ಕೊಪ್ಪಳ | ಕಣ್ಣುಗಳ ರಕ್ಷಣೆಗೆ ಆದ್ಯತೆ ನೀಡಿ: ಡಾ. ಲಿಂಗರಾಜ್

Date:

ದೇಹದ ಪ್ರಮುಖ ಅಂಗ ಕಣ್ಣು. ಅವುಗಳ ರಕ್ಷಣೆಗೆ ಆದ್ಯತೆ ಕೊಡಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ್‌ ಟಿ ಹೇಳಿದರು.

ಡಿಎಚ್‌ಒ ಕಚೇರಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ಎಂಎಂ ಜೋಶಿ ನೇತ್ರ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಿಂದ ಪತ್ರಕರ್ತರಿಗೆ ಉಚಿತ ಕಣ್ಣುಗಳ ತಪಾಸಣೆ ಹಾಗೂ ಕನ್ನಡಕ ವಿತರಣೆ ಮಾಡಲಾಯಿತು. ಆ ಪ್ರಯುಕ್ತ ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಶುಕ್ರವಾರ ಪತ್ರಕರ್ತರಿಗೆ ಕನ್ನಡಕ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಪತ್ರಕರ್ತರು ಸಮಾಜದ ಕಣ್ಣುಗಳು ಇದ್ದ ಹಾಗೆ. ಸಮಾಜದ ಎಲ್ಲರ ಕೆಲಸದ ವೈಖರಿ, ಸಾಧನೆಗಳನ್ನು ಒರೆಗೆ ಹಚ್ಚುವ ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆದ್ದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಯಾವುದೇ ಸುದ್ದಿ ಬರೆಯಬೇಕಾದರೆ ಅದರ ಖಚಿತತೆ ಖಾತ್ರಿ ಪಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ ಡಾ. ಪ್ರಕಾಶ ಎಚ್‌ ಮಾತನಾಡಿ, “ರಾಜ್ಯ ಸರ್ಕಾರ ಆರಂಭಿಸಿರುವ ಆಶಾಕಿರಣ ಯೋಜನೆಯಡಿ ಜಿಲ್ಲೆಯಲ್ಲಿ 13 ಕೇಂದ್ರಗಳನ್ನು ಆರಂಭಿಸಲಾಗಿದೆ. ಅಂಧತ್ವ ಮತ್ತು ದೃಷ್ಟಿ ದೋಷ ಮಹಿಳೆಯರಲ್ಲಿಯೇ ಹೆಚ್ಚು ಕಂಡುಬರುತ್ತದೆ. ಉತ್ತಮ ಆರೋಗ್ಯ ಸೇವೆಯಿಂದ ಮನುಷ್ಯನ ಜೀವಿತಾವಧಿ ಜಾಸ್ತಿ ಆಗುತ್ತಿದೆ. ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕೆಲಸ ಮಾಡಬೇಕು. ಸಾಮಾಜಿಕ ತಾಣಗಳಲ್ಲಿ ಹಂಚಿಕೆಯಾಗುವ ಆರೋಗ್ಯ ಸಲಹೆಗಳನ್ನು ಪಾಲಿಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಪತ್ರಕರ್ತರಿಗೆ ನೈತಿಕತೆ ಮುಖ್ಯ: ಶಿವಕುಮಾರ್ ಮೆಣಸಿನಕಾಯಿ

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಎಂ.ಎಂ. ಜೋಶಿ ನೇತ್ರ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಪ್ರತಿನಿಧಿ ವಿಕ್ರಂ, ಕೊಪ್ಪಳ ಮೀಡಿಯಾ ಕ್ಲಬ್‌ ಅಧ್ಯಕ್ಷ ರವೀಂದ್ರ ವಿ.ಕೆ., ಕಾರ್ಯದರ್ಶಿ ದತ್ತು ಕಮ್ಮಾರ, ಖಜಾಂಚಿ ಅನಿಲ ಬಾಚನಹಳ್ಳಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...