ಕೊಪ್ಪಳ | ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Date:

ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅಮಿತ್ ಶಾ ದ್ವೇಷ ಭಾಷಣ ಮಾಡಿದ ಬಗ್ಗೆ ದೇಶದ ಮುಂದೆ ಕ್ಷಮೆ ಕೇಳಬೇಕು. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಹೊರಹಾಕು ಎಂದು ಒತ್ತಾಯಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಪಾರ್ಲಿಮೆಂಟ್‌ನಲ್ಲಿ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಹೇಳಿಕೆ ಕೊಟ್ಟಿರುವುದು ಹಾಗೂ ಕರ್ನಾಟಕದ ಚಳಿಗಾಲ ಅಧಿವೇಶನ ಸುವರ್ಣ ಸೌಧದಲ್ಲಿ, ಮಾಜಿ ಶಾಸಕ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ತುಚ್ಛವಾಗಿ ಮಾತನಾಡಿರುವುದು ಖಂಡನೀಯ. ಪದೇಪದೇ ಅಸಾಂವಿಧಾನಿಕ ಹೇಳಿಕೆಯನ್ನು ಬಿಜೆಪಿಯ ನಾಯಕರು ಕೊಡುತ್ತಿದ್ದಾರೆ. ಇದಕ್ಕೆ ಕಡಿವಾಣ ಬೀಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿ‌ಪಿ‌ಐ ಕೊಪ್ಪಳ ಜಿಲ್ಲಾಧ್ಯಕ್ಷ ಸಲೀಮ್ ಖಾದ್ರಿ, ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಂತಹ ಸಂವಿಧಾನದ ಅಡಿಯಲ್ಲಿ ಈ ದೇಶದ ಗೃಹ ಸಚಿವರಾಗಿದ್ದಾರೆ ಎಂಬುದನ್ನು ಮರೆಯಬಾರದು. ಆರ್‌ ಎಸ್ ಎಸ್ ಮತ್ತು ಸಂಘ ಪರಿವಾರದ ಮನುಸ್ಮೃತಿ ಪಾಲನೆ ಮಾಡುವವರಾಗಿರುವುದರಿಂದ ನಮ್ಮ ದೇಶದ ಸಂವಿಧಾನಕ್ಕೆ ಗೌರವ ಕೊಡುತ್ತಿಲ್ಲ. ಹೋರಾಟದ ಮೂಲಕವೇ ಮುಂದೊಂದು ದಿನ ಎಸ್‌ಡಿ‌ಪಿ‌ಐ ಇಂತಹವರಿಗೆ ತಕ್ಕ ಪಾಠ ಕಲಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
SDPI2

ಡಿಎಸ್ಎಸ್ ತಾಲೂಕು ಘಟಕದ ಅಧ್ಯಕ್ಷರಾದ ರಾಘು ಚಾಕ್ರಿ ಮಾತನಾಡಿ, “ಅಮಿತ್ ಶಾ ಗ್ರಹ ಮಂತ್ರಿ ಸ್ಥಾನಕ್ಕೇ ಲಾಯಕ್ಕಿಲ್ಲ. ಒಬ್ಬ ನಾಲಾಯಕ್ ಕೇಂದ್ರ ಸಚಿವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವುದಕ್ಕೂ ಯೋಗ್ಯತೆ ಇಲ್ಲ. ಅಂಬೇಡ್ಕರ್ ಜಗತ್ತಿನ ಒಬ್ಬ ಚಿಂತಕ ಮಾನವತಾವಾದಿ, ಸಾಮಾಜಿಕ ಹೋರಾಟಗಾರ. ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿ, ತಮ್ಮ ನೈಜ ಸಂಸ್ಕೃತಿ ತೋರಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಭಾರತೀಯ ಭೀಮ್ ಸೇನೆ ಜಿಲ್ಲಾಧ್ಯಕ್ಷ ಕಾಶಪ್ಪ ಛಲವಾದಿ ಮಾತನಾಡಿ, ಬಿಜೆಪಿಯ ನಾಯಕರು ದೇಶದಲ್ಲಿ ಮತ್ತು ರಾಜ್ಯದಲ್ಲಿ ಪದೇ ಪದೇ ಅಶಾಂತಿ ಉಂಟು ಮಾಡುತ್ತಿದ್ದಾರೆ. ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯ ಕುತಂತ್ರವನ್ನು ದಲಿತರು, ಅಲ್ಪಸಂಖ್ಯಾತರು ಅರ್ಥ ಮಾಡಿಕೊಳ್ಳದಿದ್ದರೆ, ಬರುವ ದಿನಗಳಲ್ಲಿ ಇವರಿಂದ ಬಾಬಾ ಸಾಹೇಬ್ ರಚಿಸಿದ ಕಾನೂ‌ನು ಬದಲಾಯಿಸಿ ಮನುಸ್ಮೃತಿ ಕಾನೂನು ಜಾರಿಗೆ ತರುತ್ತಾರೆ. ಆದ್ದರಿಂದ, ಶೋಷಿತರು ಎಚ್ಚೆತ್ತುಕೊಳ್ಳಬೇಕು. ಮುಂದಿನ ದಿನದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆಕೊಟ್ಟರು.

ಇದನ್ನು ಓದಿದ್ದೀರಾ? ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

ಪ್ರತಿಭಟನೆಯಲ್ಲಿ ಎಸ್‌ಡಿ‌ಪಿ‌ಐ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಸಾದಿಕ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಜಾಮುದ್ದಿನ್ ಮಾಳೆಕೊಪ್ಪ, ಉಪಾಧ್ಯಕ್ಷ ಫಾರೂಕ್ ಅತ್ತಾರ, ಎಸ್‌ಡಿ‌ಪಿ‌ಐ ಜಂಟಿ ಕಾರ್ಯದರ್ಶಿ ಅರ್ಷದ್ ಶೈಖ್, ದಲಿತ ಯುವ ಮುಖಂಡ ಪ್ರಕಾಶ್ ಬೆಲ್ಲದ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...