ಕೊಪ್ಪಳ | 2025-26ರ ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Date:

ರೈತರ ಮಕ್ಕಳಿಗೆ ತೋಟಗಾರಿಕಾ ಇಲಾಖೆ ವತಿಯಿಂದ 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ತರಬೇತಿಯು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದಲ್ಲಿರುವ ತರಬೇತಿ ಕೇಂದ್ರದಲ್ಲಿ 2025ರ ಮೇ 2 ರಿಂದ 2026ರ ಫೆ. 28ರ ವರೆಗೆ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ರೈತ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗಾಗಿ ಸಾಮಾನ್ಯ ಅಭ್ಯರ್ಥಿ 16, ಪರಿಶಿಷ್ಠ ಜಾತಿ 3 ಮತ್ತು ಪರಿಶಿಷ್ಟ ಪಂಗಡ 1 ರಂತೆ ಒಟ್ಟು 20 ಅಭ್ಯರ್ಥಿಗಳ ಗುರಿ ನಿಗದಿ ಪಡಿಸಲಾಗಿದೆ. ವಯೋಮಿತಿಯು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲರಿಗೆ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಇತರರಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ.

ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ ಪರಿಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು ಚೆನ್ನಾಗಿ ಕನ್ನಡ ಓದುವುದು, ಬರೆಯುವುದು ಮತ್ತು ಮಾತನಾಡುವುದನ್ನು ಬಲ್ಲವರಾಗಿರಬೇಕು. ತರಬೇತಿಯು ರೈತರ ಮಕ್ಕಳಿಗಾಗಿರುವುದರಿಂದ ಅಭ್ಯರ್ಥಿಯು ತಂದೆ, ತಾಯಿ ಅಥವಾ ಪೋಷಕರು (ತಂದೆ/ತಾಯಿ ಇಲ್ಲದ ಪಕ್ಷದಲ್ಲಿ) ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಶುಲ್ಕ, ಸಾಮಾನ್ಯ ಆಭ್ಯರ್ಥಿಗಳಿಗೆ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ.15 ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್‌ನ್ನು ತೋಟಗಾರಿಕೆ ಉಪನಿರ್ದೇಶಕರು‌ (ಜಿ.ಪಂ) ಕೊಪ್ಪಳ ಇವರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಬೇಕು.

ಅರ್ಜಿಗಳನ್ನು ಇಂದಿನಿಂದ (ಮಾ.1) ರಿಂದ ಮಾ.30ರ ವರೆಗೆ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಕೊಪ್ಪಳ, ಸಹಾಯಕ ತೋಟಗಾರಿಕೆ ನಿರ್ದೇಕರು (ರಾವ), ಕೊಪ್ಪಳ ಇವರ ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ www.horticulture.kar.nic.in ಮುಖಾಂತರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಈ ಸುದ್ದಿ ಓದಿದ್ದೀರಾ?: ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ; ಮಾ.9ಕ್ಕೆ ಕೊಪ್ಪಳದಲ್ಲಿ ಪ್ರಶಸ್ತಿ ಪ್ರದಾನ

ಅರ್ಜಿಗಳನ್ನು ಭರ್ತಿ ಮಾಡಿ ಏಪ್ರಿಲ್ 1ರ ಸಂಜೆ 5.30 ಗಂಟೆಯೊಳಗೆ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಕೊಪ್ಪಳ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಕರು (ರಾವ) ಕೊಪ್ಪಳ ಕಚೇರಿಗೆ ಸಲ್ಲಿಸಬೇಕು. ಏ. 8 ರಂದು ಬೆಳಗ್ಗೆ 10 ಗಂಟೆಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಈ ಸಂದರ್ಶನಕ್ಕೆ ಎಲ್ಲಾ ಮೂಲ ದಾಖಾಲಾತಿಗಳೊಂದಿಗೆ ಹಾಜರಾಗಬೇಕು. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರವನ್ನು ಕಳುಹಿಸಲಾಗುವುದಿಲ್ಲ ಎಂದು ತೋಟಗಾರಿಕೆ ಉಪ ನಿರ್ದೇಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...