ಕೊಪ್ಪಳ | ರಸ್ತೆ ತುಂಬಾ ಗುಂಡಿಗಳದ್ದೇ ದರ್ಬಾರ್; ಸ್ಥಳೀಯರಿಗೆ ನಿತ್ಯ ಧೂಳಿನ ಮಜ್ಜನ

Date:

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುಖ್ಯ ರಸ್ತೆಯ ಸ್ಥಿತಿ ಅಯೋಮಯವಾಗಿದೆ. ದಂಡಿ ದಂಡಿ ಗುಂಡಿಗಳು ಬಿದ್ದು ವಾಹನ ಸವಾರರಿಗೆ, ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿ ಮುಂಗಟ್ಟುಗಳು ನಿತ್ರ ಧೂಳಿನ ಮಜ್ಜನ ಮಾಡುವಂತಾಗಿದೆ.

“ಕಲ್ಯಾಣ ಕರ್ಣಾಟಕದ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ತಂದಿದ್ದರೂ ಅದರ ಸದ್ಬಳಕೆ ಮಾತ್ರ ಆಗುತ್ತಿಲ್ಲ. ಅನುದಾನವೆಲ್ಲಾ ಯಾರ್ಯಾರದ್ದೋ ಜೇಬು ಸೇರುತ್ತಿದೆ. ಹೀಗಾದರೆ ಗುಂಡಿ ಮುಚ್ಚುವವರಾದರೂ ಯಾರು? ಧೂಳಿನಲ್ಲೆ ಜೀವನ ನಡೆಸುತ್ತಿರುವ ನಮ್ಮಂತವರ ಗೋಳು ಕೇಳೋಕೂ ಯಾರು ಇಲ್ಲ” ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಕೊಪ್ಪಳದಿಂದ ಮುಂಡರಗಿಗೆ ಹೋಗುವ ವಾಹನಗಳ ಸವಾರರು ವಾಹನ ಚಲಾಯಿಸುವಾಗ ಬರುವ ಧೂಳಿನ ಘಾಟಿಗೆ ಮೂಗು, ಕಣ್ಣು ಮುಚ್ವಿಕೊಂಡು ಚಲಾಯಿಸಬೇಕು. ರಸ್ತೆಯ ಎರಡೂ ಪಕ್ಕದಲ್ಲಿರುವ ಹೋಟೆಲ್, ಬೇಕರಿ, ತಂಪು-ಪಾನೀಯ ಹಾಗೂ ಕಿರಾಣಿ ಅಂಗಡಿಗಳ ಮಾಲಿಕರು ಗಂಟೆಗೊಂದು ಸಾರಿ ಸ್ವಚ್ಛತೆಯಲ್ಲಿ ತೊಡಗಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 31 at 12.38.37 PM

ವಾಹನಗಳ ದಟ್ಟಣೆ ಹೆಚ್ಚಾದಂತೆ ಸುಸಜ್ಜಿತ ರಸ್ತೆಗಳು ನಿರ್ಮಾಣವಾಗಬೇಕು. ಆದರೆ, ಇಲ್ಲಿ ಮಾತ್ರ ವಾಹನಗಳ ಒಡಾಟ ಹೆಚ್ಚಾದಂತೆಲ್ಲ ರಸ್ತೆಗಳ ಗುಂಡಿಗಳೂ ಹೆಚ್ಚಾಗುತ್ತಿವೆ. ಗ್ರಾಮ ಪಂಚಾಯತಿ, ಲೋಕೋಪಯೋಗಿ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆಯೇ? ಎನ್ನುವುದು ಅಳವಂಡಿ ಗ್ರಾಮದಲ್ಲಿ ಹಾದು ಹೋಗುವ ಪ್ರಯಾಣಿಕರ ಪ್ರಶ್ನೆಯಾಗಿದೆ.

ರಸ್ತೆ ಡಾಂಬರ್ ಕಂಡು ಎಷ್ಟೋ ವರ್ಷಗಳೇ ಕಳೆದಿವೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದರೂ, ಅಳವಂಡಿ ಗ್ರಾಮದ ರಸ್ತೆ ದುರಸ್ತಿ ಮಾಡುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿರುವುದು ಸಾರ್ವಜನಿಕರಿಗೆ ಕಾಣದೇ ಇಲ್ಲ. ಬೇಸಿಗೆಯಲ್ಲಿ ಧೂಳು ಮೂಗಿಗೆ ರಾಚಿದರೆ, ಮಳೆಗಾಲದಲ್ಲಿ ಕೆಸರಿಗೆ ಕಾಲು ಜಾರಿ ಬಿದ್ದು ಸೊಂಟ ಮುರಿದುಕೊಂಡೋ, ಕಾಲು ಮುರಿದುಕೊಂಡೋ ಮನೆಮುಳ್ಳರಾಗಿ ಬೀಳುವ ದುಸ್ಥಿತಿ.

ಸ್ಥಳೀಯ ನಿವಾಸಿ ಯೋಗೇಶ್ ಬೀಸನಳ್ಳಿ ಈದಿನ ಡಾಟ್ ಕಾಮ್ನೊಂದಿಗೆ ಮಾತನಾಡಿ, “ತಗ್ಗು ಬಿದ್ದಿರೊ ರಸ್ತೆಗಳ ಬಗ್ಗೆ ಮಾತಾಡಿದ್ರ ಅಪ್ರಾಧರೀ ಇಲ್ಲಿ. ಮೂಲ ಸೌಲಭ್ಯದ ಬಗ್ಗೆ ಮಾತಾಡಿದ್ರ, ಪ್ರಶ್ನೆ ಮಾಡಿದ್ರ. ‘ನೀನೊಬ್ಬ ಹೆಚ್ಚಾಗಿದ್ದಿ ಬಾ.. ದೇಶ ನಿನ್ನಿಂದ್ಲೆ ಉದ್ಧಾರ ಆಗದ’ ಅಂತ ಲೇವ್ಡಿ ಮಾಡ್ತಾರ. ಹಿಂಗಿರಬೇಕಾದ್ರ ಊರ ಉಸಾಬರಿ ನಮ್ಗ್ಯಾಕ್? ಅಂತ ಸುಮ್ನಿರತೇವಿರೀ.. ಆದ್ರ, ನಮ್ಗ ಕುಡಿಯಾಕ್ ನೀರ್ ಸಿಗ್ದಿದ್ರೂ ಧೂಳ ಅಂತೂ ಫ್ರೀ ಸಿಗ್ತೈತ್ರಿ ಅದ್ನ ಕುಡಿತೇವ್ರಿ” ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2025 03 31 at 12.49.29 PM

ಕೊಪ್ಪಳ ಜಿಲ್ಲಾ ಎಎಪಿ ಮಾಧ್ಯಮ ಸಂಯೋಜಕ ಶರಣು ಶೆಟ್ಟರು ಮಾತನಾಡಿ, “ಕೊಪ್ಪಳ ತಾಲೂಕಿನ ಶಾಸಕರು ಹಾಗೂ ಜಿಲ್ಲೆಯ ಅಧಿಕಾರಿಗಳು ಕಳೆದು ಹೋಗ್ಯಾರ. ಪೋಲಿಸ್‌ರು ಹುಡುಕಿಕೊಡಬೇಕು. ಧಾರ್ಮಿಕ ಆಚರಣೆಯಾದ ಹೋಳಿ ಆಚರಿಸಲು ಶಾಸಕರು ಲಕ್ಷಾಂತರ ರೂಪಾಯಿ ಖರ್ಚು ಮಾಡಿದರು. ಹೋಳಿ ಹುಣ್ಣಿಮೆಯಂದು ಕುಡಿದು ಕುಣಿದು ಕುಪ್ಪಳಿಸುವ ಯುವಕರು ಜೊತೆ ಶಾಸಕರೂ ಕುಣಿದು ಕುಪ್ಪಳಿಸಿದರು. ಆದರೆ, ತಾಲೂಕಿನ ರಸ್ತೆ ಗುಂಡಿಗಳ ಮುಚ್ಚುವಲ್ಲಿ ಶಾಸಕರು ಗಮನ ಹರಿಸಲಿಲ್ಲ. ನಮ್ಮ ಶಾಸಕರಿಗೆ ಧಾರ್ಮಿಕ ನಂಬಿಕೆಗಳ ಮೇಲೆ ಇದ್ದ ಕಾಳಜಿ ತಾಲೂಕಿನ ಅಭಿವೃದ್ಧಿಯ ಮೇಲೆ ಇಲ್ಲ ಎಂಬುದಕ್ಕೆ ಇದು ಸಾಕ್ಷಿ” ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

ಅಳವಂಡಿ ಗ್ರಾಮ ಪಂಚಾಯತಿ ಪಿಡಿಒ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕರೆ ಮೂಲಕ ಸಂಪರ್ಕಿಸಲಾಯಿತು; ಆದರೆ, ಸಂಪರ್ಕಕ್ಕೆ ಸಿಗದಿರುವಷ್ಟು ಅವರು ಕಾರ್ಯನಿರತರಾಗಿದ್ದರು. ಇನ್ನಾದರೂ ಶಾಸಕರು, ಸಂಸದರು ಹಾಗೂ ಲೋಕೋಪಯೋಗಿ ಇಲಾಖೆ ಎಚ್ಚೆತ್ತುಕೊಳ್ಳುತ್ತ ಎಂದು ಕಾದು ನೋಡಬೇಕು.

WhatsApp Image 2025 02 05 at 18.09.20 2
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...