ಕೊಪ್ಪಳ | ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಎಸ್‌ಎಫ್‌ಐ ಆಗ್ರಹ

Date:

ಕೊಪ್ಪಳದ ಕುಷ್ಟಗಿ ತಾಲೂಕಿನ ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ, “ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಶಿಕ್ಷಣಕ್ಕಾಗಿ ಬರುತ್ತಾರೆ. ಆದರೆ ಅವರಿಗೆ ಸಮರ್ಪಕ ಬಸ್ ವ್ಯವಸ್ಥೆಯಿಲ್ಲದೇ ದಿನನಿತ್ಯ ಪರದಾಡುವ ಸ್ಥಿತಿ ಇದೆ. ಸಮಯಕ್ಕೆ ಸರಿಯಾಗಿ ಬಸ್ ಇಲ್ಲದೇ ಶಾಲಾ ಕಾಲೇಜುಗಳಿಗೆ ತಡವಾಗಿ ಹೋಗುವುದರಿಂದ ಶಾಲಾ ಕಾಲೇಜುಗಳಲ್ಲಿ ಹಾಜರಾತಿ ಕೊರತೆಯಿಂದ ಶಿಕ್ಷಣ ಕುಂಠಿತವಾಗಿದೆ. ಎಷ್ಟೋ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸುವ ಸಂದರ್ಭ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಗ್ರಾಮಕ್ಕೆ ಅಗತ್ಯ ಇರುವಷ್ಟು ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದರು.

ಹೋರಾಟದ ಸ್ಥಳಕ್ಕೆ ಡಿಪೋ ವಿಸ್ತರಣಾಧಿಕಾರಿಗಳು ಮತ್ತು ಎಎಸ್ಐ ಭೇಟಿ ನೀಡಿ ಕನಕೊಪ್ಪಕ್ಕೆ ಬಸ್ ಬಿಡುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು

ರಾಜ್ಯ ಸಹ ಕಾರ್ಯದರ್ಶಿ ಚಂದ್ರು ರಾಠೋಡ, ಮುಖಂಡರಾದ ಅನಿಲ್, ಶರಣು, ಬಸವರಾಜ್, ಉಮೇಶ, ಮಾರ್ಕಂಡಯ್ಯ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...