ಕೊಪ್ಪಳ | ಮರ ಕಡಿತ ಕಾರ್ಯಕ್ಕೆ ವಿರೋಧ; ನೆಲದಡಿ ವಿದ್ಯುತ್ ತಂತಿ ಅಳವಡಿಕೆಗೆ ಆಗ್ರಹ

Date:

ಕೆಲವೇ ದಿನಗಳಲ್ಲಿ ಮುಂಗಾರು ಮಳೆ, ಗಾಳಿ, ಗುಡುಗು ಹಾಗೂ ಸಿಡಿಲು ಆರಂಭವಾಗಲಿರುವ ಹಿನ್ನೆಲೆ, ವಿದ್ಯುತ್ ಇಲಾಖೆ ರಸ್ತೆಯ ಅಕ್ಕಪಕ್ಕ ಇರುವ ವಿದ್ಯುತ್ ತಂತಿಗಳಿಗೆ ತಾಗುವ ಮರಗಳನ್ನು ಕಡಿಯಲಿದ್ದಾರೆ. ಆದರೆ ಈ ಕ್ರಮ ಪರಿಸರ ಹಾನಿಗೆ ಕಾರಣವಾಗುತ್ತಿದೆ. ಹಾಗಾಗಿ ಮರಗಳನ್ನು ಉಳಿಸಿ, ವಿದ್ಯುತ್ ತಂತಿಗಳನ್ನು ನೆಲದಡಿ ಅಳವಡಿಸುವಂತೆ ಜನಪರ ಸಂಘಟನೆಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಎಸ್‌ ಎ ಗಫಾರ್ ಆಗ್ರಹಿಸಿದ್ದಾರೆ.

ನಗರದ ಎಲ್ಲಾ ರಸ್ತೆಗಳ ಎರಡೂ ಬದಿಗಳಲ್ಲಿರುವ ವಿದ್ಯುತ್ ಕಂಬಗಳ ತಂತಿಗಳನ್ನು ಭೂಮಿಯಡಿಯಲ್ಲಿ ಅಳವಡಿಸುವ ಯೋಜನೆ ಜಾರಿಗೆ ತರುವುದಲ್ಲದೆ, ನಗರದ ಎಲ್ಲಾ ರಸ್ತೆಗಳ ಎರಡೂ ಬದಿಗಳಲ್ಲಿ ಸಸಿ ನೆಡುವ ಮೂಲಕ ನಗರ ಹಸಿರೀಕರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಯೂ ಕಾಂಗ್ರೆಸ್ ಪಕ್ಷದವರಿದ್ದಾರೆ. ಈ ಯೋಜನೆ ರೂಪಿಸಿ ಜಾರಿಗೆ ತರಲು ಯಾವ ಅಡೆತಡೆಗಳೂ ಇಲ್ಲ. ನಿರ್ಲಕ್ಷ್ಯಕ್ಕೆ ಕಾರಣ ಏನು ತಿಳಿಯುತ್ತಿಲ್ಲ.‌ ಜನಪ್ರತಿನಿಧಿಗಳು ಒಂದೇ ಪಕ್ಷದವರೂ ಇದ್ದರೂ ಇಂತಹ ಅವಧಿಯಲ್ಲಿ ಅನೇಕ ಬೃಹತ್ ಯೋಜನೆಗಳನ್ನು ತರದೆ ಇದ್ದರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾದೀತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಇಬ್ಬರ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...