ಕೊಪ್ಪಳ | ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ಕಾರ್ಯ; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಲವು ಭಾಗಗಳಲ್ಲಿ ಸರ್ಕಾರ‌ ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ನಡೆಸುತ್ತಿರುವುದರಿಂದ ಸ್ಥಳೀಯರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾವತಿಯ ಚಿಕ್ಕಬೆಣಕಲ್‌-ಎಡೇಹಳ್ಳಿ ಬಳಿ ಕೇಂದ್ರ ಸರ್ಕಾರವು ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಮುಂದಾಗಿದ್ದು, ಸರ್ವೇ ಕಾರ್ಯ ನಡೆಸುತ್ತಿದೆ. ಹಾಗಾಗಿ ಸಾರ್ವಜನಿಕರು, ಇತಿಹಾಸಕಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ಮೂರು ಸಾವಿರ ವರ್ಷಗಳ ಇತಿಹಾಸವಿರುವ ಶಿಲಾ ಶಾಸನಗಳಿರುವ ಸ್ಥಳಗಳಲ್ಲಿ ಅಣುಸ್ಥಾವರಕ್ಕೆ ಸರ್ವೇ ನಡೆಸಿರುವುದು ಖಂಡನೀಯ” ಎಂದಿದ್ದಾರೆ.

“ಕೊಪ್ಪಳ ಜಿಲ್ಲೆಯ ಅರಸಿನಕೇರಿ ಭಾಗದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಜಿಲ್ಲಾಡಳಿತ ಭೂಮಿ ಹುಡುಕಾಟ ನಡೆಸಿತ್ತು. ಆ ಭಾಗದಲ್ಲಿ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈಗ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್-ಎಡೇಹಳ್ಳಿ ಮಾರ್ಗದ ಬಳಿ 1,200 ಎಕರೆ ಭೂಮಿಯನ್ನು ಗುರುತಿಸಿದ್ದು, ಅಣುಸ್ಥಾವರಕ್ಕೆ ಮುಂದಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಪ್ಪಳ ಜಿಲ್ಲಾಡಳಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ತ್ವರಿತಗತಿಯಲ್ಲಿ ಪ್ರಕ್ರಿಯೆ ನಡೆಸಬೇಕೆಂಬ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಗಳು ಮೂರು ದಿನಗಳ ಕಾಲ ಸರ್ವೇ ನಡೆಸಿದ್ದಾರೆ. ಸರ್ವೇ ಮಾಡಿದ ದಾಖಲೆಗಳನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಚಿಕ್ಕಬೆಣಕಲ್-ಎಡೆಹಳ್ಳಿ ಮಾರ್ಗದ ಬಳಿ ತ್ವರಿತಗತಿಯಲ್ಲಿ ಸರ್ವೇ ಮಾಡಲಾಗಿದೆ. 1200 ಎಕರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದ್ದರೂ ಅವಶ್ಯಕತೆ ಬಿದ್ದರೆ ಮುಕ್ಕುಂಪ, ಎಡೆಹಳ್ಳಿ, ಚಿಕ್ಕಬೆಣಕಲ್, ಹಿರೇಬೆಣಕಲ್, ಲಿಂಗದಳ್ಳಿ, ಹೇಮಗುಡ್ಡ ಸೇರಿದಂತೆ 10 ಕಿಮೀ ವ್ಯಾಪ್ತಿಗೆ ಬರುವ ಗ್ರಾಮಗಳ ರೈತರ ಭೂಮಿಯನ್ನೂ ಅಣುಸ್ಥಾವರ ಸ್ಥಾಪನೆಗೆ ಪಡೆದುಕೊಳ್ಳಲು ಸರ್ಕಾರ ಮುಂದಾಗಿದೆ” ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ರಸ್ತೆಯಲ್ಲಿ ತಲೆಬುರಡೆ, ಎಲುಬುಗಳನ್ನಿಟ್ಟು ಮೌಢ್ಯಾಚರಣೆ; ಸಾರ್ವಜನಿಕರಲ್ಲಿ‌ ಆತಂಕ

“ಐತಿಹಾಸಿಕ ಹಿನ್ನೆಲೆ ಇರುವ ಚಿಕ್ಕಬೆಣಕಲ್‌ನಲ್ಲಿ ಜಾಗ ಗುರುತು ಮಾಡಿ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್- ಎಡೇಹಳ್ಳಿ ಮಾರ್ಗದ ಸನಿಹದ ಅರಣ್ಯ ಇಲಾಖೆಗೆ ಸಂಬಂಧಿಸಿದ 1200 ಎಕರೆ ಭೂಮಿಯನ್ನು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಸರ್ವೇ ಮಾಡಲಾಗಿದೆ. ಈ ಕುರಿತು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ದಾಖಲೆ ಸಲ್ಲಿಸಲಾಗಿದೆ” ಎಂದು ಗಂಗಾವತಿ ತಹಶೀಲ್ದಾ‌ರ್ ಯು ನಾಗರಾಜ್ ಮೌಖಿಕವಾಗಿ ತಿಳಿಸುತ್ತಿದ್ದಂತಯೇ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...