ಕೊಪ್ಪಳ | ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ​​ ಸ್ಫೋಟ; ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರ ಮೆಚ್ಚುಗೆ

Date:

ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ​​ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್​​ ಕೊಪ್ಪಳದಿಂದ ಗಂಗಾವತಿಯತ್ತ ಸಂಚರಿಸುತ್ತಿದ್ದಾಗ ಬಸ್ಸಿನ ಮುಂಭಾಗದ ಚಕ್ರ ಸ್ಫೋಟಗೊಂಡಿದೆ. ನಿಯಂತ್ರಣ ತಪ್ಪಿದ ಬಸ್ಸನ್ನು ಚಾಲಕ ಮಂಜುನಾಥ ಗಾಣಿಗೇರ ಅವರು ಕೂಡಲೇ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಪರಿಣಾಮ ಬಸ್​​ ಸುಮಾರು 100 ಮೀಟರ್‌ಗೂ ಹೆಚ್ಚು ದೂರ ತೆವಳಿಕೊಂಡು ಹೋಗಿ ನಿಂತಿದೆ. 20 ಮಂದಿ ಪ್ರಯಾಣಿಕರ ಪ್ರಾಣ ಕಾಪಾಡಿದ್ದಾರೆ.‌

ಬಸ್ಸಿನ ಚಕ್ರ ಸ್ಪೋಟ

ಬಸ್ಸಿನ ಚಕ್ರ ಸ್ಫೋಟಗೊಳ್ಳುವ ಕೆಲವೇ ನಿಮಿಷಕ್ಕೂ ಮುನ್ನ ಇದೇ ರಸ್ತೆಯಲ್ಲಿ ಸಚಿವ ಶಿವರಾಜ ತಂಗಡಗಿ ಹಾಗೂ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ತೆರಳಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ನೀಡಲಿ: ತೋಟದ

“ಟೈರ್​ ಸ್ಫೋಟಗೊಂಡ​ ಸಂದರ್ಭದಲ್ಲಿ ಬಸ್​​ನ ಹಿಂದೆ ಅಥವಾ ಎದುರು ಯಾವುದಾದರೂ ವಾಹನಗಳು ಬಂದಿದ್ದರೆ ಊಹಿಸಲಾಗದ ಅಪಾಯ ಉಂಟಾಗುತ್ತಿತ್ತು. ಯಾವುದೇ ವಾಹನಗಳಿಲ್ಲದೆ, ಖಾಲಿ ರಸ್ತೆ ಇದ್ದಿದ್ದರಿಂದ ಬೇರೆ ರೀತಿಯ ಅಪಘಾತಗಳು ಸಂಭವಿಸಿಲ್ಲ” ಎಂದು ಪ್ರಯಾಣಿಕರೊಬ್ಬರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...