ಕೊಪ್ಪಳ | ಆನೆಗೊಂದಿ ಉತ್ಸವ ವಿಳಂಬ; ಸಚಿವ ತಂಗಡಗಿಗೆ ಹೋರಾಟಗಾರರ ಎಚ್ಚರಿಕೆ

Date:

ಆನೆಗೊಂದಿ ಉತ್ಸವ ಆಚರಿಸದಿದ್ದರೆ ಸಚಿವ ಸ್ಥಾನ ಕಳೆದು ಕೊಳ್ಳಲಿದ್ದೀರಿ, ಇದು ಸತ್ಯ ಎಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿಯವರಿಗೆ ಎಚ್ಚರಿಕೆ ನೀಡಿದರು.

“ಇತಿಹಾಸ ಪ್ರಸಿದ್ಧ ಆನೆಗೊಂದಿಯ ಮಹತ್ವ ಅರಿತು ಮಾಜಿ ಸಚಿವರು ಆದ ದಿವಂಗತ ಎಂ ಪಿ ಪ್ರಕಾಶ ರವರು ಹೊರ ಜಿಲ್ಲೆಯವರಾಗಿದ್ದರೂ ಅವರ ಕಾಳಜಿಯಿಂದ ಆನೆಗೊಂದಿ ಉತ್ಸವ ಆಚರಣೆಯನ್ನು ಪ್ರಾರಂಭಿಸಿದ್ದರು. ಆದರೆ, ನಮ್ಮ ಜಿಲ್ಲೆಯವರೇ ಆದ ಸಚಿವ ಶಿವರಾಜ್‌ ತಂಗಡಗಿ ಅವರು ಉತ್ಸವ ಮಾಡಲು ನಿರ್ಲಕ್ಷ್ಯ ತೋರಿಸಿ ಉತ್ಸವವನ್ನೇ ಅಂತ್ಯ ಮಾಡಲು ಹೊರಟಿದ್ದಾರೆಂದು ಅನುಮಾನವಗುತ್ತದೆ” ಎಂದು ಸಂಶಯ ವ್ಯಕ್ತಪಡಿಸಿದರು.

“ಗಂಗಾವತಿ ಕ್ಷೇತ್ರದ ಶಾಸಕರೊಂದಿಗಿನ ವೈಯಕ್ತಿಕ ದ್ವೇಷ ಹಠಕ್ಕೆ ಬಿದ್ದು ಕಳೆದ ಬಾರಿ ಉತ್ಸವದ ಅನುದಾನ ಬಿಡುಗಡೆ ಮಾಡದೇ ಇರುವುದು ಹಾಗೂ ಆನೆಗೊಂದಿ ಉತ್ಸವದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುವುದು ಸಚಿವರಿಗೆ ಶೋಭೆ ತರುವುದಿಲ್ಲ. ನಿಮ್ಮ ರಾಜಕೀಯ ಜಗಳದಲ್ಲಿ ಉತ್ಸವ ನಿರ್ಲಕ್ಷ್ಯಕ್ಕೆ ಒಳಗಾಗುವುದು ಬೇಡ. ಕೂಡಲೇ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ ಈ ತಿಂಗಳ ಅಂತ್ಯಕ್ಕೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಉತ್ಸವದ ದಿನವನ್ನು ಘೋಷಣೆ ಮಾಡಬೇಕು ಇಲ್ಲದಿದ್ದರೆ ಸಚಿವ ಸ್ಥಾನ ಬದಲಾವಣೆಯಾಗುವವರೆಗೂ ವಿವಿಧ ಸಂಘಟನೆಗಳೊಂದಿಗೆ ಹಾಗೂ ಈ ಭಾಗದ ಜನರೊಂದಿಗೆ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಹೋರಾಟ ಯಶಸ್ವಿ: ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಸ್ಥಗಿತ; ಸಿಎಂ ಸೂಚನೆ

ಈ ಸಂದರ್ಭದಲ್ಲಿ ಚಂದ್ರು ನಿಸರ್ಗ, ಜಡಿಯಪ್ಪ ಹಂಚಿನಾಳ, ದುರಗೇಶ್ ಹೊಸಳ್ಳಿ, ರಾಘವೇಂದ್ರ ಕಡೆಬಾಗಿಲು, ಮಂಜುನಾಥ ಗುಡಿಗೌಡ್ರ, ರಾಮಣ್ಣ ರುದ್ರಾಕ್ಷಿ, ಸಾಬೀರ್ ಹುಸೇನ್, ಬಸವರಾಜ್ ನಾಯಕ, ಮುತ್ತಣ್ಣ, ಸೋಮನಾಥ ಬಂಡಿ ಬಸಪ್ಪಕ್ಯಾಂಪ್, ಮಂಜುನಾಥ, ಚಾಂದಭಾಷಾ, ಕನಕಪ್ಪ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...