ಕೊಪ್ಪಳ | ಒಂದು ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ಕಿತ್ತಾಟ; ಏನಿದು ಪ್ರಕರಣ?

Date:

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಕಳೆದ ನಾಲ್ಕು ದಿನಗಳಿಂದ ಕಿತ್ತಾಟ ನಡೆಯುತ್ತಿದೆ. ಹುದ್ದೆಯಿಂದ ಅಮಾನತಾಗಿ, ಅಮಾನತು ಆದೇಶಕ್ಕೆ ತಡೆಯಾಜ್ಞೆ ತಂದಿರುವ ತಿಪ್ಪಣ್ಣ ಸರಸಗಿ ಮತ್ತು ಹುದ್ದೆಗೆ ಹೊಸದಾಗಿ ನಿಯೋಜನೆಯಾಗಿದ್ದ ಪಿ.ವೈ ಶೆಟ್ಟಪ್ಪನವರ ನಡುವೆ ಹುದ್ದೆಗಾಗಿ ಕಿತ್ತಾಟ ನಡೆದಿದೆ. ಆದರೆ, ಈವರೆಗೆ ಪರಿಹಾರ ದೊರೆತಿಲ್ಲ.

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾಗಿದ್ದ ತಿಪ್ಪಣ್ಣ ಸರಸಗಿ ಅವರನ್ನು ಕರ್ತವ್ಯಲೋಪದ ಆರೋಪಿದ ಮೇಲೆ 2024ರ ಅಕ್ಟೋಬರ್ 3ರಂದು ಅಮಾನತು ಮಾಡಲಾಗಿತ್ತು. ಅವರ ಅಮಾನತಿನಿಂದ ತೆರವಾದ ಹುದ್ದೆಗೆ ಪಿ.ವೈ ಶೆಟ್ಟಪ್ಪ ಅವರನ್ನು ನಿಯೋಜನೆ ಮಾಡಲಾಗಿತ್ತು.

ಆದರೆ, ತಮ್ಮನ್ನು ಅಮಾನತು ಮಾಡಿರುವುದು ಮತ್ತು ತಮ್ಮ ಹುದ್ದೆಗೆ ಬೇರೆಯವರನ್ನು ನಿಯೋಜಿಸಿರುವುದನ್ನು ಪ್ರಶ್ನಿಸಿ ತಿಪ್ಪಣ್ಣ ಅವರು ಬೆಳಗಾವಿ ‘ಕೆಎಟಿ’ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು 2025ರ ಜನವರಿ 20ರಂದು ವಿಚಾರಣೆ ನಡೆಸಿದ ಕೆಎಟಿ, ಅಮಾನತು ಆದೇಶವನ್ನು ರದ್ದುಪಡಿಸಿತ್ತು. ಮಾತ್ರವಲ್ಲದೆ, ಬೇರೆಯವರನ್ನು ನಿಯೋಜಿಸಿರುವುದು ತಪ್ಪು ಎಂದು ತೀರ್ಪು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಟಿ ತೀರ್ಪು ಬಂದ ಬೆನ್ನಲ್ಲೇ, ತಿಪ್ಪಣ್ಣ ಕರ್ತವ್ಯಕ್ಕೆ ಹಾಜರಾಗಲು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕಚೇರಿಗೆ ಬಂದಿದ್ದಾರೆ. ಆದರೆ, ಅವರಿಗೆ ಅಧಿಕಾರ ಹಸ್ತಾಂತರಿಸಲು ಶೆಟ್ಟಪ್ಪ ನಿರಾಕರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಶಸ್ತ್ರಾಸ್ತ್ರ ಖರೀದಿ ಹೆಚ್ಚಿಸುವಂತೆ ಮೋದಿಗೆ ತಾಕೀತು: ಭಾರತದ ಮೇಲೆ ನಿಯಂತ್ರಣ ಸಾಧಿಸುತ್ತಿದ್ದಾರೆಯೇ ಟ್ರಂಪ್?

“ತಿಪ್ಪಣ್ಣ ಅವರ ಅಮಾನತು ಆದೇಶ ರದ್ದಾಗಿರಬಹುದು. ಆದರೆ, ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಮತ್ತು ತಾವು ಎಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಯಾವುದೇ ಸೂಚನೆ, ಆದೇಶ ಬಂದಿಲ್ಲ. ಸರ್ಕಾರದಿಂದ ಆದೇಶ ಬಾರದೆ ಅಧಿಕಾರ ಹಸ್ತಾಂತರಿಸಲು ಸಾಧ್ಯವಿಲ್ಲ. ಸರ್ಕಾರ ಆದೇಶ ನೀಡಿದರೆ ತಿಪ್ಪಣ್ಣಗೆ ಅಧಿಕಾರ ವಹಿಸಿಕೊಡುತ್ತೇನೆ” ಎಂದು ಶೆಟ್ಟಪ್ಪ ವಾದಿಸಿದ್ದಾರೆ. ತಮ್ಮ ಕರ್ತವ್ಯ ಮುಂದುವರೆಸಿದ್ದಾರೆ.

ಆದರೆ, ನಾಲ್ಕು ದಿನಗಳಿಂದ ಕಚೇರಿಗೆ ಬಂದು, ವಾಪಸ್‌ ಹೋಗುತ್ತಿದ್ದ ತಿಪ್ಪಣ್ಣ, ಇದೀಗ ಏಕಾಏಕಿ ಉಪನಿರ್ದೇಶಕರ ಕಚೇರಿಗೆ ನುಗ್ಗಿದ್ದು, ಉಪನಿರ್ದೇಶಕರ ಸೀಟಿನ ಮೇಲೆ ಕುಳಿತುಕೊಂಡಿದ್ದಾರೆ. ಹೀಗಾಗಿ, ಇಬ್ಬರು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ರತ್ನಂ ಪಾಂಡೆಯ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...