ಕೊಪ್ಪಳ | ಅಂತರ್ಜಾತಿ ಯುವತಿ ವಿವಾಹವಾಗಿದ್ದ ಯುವತಿಯ ಕೊಲೆ ಖಂಡಿಸಿ ‘ವಿಠಲಾಪುರ ಚಲೋ’ ಕಾಲ್ನಡಿಗೆ ಜಾಥಾ

Date:

ಕೊಪ್ಪಳ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ವಿಠಲಾಪುರ ಚಲೋ ಜಾಥಾವು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು.

ವಿಠಲಾಪುರ ಗ್ರಾಮದಿಂದ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಡಿವೈ ಎಸ್ ಪಿ ಸಿದ್ಧಲಿಂಗಪ್ಪ ಗೌಡ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಲಿತ ಮುಖಂಡ ಕರಿಯಪ್ಪ ಗುಡಿಮನಿ, “ಪ್ರೀತಿಸಿ ,ನಂಬಿಸಿ ವಿವಾಹವಾಗಿ ಆಕೆಯನ್ನು ಮಾದಿಗ ಜಾತಿ ಸೇರಿದ ಕಾರಣಕ್ಕೆ ವಿಷವುಣಿಸಿ ಹತ್ಯೆ ಮಾಡಲಾಗಿದೆ ಎಂದರೆ ಬೇಸರದ ಸಂಗತಿ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿದೆ ಹಾಗೂ ದಿನನಿತ್ಯ ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ಲಕ್ಷ್ಯವೇ ಕಾರಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಪ್ಪಳ 14

ಘಟನೆಗೆ ಸಂಬಂಧಿಸಿದಂತೆ ಯುವತಿ ಕುಟುಂಬಸ್ಥರು ಕನಕಗಿರಿ ಪೊಲೀಸ್‌ ಠಾಣೆಗೆ ದೂರು ಕೊಡಲು ಹೋದರೆ ಕೇಸ್ ತೆಗೆದುಕೊಳ್ಳದೆ ಸತಾಯಿಸಿ, ಹಿಂದೇಟು ಹಾಕಿದ್ದಾರೆ. ಠಾಣೆಯಲ್ಲಿ ಪಾಳೆಗಾರಿಕೆ ಆಳ್ವಿಕೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದರು.

ಜಾಥಾವನ್ನುದ್ದೇಶಿಸಿ ಮಾತನಾಡಿದ ವಕೀಲರಾದ ಹುಸೇನಪ್ಪ ಹಂಚಿನಾಳ, “ಜಿಲ್ಲೆಯ ಪ್ರತಿ ಹೋಟೆಲ್‌ಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಜಾತಿ ತಾರತಮ್ಯ ಮಾಡಬಾರದು ಎಂದು ಸೂಚನೆಗಳು ಹಾಕಬೇಕು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಇಲಾಖೆ ಇಂತಹ ಘಟನೆಗಳು ಸಂಭವಿಸಿದರೆ ಅದನ್ನು ಸರಿಯಾಗಿ ವಿಚಾರಣೆ ನಡೆಸುತ್ತಿಲ್ಲ ಹಾಗೂ ಜಾಗೃತಿ ಮೂಡಿಸುವುದಕ್ಕೆ ಮುಂದಾಗುತ್ತಿಲ್ಲ. ಜಿಲ್ಲೆಯನ್ನು ದೌರ್ಜನ್ಯ ಪೀಡಿತ ಜಿಲ್ಲೆ ಎಂದು ಸರಕಾರ ಘೋಷಣೆ ಮಾಡಿ, ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದಾವಣಗೆರೆ | ಮರಳಿನ ವಿಚಾರಕ್ಕೆ ಎರಡು ಗ್ರಾಮಸ್ಥರ ನಡುವೆ ಘರ್ಷಣೆ: ಚಾಕು ಇರಿತಕ್ಕೊಳಗಾಗಿದ್ದ ಓರ್ವ ಮೃತ್ಯು

ಜಾಥಾದಲ್ಲಿ ಕರ್ನಾಟಕ ಜನಶಕ್ತಿ ಮುಖಂಡ ಕುಮಾರ್ ಸಮತಳ, ಕೆವಿಎಸ್ ಮುಖಂಡ ದುರುಗೇಶ್ ಬರಗೂರು , ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು, ಟಿ ರತ್ನಾಕರ, ಶ್ರೀನಾಥ ಪೂಜಾರಿ, ಶುಕ್ರರಾಜ, ಸಿರಾಜ್ ಸಿದ್ದಾಪುರ, ಮಾರೆಪ್ಪ ಹರವಿ, ಎಂ ಆರ್ ಭೇರಿ, ಗುರುಬಸವ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...