ಕೊಪ್ಪಳ | ಬೀದಿ ನಾಯಿ ಹಾವಳಿ; ಸುಪ್ರೀಂ ಕೋರ್ಟ್‌ ಆದೇಶ ಅನುಷ್ಠಾನಕ್ಕೆ ಅಧಿಕಾರಿಗಳ ವಿಶೇಷ ಸಭೆ

Date:

ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ರವರ ಅಧ್ಯಕ್ಷತೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಜರುಗಿತು.

ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಅವರು ಮಾತನಾಡಿ, “ಪಂಚಾಯತಿ ವ್ಯಾಪ್ತಿಯಲ್ಲಿರುವ ಪ್ರತಿ ಸಂಸ್ಥೆಯಿಂದ ಬೀದಿ ನಾಯಿಗಳ ಸಂಖ್ಯೆಯನ್ನು ಪಡೆಯಬೇಕು. ಒಂದು ವೇಳೆ ಬೀದಿ ನಾಯಿಗಳು ಇದ್ದಲ್ಲಿ ಸ್ಥಳಾಂತರಿಸಲು ಕೂಡಲೇ ಕ್ರಮವಹಿಸಿ ಸಂಬಂಧಿಸಿದವರಿಗೆ ನೋಟಿಸ್ ಮೂಲಕ ಮಾಹಿತಿ ನೀಡಬೇಕು. ಶಾಲೆ, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಸಂಸ್ಥೆಯ ಆವರಣಕ್ಕೆ ಬೀದಿ ನಾಯಿ ಪ್ರವೇಶಿಸದಂತೆ ಕಾಂಪೌಂಡ್ ನಿರ್ಮಾಣ, ತಂತಿ ಬೇಲಿ ನಿರ್ಮಾಣ ಇತ್ಯಾದಿ ಕ್ರಮವಹಿಸಬೇಕು” ಎಂದು ಸೂಚಿಸಿದರು.

“ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆ ಆದೇಶವನ್ನು ಈಗಾಗಲೇ ಹೊರಡಿಸಲಾಗಿರುತ್ತದೆ. ಒಂದು ವೇಳೆ ಬೀದಿ ನಾಯಿಗಳು ವಾಸ ಮಾಡಲು ಅವಕಾಶ ನೀಡಿದಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ಸಂಸ್ಥೆಗಳಿಂದಲೇ ಭರಿಸುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವ ಮೂಲಕ ನಗರ ಸ್ಥಳೀಯ ಸಂಸ್ಥೆಯವರು ಕ್ರಮವಹಿಸಬೇಕು” ಎಂದು ಆದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ ವಿಠ್ಠಲ್ ಚೌಗಲಾ ಮಾತನಾಡಿ, “ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ಬೀದಿ ನಾಯಿಗಳ ಹಾವಳಿ ತಪ್ಪಿಸುವ ಕುರಿತು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಉಲ್ಲಂಘನೆಯಾದರೆ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕೊಪ್ಪಳ | ಹಣವಾಳ ಪಿಡಿಒ ಅಮಾನತು

“ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವೆ ಇಲಾಖಾಧಿಕಾರಿ ವಿನೋದ್ ಮಾತನಾಡಿ, “ಗ್ರಾಮ ಪಂಚಾಯತಿ ಹಂತದಲ್ಲಿ ಬೀದಿ ನಾಯಿಗಳ ಕುರಿತು ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು, ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತಪ್ಪ ಎಚ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಗುಡಿ, ತಾಲೂಕ ಮಟ್ಟದ ಅಧಿಕಾರಿಗಳು, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವೆ ಇಲಾಖಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು‌ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...