ಕೊಪ್ಪಳ | ನೇತಾಜಿ ಕನಸಿನ ಭಾರತ ನಿರ್ಮಾಣ ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿ; ಗಂಗರಾಜ್ ಅಳ್ಳಳಿ

Date:

ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡುವುದು ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ ಎಂದು ಕೊಪ್ಪಳದ ವಿದ್ಯಾರ್ಥಿ ಸಂಘಟನೆ ನಾಯಕ ಗಂಗರಾಜ ಅಳ್ಳಳಿ ಅಭಿಪ್ರಾಯಪಟ್ಟರು.

ಕೊಪ್ಪಳದ ಜಿಲ್ಲಾ ಕ್ರಿಡಾಂಗಣದಲ್ಲಿ ಎಐಡಿಎಸ್‌ಒ, ಎಐಎಂಎಸ್‌ಎಸ್ ಮತ್ತು ಎಐಡಿವೈಒ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನೇತಾಜಿಯವರ ಆದರ್ಶಗಳು ಇಂದಿಗೂ ಪ್ರಸ್ತುತ, ಇಂದಿನ ಯುವ ಸಮೂಹ ಒಟ್ಟಾಗಿ ಕೈ ಜೋಡಿಸಿ ಅವರ ಕನಸಿನ ಆದರ್ಶವಾದ ದೇಶವನ್ನು ಕಟ್ಟಬೇಕು. ಇದನ್ನು ಸಾಕಾರಗೊಳಿಸಲು ನಾವೆಲ್ಲರೂ ನೇತಾಜಿಯವರ ವಿಚಾರಗಳನ್ನು ಗಾಢವಾಗಿ ಅಭ್ಯಾಸ ಮಾಡಬೇಕು ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಮಹಿಳಾ ಸಂಘಟನೆ ಜಿಲ್ಲಾ ಮುಖಂಡರಾದ ಶಾರದ ಗಡ್ಡಿ ಮಾತನಾಡಿ, “ಪ್ರಪಂಚದ ಇತಿಹಾಸದಲ್ಲಿಯೇ ವಿಶೇಷ ಎನಿಸುವ, ಮಹಿಳಾ ರೆಜಿಮೆಂಟನ್ನು ಸ್ಥಾಪನೆ ಮಾಡಿ, ಸ್ವತಂತ್ರ ಸಂಗ್ರಾಮದಲ್ಲಿ ಪುರುಷರಷ್ಟೇ ಸಮಾನವಾಗಿ ಮಹಿಳೆಯರೂ ಹೋರಾಡಬಲ್ಲರು ಎಂದು ತೋರಿಸಿದ ಖ್ಯಾತಿ ನೇತಾಜಿಯವರದ್ದು. ಅವರು ಸ್ಥಾಪಿಸಿದ ಐಎನ್ಎ ನೇತೃತ್ವದಲ್ಲಿ ನಡೆದ ರಾಜಿ ರಹಿತ ಹೋರಾಟ ಭಾರತಕ್ಕೆ ಸ್ವಾತಂತ್ರ್ಯ ಲಭಿಸುವಲ್ಲಿ ಮುಖ್ಯವಾದ ಪಾತ್ರ ವಹಿಸಿತ್ತು. ಅದೇ ರೀತಿ ನಾವುಗಳೆಲ್ಲರೂ ಸೇರಿ ಅವರ ಕನಸನ್ನು ಸಾಕಾರಗೊಳಿಸುವಲ್ಲಿ ಸಾಗಬೇಕು” ಎಂದು ಹುರಿದುಂಬಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಜನ ಸಂಘಟನೆಯ ಜಿಲ್ಲಾ ಮುಖಂಡ ದೇವರಾಜ್ ಹೊಸಮನಿ ಮಾತನಾಡಿ, “ನೇತಾಜಿ ಅವರ ಕನಸು ಶೋಷಣಾ ರಹಿತವಾದ ಸಮಾಜದ ಸ್ಥಾಪನೆ ಮಾಡುವುದಾಗಿತ್ತು. ಆದರೆ, ಇಂದು ಪ್ರಾಮಾಣಿಕವಾಗಿ ದುಡಿಯುವ ಜನರು ಬೀದಿಯಲ್ಲಿ ನಿಲ್ಲುವಂತಾಗಿದೆ. ಶಿಕ್ಷಣ, ಆರೋಗ್ಯ ಸೌಲಭ್ಯಗಳು ದುಬಾರಿಯಾಗಿವೆ. ನಿರುದ್ಯೋಗ ಹೆಚ್ಚುತ್ತಿದೆ. ಮತ್ತೊಂದೆಡೆ ಲೂಟಿಕೋರರು, ಭ್ರಷ್ಟರು, ಇನ್ನೊಬ್ಬರ ಶ್ರಮವನ್ನು ಲೂಟಿ ಹೊಡೆಯುವ ದೊಡ್ಡ ಮಾಲೀಕರು ಐಷಾರಾಮಿ ಜೀವನ ನಡೆಸುವಂತಹ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇದರ ವಿರುದ್ಧ ಯುವಜನರು, ವಿದ್ಯಾರ್ಥಿಗಳು ಪ್ರಜ್ಞಾವಂತ ನಾಗರಿಕರು ಹೋರಾಟಕ್ಕೆ ಮುನ್ನಡೆಯುವುದೇ ನಾವು ನೇತಾಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

WhatsApp Image 2025 01 24 at 1.31.47 PM

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, “ನೇತಾಜಿ ಅವರ ವಿಚಾರಗಳನ್ನು ಜಿಲ್ಲೆಯಾದ್ಯಂತ ವಿದ್ಯಾರ್ಥಿ ಯುವಕರಿಗೆ ತಿಳಿಸುವ ಕೆಲಸವನ್ನು ನಮ್ಮ ಸಂಘಟನೆಗಳು ನಿರಂತರವಾಗಿ ಮಾಡುತ್ತಿವೆ. ಎಲ್ಲಾ ಕಾರ್ಯಕ್ರಮಗಳು ಜನ ಬೆಂಬಲದಿಂದ ನಡೆಯುತ್ತಿವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ; ಗುತ್ತಿಗೆದಾರ ವಿಶ್ವನಾಥ ಕುಂಬಾರನ ವಿರುದ್ಧ ಸೂಕ್ತ ಕ್ರಮವಾಗುವುದೇ?

ಕಾರ್ಯಕ್ರಮದಲ್ಲಿ ಸದಾಶಿವ ಮುನಿರಾಬಾದ್, ಸುಭಾನ್ ನೀರಲಗಿ, ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಕೊಪ್ಪಳ ನಾಗರಿಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...