ಕೊಪ್ಪಳ | ಸೇವಾ ನೂನ್ಯತೆ; ಓಲಾ ಎಲೆಕ್ಟ್ರಿಕ್ ವಾಹನ ಕಂಪನಿಗೆ ದಂಡ

Date:

ಓಲಾ ಎಲೆಕ್ಟ್ರಿಕ್ ವಾಹನ ಮಾರಾಟಗಾರರು ಗ್ರಾಹಕರಿಗೆ ಸೇವಾ ನ್ಯೂನತೆ ಎಸಗಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿ ಆದೇಶಿಸಿದೆ.

ಗಂಗಾವತಿಯ ಶ್ರೀಕಾಂತ ಬಸವನಗೌಡ ರಾಯಚೂರಿನ ಓಲಾ ಎಲೆಕ್ಟ್ರಿಕ್ ವಾಹನ ಮಾರಾಟಗಾರರಿಂದ ಓಲಾ ಎಲೆಕ್ಟ್ರಿಕ್‌ ವಾಹನ ಖರೀದಿಸಿದ್ದಾರೆ. ಖರೀದಿ ಸಲುವಾಗಿ 2024ರ ಜೂ. 23ರಂದು ರೂ. 19,499ಗಳ ಮುಂಗಡ ಪಾವತಿ ಮಾಡಿದ್ದಾರೆ. ಐಡಿಎಫ್‌ಸಿ ಬ್ಯಾಂಕಿನಲ್ಲಿ 85,000 ರೂಗಳ ಸಾಲ ಪಡೆದು, ವಾಹನ ಕಾಯ್ದಿರಿಸಲು ರೂ. 2000 ಹಾಗೂ ನೋಂದಣಿಗಾಗಿ ರೂ. 8519 ಸೇರಿ ಒಟ್ಟು ರೂ. 30,018 ಗಳನ್ನು ಪಾವತಿಸಿದ್ದಾರೆ. ವಾಹನಕ್ಕೆ ವಿಮೆ ಮಾಡಿಸುವ ಸಲುವಾಗಿ ಕಂಪನಿ ಮತ್ತೆ ರೂ. 6,232 ಗಳನ್ನು ಪೆಡೆದುಕೊಂಡಿದ್ದಾರೆ. ಬಳಿಕ ಜು.26ರಂದು ವಾಹನ ಸಂಖ್ಯೆ ಕೆ.ಎ.37/ಇ.ಎಸ್-2399 ನೋಂದಣಿಯಾದ ಬಗ್ಗೆ ಕಂಪನಿ ತಿಳಿಸಿದೆ. ಆದರೆ ವಾಹನ ನೀಡಿಲ್ಲ.

ಈ ಸಂಬಂಧ ಶ್ರೀಕಾಂತ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಆಯೋಗ ಎದುರುದಾರರಿಗೆ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ. ಇನ್ನಿಬ್ಬರು ಎದುರುದಾರರು ವಕೀಲರ ಮೂಲಕವೇ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲಿಸಿದ ಆಯೋಗದ ಅಧ್ಯಕ್ಷೆ ಜಿ.ಇ.ಸೌಭಾಗ್ಯಲಕ್ಷ್ಮೀ ಹಾಗೂ ಸದಸ್ಯ ರಾಜು.ಎನ್.ಮೇತ್ರಿ, ಎದುರುದಾರರು ಅನುಚಿತ ವ್ಯಾಪಾರ ಪದ್ಧತಿ ಅನುಸರಿಸಿರುವುದು ಹಾಗೂ ಸೇವಾ ನಿರ್ಲಕ್ಷ್ಯ ಎಸಗಿರುವುದು ಸಾಬೀತಾಗಿದೆ ಎಂದು ಪರಿಗಣಿಸುತ್ತಾ, ಎದುರುದಾರರಿಂದ ಉಂಟಾದ ಸೇವಾ ನ್ಯೂನತೆಗಾಗಿ ಹಾಗೂ ಅನುಚಿತ ವ್ಯಾಪಾರ ಪದ್ಧತಿಗಾಗಿ ಎದುರುದಾರರು ದೂರುದಾರರಿಂದ ಪಡೆದುಕೊಂಡ ವಾಹನ ಖರೀದಿ ಮೊತ್ತ ರೂ. 1,10,680 ಗಳನ್ನು ದೂರಿನ ದಿನಾಂಕದಿಂದ ಪಾವತಿಯಾಗುವವರೆಗೆ ವಾರ್ಷಿಕ ಶೇ. 6ರ ಬಡ್ಡಿ ಸಹಿತ ಹಾಗೂ ಮಾನಸಿಕ ಯಾತನೆಗಾಗಿ ರೂ.10,000 ಹಾಗೂ ದೂರಿನ ಖರ್ಚು ರೂ. 5,000 ಗಳನ್ನು ಪಾವತಿಸಲು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಮುಕ್ತ ವ್ಯಾಪಾರ ಒಪ್ಪಂದ; ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ವಿರೋಧ

ವಾಹನಕ್ಕೆ ಸಂಬಂಧಿಸಿದ ಆರ್.ಸಿ. ಮತ್ತು ಮಾಲಿಕತ್ವ ವರ್ಗಾವಣೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ಎದುರುದಾರರು ದೂರುದಾರರಿಗೆ ಪಾವತಿಸುವಂತೆ ಸೂಚನೆ ನೀಡಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...