ಕೊಪ್ಪಳ | 4ನೇ ಕೇಂದ್ರ‌ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಸಾಹಿತಿ ದೇವೇಂದ್ರಪ್ಪ ಜಾಜಿ ಆಯ್ಕೆ

Date:

ಕೇಂದ್ರ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂಧನೂರು ಕಾಲೇಜು ಪ್ರಾಚಾರ್ಯ, ಸಾಹಿತಿ, ಅನುವಾದಕ, ವಿದ್ವಾಂಸರಾದ ಡಾ. ದೇವೇಂದ್ರಪ್ಪ ಜಾಜಿ ಅವರನ್ನು ಆಯ್ಕೆ ಮಾಡಲಾಗಿದ್ದು, ಗಂಗಾವತಿಯ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಟ್ರೇಶ್. ಎಸ್. ಉಪ್ಪಾರ ಮಾತನಾಡಿ, ಕೇಂದ್ರ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಗಂಗಾವತಿಯಲ್ಲಿ ನಡೆಸಬೇಕೆಂದು ಹಿಂದಿನ ವರ್ಷ ವಿಜಯಪುರ ಮೂರನೇ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಈ ಬಾರಿ ನಮ್ಮ ಪಟ್ಟಣದಲ್ಲಿ ಜನವರಿ 19ರಂದು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿದ್ವಾಂಸ, ಸಾಹಿತಿ, ಅನುವಾದಕ, ಎಂ.ಎಂ.ಕಲ್ಬುರ್ಗಿ ಅವರ ವಿದ್ಯಾರ್ಥಿ ಡಾ. ದೇವೇಂದ್ರಪ್ಪ ಜಾಜಿ ಅವರನ್ನು ಸರ್ವಾನುಮತದಿಂದ‌ ಆಯ್ಕೆ ಮಾಡಲಾಗಿದೆ’ ಎಂದರು.

‘ನಾಡಿನ ಖ್ಯಾತ ವಿದ್ವಾಂಸ, ಬವಾನುಯಾಯಿ, ಶರಣ ಚಿಂತಕಾರಾದ ರಮ್ಜಾನ್ ದರ್ಗಾ ಅವರು ಸಮ್ಮೇಳನ ಉದ್ಘಾಟನೆ ಮಾಡುವರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹುಟ್ಟಿಕೊಂಡಿದ್ದು, ಎಲೆಮರೆಯ ಸಾಧಕರನ್ನ ಗುರುತಿಸುವ ಹಿನ್ನೆಲೆಯಲ್ಲಿ ಸಮ-ಸಮಾಜಸ ಕನಸ್ಸನ್ನು ಹೊತ್ತು, ನಮ್ಮ ಸಾಹಿತ್ಯ ವೇದಿಕೆ ರಾಜ್ಯ, ಹೊರರಾಜ್ಯಗಳಲ್ಲೂ ಕೆಲಸ ಮಾಡುತ್ತಿದೆ, ಸಮ್ಮೇಳನವನ್ನು ನಡೆಸುತ್ತಿದೆ. ಬಸವಾದಿ ಶರಣರ, ಕುವೆಂಪು ಅವರ ವೈಚಾರಿಕ ಸಿದ್ಧಾಂತ, ನಿಲುವು, ತತ್ವಗಳಡಿಯಲ್ಲಿ ರಾಜ್ಯಾದ್ಯಂತ ಕೆಲಸ ಮಾಡುತ್ತಿದೆ. ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದಲ್ಲಿ ಶರಣರ ಸಾಹಿತ್ಯ ವಿಚಾರ ಗೋಷ್ಠಿ, ವಿಚಾರ ಸಂಕಿರಣ ಹೀಗೆ ನಾನಾ ರೀತಿಯ ವೈಚಾರಿಕತೆ, ವೈಜ್ಞಾನಿಕ, ಸಂವಿಧಾನಿಕ ಚಿಂತನೆಯಲ್ಲಿ ನಾನಾ ರೀತಿಯ ಗೋಷ್ಠಿ ನಡೆಸಿಕೊಂಡು ‌ಬಂದಿದೆ’ ಎಂದು ಸಮ್ಮೇಳನದ ಅಧ್ಯಕ್ಷರನ್ನು ಸನ್ಮಾನಿಸಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮ್ಮೇಳನದ ಅದ್ಯಕ್ಷ ಡಾ. ದೇವೇಂದ್ರಪ್ಪ ಜಾಜಿ ಮಾತನಾಡಿ, ಕವಿ-ಕಾವ್ಯ ಸಾಹಿತ್ಯ ಸಮ್ಮೇಳನ ಗಂಗಾವತಿಯಲ್ಲಿಯೇ ನಡೆಸಲು ತೀರ್ಮಾನಿಸಿರುವುದು ಬಹಳ ಹೆಮ್ಮೆಯ ವಿಷಯ. ಈ ಬಾರಿಯ ನಾಲ್ಕನೇ ಕೇಂದ್ರ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ಎಲ್ಲಾ ಕವಿ ಮನಸ್ಸುಗಳಿಗೂ ಹೃದಯ ತುಂಬಿದ ಧನ್ಯವಾದಗಳು ಎಂದರು.

ಇದನ್ನು ಓದಿದ್ದೀರಾ? ಕಾರವಾರ | ಲಾರಿ ಪಲ್ಟಿ : ಇಬ್ಬರ ದುರ್ಮರಣ

ಕಾಂಗ್ರೆಸ್ ವಕ್ತಾರೆ, ಕವಿ ಶೈಲಜಾ ಹಿರೇಮಠ ಮಾತನಾಡಿ, ‘ವೃತ್ತಿ, ವೈಯಕ್ತಿಕ ಬದುಕಿನ ಜೊತೆಗೆ ಸಾಹಿತಿಕವಾಗಿ ಕನ್ನಡವಾಗಿ ಕೆಲಸ ಮಾಡಿದ ದೇವೇದ್ರಪ್ಪ ಜಾಜಿ ಈ ವರ್ಷದ ಸಮ್ಮೇಳದ ಅಧ್ಯಕ್ಷರನ್ನಾಗಿ ಮಾಡಿರುವುದು ಹೆಮ್ಮೆ ಪಡುವ ವಿಚಾರ. ಇವರು ಅನುವಾದಕರಾಗಿ, ಎಂ.ಎಂ.ಕಲ್ಬುರ್ಗಿಯವರ ಜೊತೆ ಅತ್ಯಂತ ಆಪ್ತವಾಗಿ, ಬರಹಗಾರರಾಗಿ ಗುರುತಿಸಿಕೊಂಡವರು” ಎಂದು ಸಂತಸ ವಿಷಯ’ ಹರ್ಷ ವ್ಯಕ್ತಪಡಿಸಿದರು.

ಡಾ. ಹಸೀನಾ ಶಿವಮೊಗ್ಗ, ರಮೇಶ ಗಬ್ಬೂರ, ಲತಾಮಣಿ ತುರುವೇಕೆರೆ, ಸರಣಪ್ಪ ತಳ್ಳಿ, ಮಹೇಶ. ಕೆ.ಎಮ್, ನಾಗಭೂಷಣ್, ಡಾ. ಪಿ ದಿವಾಕರ ನಾರಾಯಣ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...