ಕೊಪ್ಪಳ | ಅನಧಿಕೃತವಾಗಿ ಕೆರೆ ಒತ್ತುವರಿ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Date:

ಸಾರ್ವಜನಿಕರಿಗೆ, ಜಾನುವಾರುಗಳಿಗೆ ಇದ್ದ ಬಸಾಪುರ ಕೆರೆಯನ್ನು ಬಲ್ಡೋಟಾ ಕಂಪನಿ ಆಕ್ರಮಿಸಿಕೊಂಡಿದ್ದು, ಇದನ್ನು ಸಾರ್ವಜನಿಕಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಎಮ್‌ಎಸ್‌ಪಿಎಲ್ ಉಕ್ಕಿನ ಕಾರ್ಖಾನೆ ವಿಸ್ತರಣೆ ಚುರುಕಾಗಿ ನಡೆದಿದ್ದು, 44.35 ಕೆರೆಯ ಜಾಗ ಅನಧಿಕೃತವಾಗಿ ಒತ್ತುವರಿ ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ ಕೆರೆಯನ್ನು ಜಾನುವಾರುಗಳಿಗೆ ಮುಕ್ತಗೊಳಿಸುವಂತೆ ಜಾನುವಾರುಗಳನ್ನು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

ಬಳಿಕ ಕಾರ್ಖಾನೆ ಜಾಗದ ಬಳಿ ತೆರಳಿ ಅಲ್ಲಿ ಮೇಕೆ ಹಾಗೂ ಆಡುಗಳನ್ನು ನುಗ್ಗಿಸಿ ಕೆರೆ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು. ಆಗ ಕಾರ್ಖಾನೆಯ ಭದ್ರತಾ ಸಿಬ್ಬಂದಿ ಹಾಗೂ ಜಾನುವಾರುಗಳ ಮಾಲೀಕರ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ವಿದ್ಯಾರ್ಥಿ ಅಂಕಪಟ್ಟಿ, ಟಿಸಿ ಕೊಡದ ವಾಸವಿ ಶಾಲೆ ಮುಖ್ಯಶಿಕ್ಷಕ ಫಕ್ಕೀರಪ್ಪ ಎಮ್ಮಿನವರ: ಪಾಲಕರ‌ ಪರದಾಟ

ಈದಿನ.ಕಾಮ್ನೊಂದಿಗೆ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಬಸಾಪುರ ಕೆರೆ ಸಾರ್ವಜನಿಕರದ್ದು, ಆ ಕೆರೆಯ ನೀರು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಮುಕ್ತಗೊಳಿಸಬೇಕು. ಗ್ರಾಮದ ಹತ್ತಿರ ಸರ್ವೇ ಸಂಖ್ಯೆ 143ರಲ್ಲಿ 44.35 ಕೆರೆಯ ಜಾಗ ಬಲ್ಡೋಟಾ ಕಂಪನಿ ಅತಿಕ್ರಮಿಸಿಕೊಂಡು ಸುತ್ತಲೂ ಅತಿಕ್ರಮವಾಗಿ ಕಾಂಪೌಂಡ್ ನಿರ್ಮಿಸಿಕೊಂಡಿದೆ. ಈ ಕೂಡಲೇ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಕೆರೆಯನ್ನು ಸಾರ್ವಜನಿಕ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...