ಕೊಪ್ಪಳ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಲ್ಲ 10 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂಬುದು ವದಂತಿ ಎಂದು ಜಿಲ್ಲಾ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಕವಲೂರು ಸ್ಪಷ್ಟೀಕರಣ ನೀಡಿದ್ದಾರೆ.
ಗಣಿ, ಭೂ ವಿಜ್ಞಾನ ಇಲಾಖೆಯ 10 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಶಾಸಕ ಬಸವರಾಜ್ ರಾಯರೆಡ್ಡಿ ಶಿಫಾರಸು ಮಾಡಿರುವ ಬಗ್ಗೆ ಅಕ್ಟೋಬರ್ 18ರಂದು ವಿವಿಧ ಮಾಧ್ಯಮಗಳು ಹಾಗೂ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟಗೊಂಡ ವಿಷಯಕ್ಕೆ ಪೂರಕವಾಗಿ, ಇಲಾಖೆ ಅಧಿಕಾರಿಗಳ ವರ್ಗಗದಿಂದ ಬಂದಿದೆ ಎನ್ನಲಾದ ಸಹಿ ಇಲ್ಲದ ಅನಾಮಧೇಯ ಪತ್ರದ ಕುರಿತಂತೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸುಳ್ಳುಸುದ್ಧಿ ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್ ಭಾವಚಿತ್ರ ವಿರೂಪ, ಬುದ್ಧ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳು
“ಅನಾಮಧೇಯ ಮನವಿ ಪತ್ರದಲ್ಲಿ 20 ಅಂಶಗಳ ಕುರಿತು ಪ್ರಶ್ನೆಗಳನ್ನು ನಮೂದಿಸಿದ್ದು, ಈ ಬಗ್ಗೆಯೂ ವಿವಿಧ ಸುದ್ದಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿತ್ತು. ಆದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಬಂದಿದೆ ಎನ್ನಲಾದ ಹಾಗೂ ಸಹಿ ಇಲ್ಲದ ಅನಾಮಧೇಯ ಮನವಿ ಪತ್ರಕ್ಕೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ. ಈ ವಿಷಯವನ್ನು ಜಿಲ್ಲಾ ಕಚೇರಿಯಿಂದ ಹೊರಡಿಸಿರುವುದಿಲ್ಲ” ಎಂದು ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.





