ಕೊಪ್ಪಳ | ಸಿಂಧನೂರು-ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಶರಣು ಪಾಟೀಲ್ ಆಗ್ರಹ

Date:

ಸಿಂಧನೂರು ಪಟ್ಟಣದಿಂದ ಹುಬ್ಬಳ್ಳಿಗೆ ಚಲಿಸುವ ರೈಲು ಬೋಗಿಗಳಲ್ಲಿ ಒಂದೊಂದೇ ಶೌಚಾಲಯವಿದ್ದು, ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಇದರಿಂದ ವೃದ್ಧರು, ಅನಾರೋಗ್ಯ ಪೀಡಿತರು ಹಾಗೂ ಎಲ್ಲ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಸಂಸದರು ಸಂಬಂಧಿಸಿದ ರೈಲ್ವೆ ಅಧಿಕಾರಿಗಳ ಜತೆ ಮಾತನಾಡಿ, ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಸಿಂಧನೂರು- ಹುಬ್ಬಳ್ಳಿ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಚಾಲಕ ‌ಶರಣು ಪಾಟೀಲ್ ಆಗ್ರಹಿಸಿದರು.

“ಸಿಂಧನೂರಿನಿಂದ ಹುಬ್ಬಳ್ಳಿಗೆ ಚಲಿಸುತ್ತಿರುವ ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್‌ ಟ್ರೈನ್ No: 17304 ರೈಲ್ವೆ ಬೋಗಿಯಲ್ಲಿ ಒಂದೇ ಶೌಚಾಲಯವಿದ್ದು, ಅದಕ್ಕೆ ‌ನೀರಿನ‌ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮೂಲಭೂತ ಸೌಕರ್ಯ ಕಲ್ಪಿಸಬೇಕು” ಎಂದು ರೈಲ್ವೆ ಅಧಿಕಾರಿಗಳು ಹಾಗೂ ಸಂಸದರನ್ನು ಒತ್ತಾಯಿಸಿದರು.

“ಸಿಂಧನೂರಿನಿಂದ ಹುಬ್ಬಳ್ಳಿಗೆ ನಿತ್ಯವೂ ಪ್ರಯಾಣ ಮಾಡುವ ಪ್ರಯಾಣಿಕರು, ವೃದ್ಧರು, ಅನಾರೋಗ್ಯದ ಸಮಸ್ಯೆಗಳಿಂದ ಬಳಲುತ್ತಿರುವವರು ಸೇರಿದಂತೆ ಸಾವಿರಾರು ಪ್ರಯಾಣಿಕರಿಗೆ ರೈಲಿನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದ್ದು, ಕಳೆದ ಎರಡ್ಮೂರು ತಿಂಗಳಿಂದ ಬೆಳಗಿನ ಜಾವ ಶೌಚಾಲಯ ಮತ್ತು ನೀರಿನ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಬಂಧಪಟ್ಟ ಸಚಿವರು, ಸಂಸದರು ರೈಲ್ವೆ ಇಲಾಖೆಯ ವ್ಯವಸ್ಥಾಪಕರೊಂದಿಗೆ ಮಾತನಾಡಿ, ಶೀಘ್ರದಲ್ಲಿ ಸಮಸ್ಯೆಗಳಿಗೆ ಸ್ಪಂದಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಇಲ್ಲದಿದ್ದರೆ ಕೊಪ್ಪಳ ಸಿಂಧನೂರು ರೈಲ್ವೆ ಪ್ರಯಾಣಿಕ ಹಿತರಕ್ಷಣಾ ಸಮಿತಿಯಿಂದ ರೈಲ್ವೆ ಇಲಾಖೆ ಅವ್ಯವಸ್ಥೆಯ ವಿರುದ್ಧ ರೈಲ್ವೆ ತಡೆ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ವಿಶೇಷ ಮಕ್ಕಳ ಆರೈಕೆ ನಮ್ಮ ಸಾಮಾಜಿಕ ಜವಾಬ್ದಾರಿಯ ಅಂಗ : ರೋಹನ್ ಫ್ರಾಂಕೋ

ಗ್ಯಾನಪ್ಪ ಕನ್ನುಪೇಟೆ, ಸುರೇಶ ಸಿಂಧನೂರ್, ಅಶೋಕ್ ಸಜ್ಜನ್, ಶರಣಬಸವ ವೀರಾಪುರ, ಚನ್ನಬಸವಸ್ವಾಮಿ ಸಿಂಧನೂರ್, ಸುರೇಶ ಸಜ್ಜನ್ ತುರ್ವಿಹಾಳ್, ಟಿ ವಿ ರಾಮನ್ ಗಂಗಾವತಿ, ಶ್ರೀದೇವಿ ಬೂದುಗುಂಪ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...