ಕೊಪ್ಪಳ | ಸ್ಥಳೀಯ ಆಡಳಿತದ ನಿರ್ಲಕ್ಷ್ಯ; ಬಾಡಿಗೆ ಕಟ್ಟಲಾಗದ ಮಹಿಳೆ ಜೀವನ ಬೀದಿಯಲ್ಲಿ

Date:

ಸ್ವಂತ ಮನೆ ಇಲ್ಲದೆ, ಮನೆ ಬಾಡಿಗೆಯನ್ನೂ ಕಟ್ಟಲಾಗದೆ ಒಂಟಿ ಮಹಿಳೆಯೊಬ್ಬರು ಬೀದಿಯಲ್ಲಿ ವಾಸ ಮಾಡುತ್ತಿರುವ ವಿದ್ರಾವಕ ಘಟನೆ ಕೊಪ್ಪಳದ ಭಾಗ್ಯನಗರದಲ್ಲಿ ನಡೆದಿದೆ.

ಕೊಪ್ಪಳದ ತೆಗ್ಗಿನಕೇರಿ ಓಣಿಯಲ್ಲಿ ಬಾಡಿಗೆ ಮನೆಯಲ್ಲಿ ರತ್ನಮ್ಮ ಎಂಬಾಕೆ ವಾಸವಾಗಿದ್ದರು. ಈಕೆಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಮಗ ಮಾನಸಿಕ ಅಸ್ವಸ್ಥ, ಮತ್ತೊಬ್ಬ ಮಗ‌ ದುಶ್ಚಟಗಳ ದಾಸ. ಮನೆಕೆಲಸ ಮಾಡಿ ಬದುಕು ಸಾಗಿಸುತ್ತಿರುವ ಈ ಮಹಿಳೆಗೆ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ಕಳೆದ ಕೆಲ ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇವರನ್ನು 1 ವರ್ಷದಿಂದ ಬಾಡಿಗೆ ಕಟ್ಟದ ಕಾರಣ ಮಲೆ ಮಾಲಿಕರು ಹೊರ ಹಾಕಿದ್ದಾರೆ. ಇವರ ಜೀವನ ಸದ್ಯ ಬೀದಿಯಲ್ಲಿಯೇ. ಇಷ್ಟಾದರೂ ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ.

3 ದಿನಗಳಿಂದ ಭಾಗ್ಯನಗರ ರಸ್ತೆಯ ತಾಯಮ್ಮ ದೇವಸ್ಥಾನದ ಮುಂದೆ ರಸ್ತೆ ಪಕ್ಕದಲ್ಲಿ ಸಾಮಾನು ಸರಂಜಾಮುಗಳ ಜೊತೆ ರತ್ನಮ್ಮ ಕಾಲ ಕಳೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಕಚೇರಿ ವೇಳೆ ಬದಲಾದರೂ ಬದಲಾಗದ ನೌಕರರು

2023ರಲ್ಲಿ ನಗರಸಭೆ ಮುಂದೆ ತಿಂಗಳುಗಟ್ಟಲೆ ವಸತಿಹೀನರು ನಡೆಸಿದ ಆಶ್ರಯ ವಸತಿಗಾಗಿ ಹೊರಾಟದಲ್ಲಿಯೂ ಈ ಮಹಿಳೆ ಭಾಗವಹಿಸಿದ್ದಾರೆ. ಆದರೆ ಈವರೆಗೂ ಇವರಿಗೆ ನಿವೇಶನ ಸಿಕ್ಕಿಲ್ಲ. ಇವರ ನೆರವಿಗೆ ಶಾಸಕರು ಮತ್ತು ಆಡಳಿತ ಧಾವಿಸಬೇಕು ಎಂದು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು, ಸಂಜಯದಾಸ ಚನ್ನದಾಸರ ಇತರರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...