ಕೊಪ್ಪಳ | ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧಕ್ಕೆ ಗ್ರಾಮಸ್ಥರ ಸಭೆ; ಶನಿವಾರದವರೆಗೆ ಮದ್ಯ ಮಾರಾಟ ನಿಲ್ಲಿಸಲು ಗಡುವು

Date:

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧ ಕುರಿತು ಗ್ರಾಮಸ್ಥರು ಹಾಗೂ ಗ್ರಾಮ ಹಿರಿಯರನ್ನು ಒಳಗೊಂಡ ವಿಶೇಷ ಸಭೆ ಸೋಮವಾರ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಮದ್ಯಪಾನದಿಂದ ಉಂಟಾಗುತ್ತಿರುವ ಕುಟುಂಬ ಕಲಹ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಸಂಕಷ್ಟ ಹಾಗೂ ಯುವಜನರ ಭವಿಷ್ಯಕ್ಕೆ ಬೀರುವ ದುಷ್ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯ ಸರ್ವಾನುಮತ ನಿರ್ಣಯದಂತೆ, ಗ್ರಾಮದಲ್ಲಿ ಇನ್ನು ಮುಂದೆ ಮದ್ಯ ಸಂಪೂರ್ಣವಾಗಿ ನಿಷೇಧಿಸಲು ತೀರ್ಮಾನಿಸಲಾಗಿದ್ದು, ಪ್ರಸ್ತುತ ಮದ್ಯ ಮಾರಾಟ ನಡೆಸುತ್ತಿರುವ ಅಂಗಡಿಗಳಿಗೆ ಶನಿವಾರದವರೆಗೆ ಸ್ವಯಂಪ್ರೇರಿತವಾಗಿ ಮಾರಾಟ ನಿಲ್ಲಿಸುವಂತೆ ಗಡುವು ನೀಡಲಾಗಿದೆ.

ಗ್ರಾಮದ ಶಾಂತಿ, ಸಾಮಾಜಿಕ ನೆಮ್ಮದಿ ಹಾಗೂ ಮಹಿಳೆಯರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ರಾಮಸ್ಥರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ನಿರ್ಣಯವನ್ನು ಕಾನೂನುಬದ್ಧವಾಗಿ ಜಾರಿಗೆ ತರಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೇವದುರ್ಗ | ರಾಜಾರೋಷ ಅವ್ಯವಹಾರ ಪ್ರಶ್ನಿಸಿದಕ್ಕೆ ಶಾಸಕಿ ಬೆಂಬಲಿಗರಿಂದ ಬೆದರಿಕೆ; ವಿಶ್ವನಾಥ ಆರೋಪ

ಸಭೆಯಲ್ಲಿ ಊರಿನ ಹಿರಿಯರು, ಮಹಿಳೆಯರು, ಮಕ್ಕಳು ಹಾಗೂ ಯುವಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...