ಕೊಪ್ಪಳ | ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ; ಎಲ್ಲೆಲ್ಲಿ?

Date:

ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಾಲ್‌ಗೆ ₹5,650ರಂತೆ ಬೆಂಬಲ ಬೆಲೆ ನೀಡಿ, ಎಕರೆಗೆ 4 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‌ ವರೆಗೆ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ, ಕನಕಗಿರಿ ತಾಲೂಕಿನ ನವಲಿ ಹಾಗೂ ಕನಕಗಿರಿ, ಕುಷ್ಟಗಿ ತಾಲೂಕಿನ ಹನುಮಸಾಗರ, ತಾವರಗೇರಾ(ಮೆಣೇದಾಳ) ಹಾಗೂ ಕುಷ್ಟಗಿ, ಕುಕನೂರು ತಾಲೂಕಿನ ಚಿಕ್ಕಿನಕೊಪ್ಪ, ಬನ್ನಿಕೊಪ್ಪ, ತಳಕಲ್, ಮುಡಲಗೇರಿ, ಕುಕನೂರಿನಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಯಲಬುರ್ಗಾ, ಮುಧೋಳ ಹಾಗೂ ತೊಂಡಿಹಾಳದಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಡಲ್ ಅಧಿಕಾರಿಗಳ ವಿವರ: ಕಡಲೆಕಾಳು ಖರೀದಿ ಕೇಂದ್ರಗಳಾದ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ ಖರೀದಿ ಕೇಂದ್ರಗಳಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ ಬಸವರಾಜ(ಮೊ ಸಂ: 9448765143) ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದೆ.

ನವಲಿ ಹಾಗೂ ಕನಕಗಿರಿ ಖರೀದಿ ಕೇಂದ್ರಕ್ಕೆ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹರೀಶ ಪತ್ತಾರ(ಮೊ.ಸಂ: 9060893320), ಕುಷ್ಟಗಿ ಹನುಮಸಾಗರ, ತಾವರಗೇರಾ(ಮೆಣೇದಾಳ) ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸುರೇಶ ಬಿ ತಂಗನೂರು(ಮೊ.ಸಂ:9880886909), ಚಿಕ್ಕಿನಕೊಪ್ಪ, ಬನ್ನಿಕೊಪ್ಪ, ತಳಕಲ್, ಮುಡಲಗೇರಿ, ಕುಕನೂರು ಹಾಗೂ ಯಲಬುರ್ಗಾ, ಮುಧೋಳ ಮತ್ತು ತೊಂಡಿಹಾಳದಲ್ಲಿ(ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ(ಮೊ.ಸಂ: 9972054874) ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.‌

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರದ ವಿರುದ್ಧ ಫೆ.10ರಂದು ರಾಜ್ಯಾದ್ಯಂತ ಸಂಯುಕ್ತ ಹೋರಾಟ: ಎಚ್ ಆರ್ ಬಸವರಾಜಪ್ಪ

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‌ವರೆಗೆ ಕಡಲೆಕಾಳು ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ(08539-230040)ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...