ಕೊಪ್ಪಳ | ಗವಿಸಿದ್ದಪ್ಪ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎಸ್‌ಯು‌ಎಮ್ ಆಗ್ರಹ

Date:

ಕೊಪ್ಪಳ ನಗರದಲ್ಲಿ ಇತ್ತೀಚೆಗಷ್ಟೇ ನಡೆದ ಹತ್ಯೆ ಪ್ರಕರಣವು ತೀವ್ರ ಆತಂಕಕ್ಕೊಳಪಡಿಸಿದೆ. ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಪ್ರೀತಿ ವಿಚಾರಕ್ಕೆ ಹತ್ಯ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ನೊಂದ ಕುಟುಂಬಕ್ಕೆ ನ್ಯಾಯಬೇಕು ಎಂದು ಸೋಲಿಡಾರಿಟಿ ಯೂತ್ ಮೂಮೆಂಟ್ ಕೊಪ್ಪಳ ಘಟಕ ಆಗ್ರಹಿಸಿದೆ.

ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಮ‌ ಎಲ್ ಅರಸಿದ್ದಿ ಅವರಿಗೆ ಮನವಿ ಸಲ್ಲಿಸಿದರು. ತಪ್ಪಿತಸ್ಥರು ಬಂಧಿತರಾಗಿದ್ದಾರೆ ಎಂಬುದು ಸಂತೋಷದ ವಿಷಯವಾಗಿದ್ದರೂ ಈ ಘಟನೆಯು ಶಾಂತಿ, ಕಾನೂನು ಹಾಗೂ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಪರಿಣಾಮ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್‌ಯುಎಮ್‌ ಒತ್ತಾಯಿಸಿದೆ.

ಆರೋಪಿಗಳಲ್ಲಿ ಗಾಂಜಾ ಸೇವನೆ ಬಗ್ಗೆ ಶಂಕೆ ವ್ಯಕ್ತವಾಗಿದೆ. ನಗರದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಪ್ರಕರಣದಲ್ಲಿ ಯಾವುದೇ ಸಮುದಾಯವನ್ನು ಉದ್ದೇಶಿಸಿ ತಪ್ಪು ಪ್ರಚಾರ ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಮುಖಂಡರು ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ಓರ್ವ ಆರೋಪಿ ಶರಣಾಗತಿ

ಈ ವೇಳೆ ಸೋಲಿಡಾರಿಟಿ ಯೂತ್ ಮೂಮೆಂಟ್‌ನ ಜಿಲ್ಲಾಧ್ಯಕ್ಷ ಎಜಾಜ್ ಅಹ್ಮದ್ ಶರೀಫ್, ಕಾರ್ಯದರ್ಶಿ ಮಹ್ಮದ್ ಯೂಸೂಫ್, ಸದಸ್ಯರಾದ ಮಹ್ಮದ್ ಗೌಸ್ ಪಟೇಲ್, ರಹಮತ್ ಹುಸೇನ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...