ಕೊಪ್ಪಳ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧ ಆರೋಪ ಸಾಬೀತು; ಗುರುವಾರ ಶಿಕ್ಷೆ ಪ್ರಕಟ

Date:

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ವಸತಿ ಪ್ರದೇಶಕ್ಕೆ ನುಗ್ಗಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿಮ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮತ್ತು ಅಸ್ಪೃಷ್ಯತೆ ಆಚರಣೆ ಮಾಡಿದ್ದ ಪ್ರಕರಣ 9 ವರ್ಷಗಳ ಹಿಂದೆ ನಡೆದಿತ್ತು. ಪ್ರಕರಣದಲ್ಲಿ 101 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಮತ್ತು ವಿಚಾರಣೆಯಲ್ಲಿ ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ಅಕ್ಟೋಬರ್ 24ರಂದು ಗುರುವಾರ ನ್ಯಾಯಾಲಯವು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಿದೆ ಎಂದು ವರಿಯಾಗಿದೆ.

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, 101 ಆರೋಪಿಗಳನ್ನು ಅಪರಾಧಿಗಳು ಎಂದು ಸೋಮವಾರ ಘೋಷಿಸಿದ್ದಾರೆ. ಗುರುವಾರ ಶಿಕ್ಷೆ ಪ್ರಕಟಿಸುವುದಾಗಿ ಹೇಳಿದ್ದು, ತೀರ್ಪು ಕಾಯ್ದಿರಿಸಿದ್ದಾರೆ.

2015ರಲ್ಲಿ ಮುರುಕುಂಬಿ ಗ್ರಾಮದಲ್ಲಿ ಕ್ಷೌರದಂಗಡಿ, ಹೋಟೆಲ್‌ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಈ ವಿಚಾಋವಾಗಿ ಪ್ರಬಲ ಜಾತಿಗಳು ಮತ್ತು ದಲಿತರ ನಡುವೆ ಜಗಳವಾಗಿತ್ತು. ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು. ಪ್ರಕರಣ ದಾಖಲಾದ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ದಲಿತರ ಮೇಲೆ ಹಲ್ಲೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮದ 117 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ನಡುವೆ ಕೆಲ ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ 101 ಮಂದಿಯ ವಿರುದ್ಧ ಅರೋಪ ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದ 100 ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...