ಕೊಪ್ಪಳ | ದಿಢೀರ್ ಕುಸಿದ ಅಂಗನವಾಡಿ ಮೇಲ್ಛಾವಣಿಯ ಕಾಂಕ್ರೀಟ್: ನಾ‍ಲ್ಕು ಮಕ್ಕಳಿಗೆ ಗಂಭೀರ ಗಾಯ

Date:

ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ.

ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಅಂಗನವಾಡಿಯಲಿದ್ದ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ ದಿಢೀರ್ ಆಗಿ ಮೇಲ್ಛಾವಣಿಗೆ ಹಾಕಲಾಗಿದ್ದ ಸಿಮೆಂಟ್ ಕಾಂಕ್ರೀಟ್ ಕಿತ್ತು ನೆಲಕ್ಕೆ ಬಿದ್ದಿದೆ. ಇದರಿಂದಾಗಿ ನಾಲ್ಕು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಮಕ್ಕಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಮಕ್ಕಳ ಪೈಕಿ ಇಬ್ಬರ ಕಾಲಿಗೆ ಗಂಭೀರ ಗಾಯವಾಗಿದ್ದು, ಮತ್ತಿಬ್ಬರಿಗೆ ತಲೆಗೆ ಪೆಟ್ಟಾಗಿರುವುದಾಗಿ ತಿಳಿದುಬಂದಿದೆ. ಅಮನ್, ಮನ್ವಿತ್, ಮರ್ದನ್ ಹಾಗೂ ಸುರಕ್ಷಾ ಗಾಯಗೊಂಡ ಮಕ್ಕಳು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿದಿನವೂ ಈ ಅಂಗನವಾಡಿಗೆ 20 ಮಕ್ಕಳು ಬರುತ್ತಿದ್ದರು. ಇಂದು ಅಂಗನವಾಡಿಗೆ 14 ಮಕ್ಕಳು ಬಂದಿದ್ದರು. ಎಲ್ಲ 20 ಮಕ್ಕಳು ಇದ್ದಿದ್ದರೆ ಇನ್ನೂ ಹಲವು ಮಕ್ಕಳಿಗೆ ಗಾಯವಾಗುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

WhatsApp Image 2024 09 23 at 1.26.08 PM

ಘಟನೆಯ ಬಗ್ಗೆ ಈ ದಿನ.ಕಾಮ್‌ಗೆ ಮಾಹಿತಿ ನೀಡಿರುವ ಸ್ಥಳೀಯ ವ್ಯಕ್ತಿ ಮೆಹಬೂಬ್, ” ನಮ್ಮ ಕಾಲನಿಯ ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು 7 ವರ್ಷಗಳಾಗಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದೆ. ಟೆಂಡರ್ ಪಡೆದವರ ಲೈಸನ್ಸ್ ರದ್ದು ಮಾಡಬೇಕು ಹಾಗೂ ಸಂಬಂಧಪಟ್ಟ ಇಲಾಖೆಯವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

ಅಲ್ಲದೇ, ಸ್ಥಳಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಬೇಕು, ಗಾಯಗೊಂಡಿರುವ ಮಕ್ಕಳ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...