ

Date:

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್‌ ಬಳಿ ಜುಲೈ 31ರಂದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾರಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾರಟಗಿ ತಾಲೂಕಿನ ಗುಡೂರು ಗ್ರಾಮದ ಗೌಡಪ್ಪ ಅಲಿಯಾಸ್‌ ಗರುಡಪ್ಪ (22) ಎಂದು ಗುರುತಿಸಲಾಗಿದೆ ಎಂದು ಎಸ್‌ಪಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

ಕೊಪ್ಪಳದ ಎಸ್‌ಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ಜುಲೈ 31ರಂದು ರಾತ್ರಿ ಸುಮಾರು 10-40 ರ ವೇಳೆಗೆ ಕಾರಟಗಿ ತಾಲೂಕಿನ ನಾಗನಕಲ್‌ ಬಳಿ ಕಾರಟಗಿಯ ನಜೀರಸಾಬ ಕಾಲೋನಿ ನಿವಾಸಿ ರಾಘವೇಂದ್ರರೆಡ್ಡಿ (36) ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಈ ಕುರಿತಂತೆ ರಾಘವೇಂದ್ರರೆಡ್ಡಿ ತಾಯಿ ಕಾರಟಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಲಂಚ ಸ್ವೀಕಾರ ಆರೋಪ; ವಸತಿಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣ ಕುರಿತಂತೆ ತನಿಖೆ ನಡೆಸಿದ ಕಾರಟಗಿ ಪೊಲೀಸರು ಗುಡೂರು ಗ್ರಾಮದ ಗೌಡಪ್ಪ ಅಲಿಯಾಸ್‌ ಗರುಡಪ್ಪ ಎಂಬ ಯುವಕನನ್ನು ಬಂಧಿಸಿದ್ದಾರೆ. ಮೃತ ರಾಘವೇಂದ್ರರೆಡ್ಡಿ ಗೌಡಪ್ಪನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಇದೇ ಕಾರಣಕ್ಕೆ ರಾತ್ರಿ ವೇಳೆ ರಾಘವೇಂದ್ರರೆಡ್ಡಿಯನ್ನು ನಾಗನಕಲ್‌ ಬಳಿ ಕಟ್ಟಿಗೆಯಿಂದ ಹೊಡೆದು ಗೌಡಪ್ಪ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯಿ ಬಿಟ್ಡಿದ್ದಾನೆ” ಎಂದರು.

“ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿ ಇದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...