ಕೊಪ್ಪಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Date:

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಎರಡು ದಿನಗಳ ಹಿಂದೆ‌ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರದ ಪುಷ್ಪಾವತಿ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದು, ಹಿರೇಗೊಣ್ಣಾಗರ ಗ್ರಾಮದ ಮರಿಯಪ್ಪ ಎಂಬುವವರ ಜೊತೆ ಮದುವೆಯಾಗಿದ್ದರು. ಮೃತಳಿಗೆ 3 ತಿಂಗಳ ಮಗುವಿದೆ ಎಂದು ತಿಳಿದು ಬಂದಿದೆ.

ಆರಂಭದಲ್ಲಿ ಸಂಸಾರ ಉತ್ತಮವಾಗಿ ಸಾಗಿತ್ತಾದರೂ ನಂತರ ಮರಿಯಪ್ಪ ತನ್ನ ಪತ್ನಿ ಪುಷ್ಪಾ ಅವರಿಗೆ ಪದೇ ಪದೇ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ. ಸೆ.8ರಂದು ಮನೆಯವರಿಗೆ ಕರೆ ಮಾಡಿದ್ದ ಪುಷ್ಪಾವತಿ ಗಂಡನ ಹಿಂಸೆ ತಾಳಲಾಗುತ್ತಿಲ್ಲ. ಬಂದು ಕರೆದುಕೊಂಡು ಹೋಗಿ ಇಲ್ಲದಿದ್ದರೆ ನನ್ನ ಜೀವ ಉಳಿಸುವುದಿಲ್ಲ ಎಂದು ಗೋಗರೆದಿದ್ದರು ಎಂದು ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಮೃತಳ ತಂದೆ ದಾಖಲಿಸಿದ ದೂರಿನಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ಆದರೆ ಸೆ.11 ರಂದು ಕರೆ ಮಾಡಿದ ಮೃತಳ ಮಾವ ನಿಂಗಪ್ಪ, ನಿಮ್ಮ ಮಗಳು ಸೀತಾಫಲ ಗಿಡಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದರು. ಆದರೆ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಗಂಡ ಮರಿಯಪ್ಪನೇ ಕೊಲೆ ಮಾಡಿ ನಂತರ ಗಿಡದಲ್ಲಿ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಇರಿಸಿದ್ದಾರೆ ಎಂದು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...