ಕೊಪ್ಪಳ | ಕಳಪೆ ಪಡಿತರ ವಿತರಣೆ; ಬಿಸಿಯೂಟದ‌ ಅಕ್ಕಿ, ಗೋದಿ, ಬೇಳೆ ಚೀಲಗಳಲ್ಲಿ ಜಡೆಗಟ್ಟಿದ ಹುಳುಗಳು

Date:

ಕೊಪ್ಪಳ ಜಿಲ್ಲೆಯ ಕನಕಗಿರಿಯ ಶಾಸಕರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಪದಾರ್ಥವಾಗಿ ಕಳಪೆ ಪಡಿತರ ವಿತರಣೆ ಮಾಡಿದ್ದು, ಬೇಳೆ, ಗೋದಿ ಅಕ್ಕಿಯಂತಹ ಪದಾರ್ಥಗಳು ಜಡೆಗಟ್ಟಿವೆ. ಕಳೆದ ಎರಡರಿಂದ ಮೂರು ತಿಂಗಳ ಹಿಂದೆ ಪೂರೈಸಿರುವ ಆಹಾರ ಸಾಮಗ್ರಿಗಳಲ್ಲಿ ಹುಳುಗಳು ಪಿತಗುಡುತ್ತಿವೆ.

ಕಳಪೆ ಪದಾರ್ಥಗಳಿಂದಲೇ ಆಹಾರ ತಯಾರಿಸಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದಾರೆ. ಈ ಕುರಿತು ಮುಖ್ಯೋಪಾಧ್ಯಾಯ ಸಂಗಮೇಶ್ ಹಿರೇಮಠ್‌ ಅವರನ್ನು ಕೇಳಿದರೆ ‘ಬಿಸಿಯೂಟದ ಅಧಿಕಾರಿಗಳು ಇವನ್ನೇ ಕಳುಸಿದ್ದಾರೆ. ನಾವೂ ಇದನ್ನೇ ಬೇಯಿಸಿ ಊಟಕ್ಕೆ ಬಡಿಸುತ್ತೇವೆʼ ಎಂದು ಬೇಜವಾಬ್ದಾರಿ ಮಾತು ಹೇಳಿದ್ದಾರೆ.

ಬಿಸಿಯೂಟದ ಅಧಿಕಾರಿಗಳು ಸಂಪರ್ಕಕ್ಕೆ ಹೋದರೆ ‘ಕೊಪ್ಪಳ ಜಿಲ್ಲಾಧಿಕಾರಿ ಆಫೀಸ್‌ನಲ್ಲಿ ಮೀಟಿಂಗ್ ಇರುತ್ತದೆ ನಮಗೆ ಬರಲು ಆಗುವುದಿಲ್ಲ. ಬೇರೆ ಅಧಿಕಾರಿಗಳನ್ನು ಕಳುಹಿಸಿಕೊಡುತ್ತೇವೆʼ ಎಂದು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ: ಡಿಸಿ ಶಿಲ್ಪಾ ನಾಗ್

“ತಾಲೂಕಿನ ಎಲ್ಲ ಶಾಲೆಗಳಲ್ಲಿ ಇದೇ ರೀತಿ ಕಳಪೆ ಆಹಾರ ಪೂರೈಕೆಯಾಗುತ್ತಿದ್ದು, ಇದನ್ನು ಅರಿತು ಮೇಲಧಿಕಾರಿಗಳು ಮುಖ್ಯ ಉಪಾಧ್ಯಾಯರು ಮತ್ತು ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪಾಮಣ್ಣ ಅರಳಿಗನೂರ ಒತ್ತಾಯಿಸಿದರು.

ಮುಖ್ಯೋಪದ್ಯಾಯ

ಪಟ್ಟಣ ಪಂಚಾಯತ್ ಸದಸ್ಯ ಶೇಷಪ್ಪ ಪೂಜಾರ್, ಎಸ್‌ಡಿಎಂಸಿ ಸದಸ್ಯರಾದ ವೆಂಕಟೇಶ್ ನೀರ್ಲೂಟಿ ಹನುಮಂತ್ ರೆಡ್ಡಿ, ಭೀಮೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...