ಕೊಪ್ಪಳ | ಕೊಪ್ಪಳ-ಬೆಂಗಳೂರು ನಡುವೆ ನಾನ್ ಎಸಿ ಸ್ಲೀಪರ್ ಬಸ್; ಸೇವೆಗೆ ಹಸಿರು ನಿಶಾನೆ

Date:

ಕೆಕೆಆರ್‌ಟಿಸಿಯ ಕೊಪ್ಪಳ ವಿಭಾಗ ನೂತನ 4 ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್‌ಗಳನ್ನು ಕೊಪ್ಪಳ-ಬೆಂಗಳೂರು ಹಾಗೂ ಕೊಪ್ಪಳ-ಬೀದರ್ ಮಾರ್ಗದಲ್ಲಿ ಆರಂಭಿಸಿ ಕಲ್ಯಾಣ-ಕರ್ನಾಟಕ ಜನರಿಗೆ ಸಿಹಿ ಸುದ್ಧಿ ನೀಡಿದೆ. ಸೋಮವಾರ ಕೊಪ್ಪಳ ಬಸ್ ನಿಲ್ದಾಣದಲ್ಲಿ ಹೊಸ ಬಸ್ಸುಗಳ ಸಂಚಾರಕ್ಕೆ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, “ಕೊಪ್ಪಳ-ಬೆಂಗಳೂರು ಮತ್ತು ಕೊಪ್ಪಳ-ಬೀದರ್ ನಡುವೆ ಬಸ್ ಸಂಚಾರದಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಇದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಜಿಲ್ಲೆಯ ಜನರು ಇದರ ಸದುಪಯೋಗ ಪಡೆಯಬೇಕು” ಎಂದರು.

ಹೊಸ ಬಸ್ ಸೇವೆಗೆ ಹಸಿರು ನಿಶಾನೆ ತೋರಿಸಿದ ನಂತರ ಸಚಿವರು ಬಸ್ ಒಳಗಡೆ ಹೋಗಿ ಬಸ್ಸಿನ ಆಸನಗಳ ವ್ಯವಸ್ಥೆ ಹಾಗೂ ಅದರಲ್ಲಿರುವ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಬಸ್‌ಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋಗಬೇಕು ಮತ್ತು ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜನರಿಗೆ ಸೇವೆ ನೀಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು‌ ಓದಿದ್ದೀರಾ? ಹುಬ್ಬಳ್ಳಿ | ಬಾಲಕಿ ಕೊಂದ ಆರೋಪಿ ರಿತೇಶ್ ಎನ್‌ಕೌಂಟರ್; ಸರಿನಾ? ತಪ್ಪಾ? ಜನ ಏನಂತಾರೆ?!

ಬಸ್ ವೇಳಾಪಟ್ಟಿ

ಕೊಪ್ಪಳ ವಿಭಾಗಕ್ಕೆ 4 ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್ ಸಿಕ್ಕಿದ್ದು, ಅವುಗಳಲ್ಲಿ ಎರಡು ಕೊಪ್ಪಳ-ಬೆಂಗಳೂರು ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಈ ಬಸ್ಸುಗಳು ರಾತ್ರಿ 10 ಗಂಟೆಗೆ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಿಂದ ಹೊರಡಲಿದೆ. ಕೊಪ್ಪಳ- ಬೀದರ್ ನಡುವೆ 2 ಬಸ್ಸುಗಳು ಸಂಚಾರ ಮಾಡಲಿದ್ದು, ಕೊಪ್ಪಳದಿಂದ ರಾತ್ರಿ 8.25 ಬಸ್ ಹೊರಡಲಿದೆ. ಈ ಬಸ್‌ಗಳು ವಾರದ ಎಲ್ಲಾ ದಿನಗಳಲ್ಲಿ ಸಂಚರಿಸಲಿದ್ದು, ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...