ಕೊಪ್ಪಳ | ದೇವದಾಸಿ ಪುನರ್ವಸತಿ ಯೋಜನೆಯ ಅನುದಾನ ವಾಪಸ್;‌ ಕರ್ತವ್ಯ ಲೋಪದ ಕುರಿತು ನಿಂಗು ಬೆಣಕಲ್ ಆರೋಪ

Date:

ದೇವದಾಸಿ ಪುನರ್ವಸತಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದೇ ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ್ದು, ಅನುದಾನ ಸರ್ಕಾರಕ್ಕೆ ವಾಪಸ್‌ ಹೋಗಿದೆ ಎಂದು ಕರ್ನಾಟಕ ಭೀಮ್ ಆರ್ಮಿ ಏಕತಾ ಮಿಷನ್, ‌ಕೊಪ್ಪಳ ಜಿಲ್ಲಾ ಸಮಿತಿ ಅಧ್ಯಕ್ಷ ನಿಂಗು ಬೆಣಕಲ್ ಆರೋಪಿಸಿದರು.

ಕೊಪ್ಪಳ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, “ಅಭಿವೃದ್ಧಿ ನಿರಿಕ್ಷಕರು ಹಾಗೂ ಯೋಜನಾಧಿಕಾರಿಗಳು, ದೇವದಾಸಿ ಪುನರ್ವಸತಿ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿ ಪೂರ್ಣಿಮಾ ಅವರು ಅಧಿಕಾರ ವಹಿಸಿಕೊಂಡಾಗಿನಿಂದಲೂ ದೇವದಾಸಿ ನಿರ್ಮೂಲನೆ ಬಗ್ಗೆ ಈವರೆಗೆ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಕಾಟಾಚಾರಕ್ಕೆ ವರ್ಷಕ್ಕೆ ಒಂದು ಬಾರಿ ಕಚೇರಿಯಲ್ಲಿಯೇ ಸಭೆ ಮಾಡಿ ವರ್ಷಪೂರ್ತಿ ಕುಳಿತು ಸಮಯ ಕಳೆಯುತ್ತಾರೆ” ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

“ದೇವದಾಸಿ ಆಚರಣೆ, ಮುತ್ತು ಕಟ್ಟುವ ಪದ್ಧತಿಯ ಪ್ರಮುಖ ಸ್ಥಳವಾದ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿ ಹುಣಿಮೆ ಮತ್ತು ಮಂಗಳವಾರ, ಶುಕ್ರವಾದಂದು ಲಕ್ಷಾಂತರ ಮಂದಿ ಸೇರುತ್ತಾರೆ. ಅಂತಹ ಸಂದರ್ಭಗಳಲ್ಲಿ ದೇವರ ಹೆಸರಿನಲ್ಲಿ ಮುತ್ತು ಕಟ್ಟಿ ದೇವದಾಸಿ ಮಾಡುವ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನಾಧಿಕಾರಿಗಳು ಯಾವುದೇ ಜಾಗೃತಿ ಕಾರ್ಯಕ್ರಮಗಳನ್ನು ಮಾಡದೆ ಕಾಲಹರಣ ಮಾಡುತ್ತಿದ್ದಾರೆ. ಕರಪತ್ರಗಳನ್ನು ಹಂಚುವುದಾಗಲಿ, ಬ್ಯಾನರ್, ಗೋಡೆ ಬರಹದ ಮೂಲಕ ಜಾಗೃತಿ ಮೂಡಿಸುವುದಾಗಲೀ ಮಾಡುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ದೇವದಾಸಿ ತಾಯಂದಿರು ಅವರ ಮಕ್ಕಳಿರುವ ಗ್ರಾಮಗಳಿಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಹಾಗೂ ದೇವದಾಸಿಯಂತಹ ಅನಿಷ್ಟ ಪದ್ಧತಿಗಳ ಕುರಿತು ಅರಿವು ಅಥವಾ ಜಾಗೃತಿ ಮೂಡಿಸುವ ವಾಹನಕ್ಕೂ ಸರ್ಕಾರ ಅನುದಾನ ಮೀಸಲಿಟ್ಟದೆ. ಆದರೂ ಕೂಡ ಅನುದಾನವನ್ನು ಬಳಸದೇ ಅಥವಾ ಖರ್ಚು ಮಾಡದೆ ಸಕಾರಣವಿಲ್ಲದೇ ಅನುದಾನವನ್ನು ಮರಳಿಸಿದ್ದಾರೆ. ಇದು ಅಧಿಕಾರಿಗಳ ಅಸಡ್ಡೆತನ ಮತ್ತು ಕರ್ತವ್ಯ ಲೋಪವಾಗಿದೆ. ಇಂತಹ ಬೇಜವಾಬ್ದಾರಿ ಅಧಿಕಾರಿ ಪೂರ್ಣಿಮಾ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು” ಎಂದು ದಾಖಲೆಗಳ ಸಹಿತ ಜಿಲ್ಲಾಧಿಕಾರಿಗೆ ಮನವಿ ನೀಡಿ ಆಗ್ರಹಿಸಿದರು.

“ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ಹಿಸುತ್ತಿರುವ ಸಿಬ್ಬಂದಿಗಳ ಗೌರವಧನ ನೀಡುತ್ತಿರುವ ಸಂಸ್ಥೆಯೊಂದಿಗೆ ಹಣ ಪಡೆದು, ತಮಗೆ ಪರಿಚಿತರೊಂದಿಗೆ ಶಾಮಿಲಾಗಿದ್ದು, ದಾಖಲೆ ನಿರ್ವಹಿಸುವ ಉದ್ಧೇಶದಿಂದ ದರಪಟ್ಟಿ ಆಹ್ವಾನಿಸಿ ವಾರ್ತಾ ಇಲಾಖೆಗೆ ಪ್ರಕಟಣೆ ನೀಡದೆ ತಾಲೂಕು ಕಚೇರಿಯ ಸೂಚನಾ ಫಲಕಕ್ಕೆ ನೇಮಕಾತಿ ಆದೇಶ ಪ್ರತಿ ಅಂಟಿಸಿ ಇಲಾಖೆಯ ದೃಢೀಕರಣ ಪಡೆಯದೆ ನಿಯಮಬಾಹಿರವಾಗಿ ಅನರ್ಹ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಬೆಂಗಳೂರಿನ ಸಂಸ್ಥೆಗೆ ಆದೇಶ ನೀಡಿ ಭ್ರಷ್ಟಾಚಾರ ಮಾಡಿದ್ದಾರೆ” ಎಂದರು.

“ಬೇಜವಾಬ್ದಾರಿ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಹದಿನೈದು ವರ್ಷದ ಬಾಲಕಿಯು ಮುತ್ತು ಕಟ್ಟಿಕೊಂಡು ದೇವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಸುತ್ತಾಡುತ್ತಿದ್ದಾಳೆ. ಮೇಘರಾಜ ಸಾ ಅಗಳಕೇರಿಯವರ ಹದಿನೈದು ವರ್ಷದ ಮಗಳು ಲತಾ ಎಂಬ ಬಾಲಕಿಯನ್ನು ದೇವದಾಸಿಯನ್ನಾಗಿ ಮಾಡಿ ಮುತ್ತು ಕಟ್ಟಿದವರನ್ನಾಗಲಿ ಅದಕ್ಕೆ ಪ್ರಚೋದನೆ ನೀಡಿದವರ ಮೇಲಾಗಲಿ ಕಾನೂನು ಕ್ರಮ ಜರುಗಿಸುವಲ್ಲಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದು, ಇವರನ್ನು ಕೂಡಲೇ ತುರ್ತಾಗಿ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮಲೆನಾಡಿನ ಅರಣ್ಯ ಕಾಯ್ದೆ, ಭೂಮಿ-ವಸತಿ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಸಂಸದ ಶ್ರೇಯಸ್ ಪಟೇಲ್

“ದಾಖಲೆಗಳ ಸಹಿತ ದೂರು ಸಲ್ಲಿಸಿದ್ದೇವೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಯಾದ್ಯಂತ ದೇವದಾಸಿ ವಿಮೋಚನಾ ಮಹಿಳಾ ಸಂಘಟನಾಕಾರರು ಹಾಗೂ ಮಾಜಿ ದೇವದಾಸಿ ತಾಯಂದಿರನ್ನು ಒಗ್ಗೂಡಿಸಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ತೀವ್ರ ಹೋರಾಟ ಮಾಡಲಾಗುವುದು” ಎಂದು ಭೀಮ್ ಆರ್ಮಿ‌ ಜಿಲ್ಲಾ ಮುಖಂಡ ಮಾಂತೇಶ ಮ್ಯಾಗಳಮನಿ ಎಚ್ಚರಿಕೆ ನೀಡಿದರು.

ನಿಂಗರಾಜ ಜಿ ಎಸ್ ಬೆಣಕಲ್, ಕರಿಯಪ್ಪ ಮಣ್ಣಿನವರ, ಯುನೂರಪ್ಪ ಬಣಕಾರ, ಯಲ್ಲಪ್ಪ ಸಣ್ಣಿಂಗನವರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...