ಕೊಪ್ಪಳ | ಕಾರ್ಮಿಕ ವಿರೋಧಿ ಸಂಹಿತೆ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ

Date:

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕೊಪ್ಪಳ ಹಾಗೂ ಸಂಯುಕ್ತ ಹೋರಾಟ–ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಸರ್ಕಾರವು ಜಾರಿ ಮಾಡಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳ ರದ್ದತಿಗೆ ಒತ್ತಾಯಿಸಿ ಬುಧವಾರ ಕೊಪ್ಪಳದಲ್ಲಿ ಜೆಸಿಟಿಯು ಹಾಗೂ ಎಸ್‌ಕೆಎಂ ವತಿಯಿಂದ ನಗರದ ಕಾವ್ಯಾನಂದ ಪಾರ್ಕಿನಿಂದ ಮೆರವಣಿಗೆ ಹೊರಟು ಅಶೋಕ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸುತ್ತಿದ್ದ ವೇಳೆ ಕಾರ್ಮಿಕ ಮುಖಂಡರನ್ನು ವಶಕ್ಕೆ ಪಡೆದರು.

ಕಾರ್ಮಿಕ ಮುಖಂಡರು ಮಾತನಾಡಿ ಸಂಪತ್ತನ್ನು ಸೃಷ್ಟಿಸುವ ಶ್ರಮಜೀವಿಗಳನ್ನು ಶಾಶ್ವತವಾಗಿ ಗುಲಾಮರನ್ನಾಗಿಸುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಬೇಕು. ಕರ್ನಾಟಕ ಸರ್ಕಾರ ಈ ಸಂಹಿತೆಗಳನ್ನು ತಿರಸ್ಕರಿಸಬೇಕು. ಕನಿಷ್ಠ ವೇತನವನ್ನು ಅಂತಿಮಗೊಳಿಸಬೇಕು. ಯಾವುದೇ ರೀತಿಯ ಜಮೀನು ಭೂಸ್ವಾಧೀನ ಮಾಡಬಾರದುʼ ಎಂದು
ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ ನಾಲ್ಕು ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ 3 ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಹಾಗೂ ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ಜಾರಿಗೆ ತರಲಾಗುತ್ತದೆ. ಉನ್ನತಿಗೆ ಗಣಿಗಾರಿಕೆ ಲಾಭದ ಶೇ.50 ಪಾಲು ಬಳಕೆ ಖಾತ್ರಿಗೊಳಿಸಲು ಖನಿಜ ಮತ್ತು ಲೋಹಗಳ ಗಣಿಗಾರಿಕೆಯ ಕಾನೂನಿಗೆ ತಿದ್ದುಪಡಿ ಮಾಡಬೇಕುʼ ಎಂದರು.

ʼವಿದ್ಯುತ್‌ ತಿದ್ದುಪಡಿ ಮಸೂದೆ-2022 ವಾಪಸ್ಸು ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಅನುಪಾತದಲ್ಲಿ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ವಿದ್ಯುತ್ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ಸಮಗ್ರ ಸಾಲ ಮನ್ನಾ ಮತ್ತು ಬೆಳೆ ವಿಮೆ ಯೋಜನೆಗಳನ್ನು ಜಾರಿಗೆ ತರಬೇಕು. ಸಂಯುಕ್ತ ಕಿಸಾನ್ ಮೋರ್ಚಾಗೆ ನೀಡಿದ ಲಿಖಿತ ಭರವಸೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕುʼ ಎಂದು ಆಗ್ರಹಿಸಿದರು.

ʼಅರಣ್ಯ ನಿವಾಸಿಗಳನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡುವ ತಿದ್ದುಪಡಿಗಳನ್ನು ವಾಪಸ್ಸು ಪಡೆಯಬೇಕು.ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಾಯಿಸಿದ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಯೋಜನೆಗಳು, ಹೆರಿಗೆ ಸೌಲಭ್ಯಗಳು, ಜೀವ ಮತ್ತು ಅಂಗವೈಕಲ್ಯ ವಿಮೆ ನೀಡಬೇಕು ಹಾಗೂ ಇಎಸ್‌ಐ ಸೌಲಭ್ಯ ಸೇರಿದಂತೆ ಸಾಮಾಜಿಕ ಸುರಕ್ಷತೆ ಒದಗಿಸಬೇಕು. ಕಲ್ಯಾಣ ಮಂಡಳಿಗಳಿಗೆ ಬಜೆಟ್‌ನಲ್ಲಿ ಅನುದಾನ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಸರ್ಕಾರದ 2 ವರ್ಷಗಳ ಸಾಧನೆಯ ಪ್ರದರ್ಶನಕ್ಕೆ ಚಾಲನೆ: ಗಮನ ಸೆಳೆಯುವ ಸಿಎಂ ಸಿದ್ದರಾಮಯ್ಯ ಸೆಲ್ಫಿ ಪಾಯಿಂಟ್‌ !

ಗಾಳೆಪ್ಪ ಮುಂಗೋಲಿ, ಹನುಮೇಶ ಕಲ್ಮಂಗಿ, ಸುಂಕಪ್ಪ ಗದಗ್, ರಾಜು ಮುನಿರಾಬಾದ್, ಅಮರೇಶ್ ಡಾಣಿ, ಮಖಬೂಲ್ ರಾಯಚೂರು, ಅನ್ನಪೂರ್ಣ ಬೃಹನ್ಮಠ, ಶಿವಲೀಲಾ ಅಗಳಕೇರಾ, ಸಂಜಯ್ ದಾಸ್ ಕೌಜಗೇರಿ, ಬಸವರಾಜ್ ಕಂಠಿ, ಕರೀಮ್ ಪಾಶಾ ಗಚ್ಚಿನಮನಿ, ಮಲ್ಲಿಕಾರ್ಜುನ್ ಬೃಂಗಿ, ಕೊಟ್ರಮ್ಮ ಕೇಸಲಾಪುರ, ಸೈಯ್ಯದ್ ಅಬ್ದುಲ್ ಖಾದರ್ ಪೀರಝಾದೆ, ಜಿ.ಪಿ.ವಿಜಯ ಭಾಸ್ಕರ್ ರೆಡ್ಡಿ, ಬಸವರಾಜ, ಅಂಜಮ್ಮ, ಮಲ್ಲಮ್ಮ ಬಿಸರಹಳ್ಳಿ, ಜಾಫರ್ ಕುರಿ, ಶಾಬುದ್ದೀನ್ ಜವಳಗೇರಾ, ಮಂಗಳೇಶ್ ರಾಥೋಡ್ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...