ಕೊಪ್ಪಳ | ಬಿಎಸ್‌ಪಿಎಲ್ ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ: ಸಂಸದ ಹಿಟ್ನಾಳ್

Date:

ಕೊಪ್ಪಳದ ಬಲ್ಡೋಟಾ ವಿಸ್ತರಣೆ ಹಾಗೂ ಬಿಎಸ್‌ಪಿಎಲ್, ಎಮ್‌ಎಸ್‌ಪಿಎಲ್ ಕಾರ್ಖಾನೆಗಳು ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ಕೆ ರಾಜಶೇಖರ್‌ ಹಿಟ್ನಾಳ್‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆಯ ಆಹ್ವಾನದ ಮೇರೆಗೆ ಕಾರ್ಖಾನೆಗಳ ವಿರುದ್ಧ ಹೋರಾಟದ ಬಗ್ಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, “ಕಾರ್ಖಾನೆಗಳ ಹೊಗೆ ಹಾಗೂ ಧೂಳಿನಿಂದ ಈಗಾಗಲೇ 25-30 ಹಳ್ಳಿಗಳ ಪರಿಸರ ನಾಶ ಆಗಿ ಅಲ್ಲಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕೊಪ್ಪಳ ಇರಬೇಕು ಇಲ್ಲವೇ ಬಲ್ಡೋಟಾ ಕಾರ್ಖಾನೆ ಇರಬೇಕು. ಈ ಹೋರಾಟ ಹೀಗೆ ಮುಂದುವರೆಯಲಿ, ಇದಕ್ಕೆ ಶಾಸಕರು ಹಾಗೂ ನಾನು ಸಂಪೂರ್ಣವಾದ ಬೆಂಬಲ ಕೊಡುತ್ತೇವೆ” ಎಂದರು.

ಜನಪ್ರತಿನಿಧಿಗಳೊಂದಿಗೆ ಸಂವಾದ ಮಾಲಿಕೆಯಲ್ಲಿ ಮುಂದೆ ಶಾಸಕ ರಾಘವೇಂದ್ರ ಹಿಟ್ನಾಳ್ ಅವರೊಡನೆ ಜಂಟಿ ಹೋರಾಟ ಸಮಿತಿಯಿಂದ ಸಂವಾದ ನಡೆಸಲಾಗುವುದು. ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳು ಸರ್ಕಾರದಿಂದ
ಬಲ್ಡೋಟಾ ಕಂಪನಿ ವಿಸ್ತರಣೆ ಮಾಡದಂತೆ ಪತ್ರ ತರಬೇಕೆಂದು ಕೊಪ್ಪಳ ಜನತೆಯ ಪರವಾಗಿ ಆದೇಶಿಸಿದ್ದರು. ಸರಕಾರದಿಂದ ತಾತ್ಕಾಲಿಕ ತಡೆ ನೀಡಲಾಗಿದೆ. ಪೂರ್ಣ ಪ್ರಮಾಣದಲ್ಲಿ ತಡೆ ನೀಡಬೇಕೆಂಬುದು ನಾಗರಿಕರ ಕೋರಿಕೆಯಾಗಿದೆ. ಸ್ವಾಮಿಗಳು ಜನಪ್ರತಿನಿಧಿಗಳನ್ನು ಈ ಹಿನ್ನೆಲೆಯಲ್ಲಿ ಪ್ರಶ್ನಿಸಬೇಕೆಂದು ಜನತೆಯ ಆಶಯವಾಗಿದೆ. ಎಂದು ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ಸಮಿತಿ ವೇದಿಕೆ ಅಭಿಪ್ರಾಯಕ್ಕೆ ಬರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಎಸ್‌ಎಫ್‌ಐ ಆಗ್ರಹ

ಅಲ್ಲಮಪ್ರಭು ಬೆಟ್ಟದೂರು, ಬಸವರಾಜ್ ಶೀಲವಂತರ, ಡಿ‌ಎಮ್ ಬಡಿಗೇರ, ಮಹಾಮತೇಶ ಕೊತಬಾಳ, ಕೆ.ಬಿ ಗೊನಾಳ ಶರಣು ಶೆಟ್ಟರ, ಶರಣು ಗಡ್ಡಿ, ಶರಣು ಪಾಟೀಲ, ಮಂಜುನಾಥ ಗೊಂಡಬಾಳ, ಮುದಕಪ್ಪ ಹೊಸಮನಿ, ಸೋಮರಡ್ಡಿ ಅಳವಂಡಿ, ರಾಜು ಬಾಕಳೆ, ಡಾ. ಮಂಜುನಾಥ ಸಜ್ಜನ್, ಎಸ್.ಎ.ಗಫಾರ್, ಗವಿಸಿದ್ದಪ್ಪ ಹಲಗಿ, ಹನುಮಂತಪ್ಪ ಗೊಂದಿ, ಮಲ್ಲಪ್ಪ ಬಂಡಿ, ಶಾಂತಪ್ಪ ಅಂಗಡಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...