ಕೊಪ್ಪಳ | ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ: ಜಿಲ್ಲಾಧಿಕಾರಿ ನಳಿನ್ ಅತುಲ್

Date:

ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಬಕ್ರೀದ್ ಹಬ್ಬದ ಶಾಂತಿ ಪಾಲನಾ ಪೂರ್ವಭಾವಿ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿದರು.

“ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುವ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಲು ಸೂಕ್ತ ಕ್ರಮವಹಿಸಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಮಾತನಾಡಿ, “ಪ್ರತಿ ವರ್ಷದಂತೆ ಈ ವರ್ಷವೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಕೋಮು ಗಲಭೆಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಪ್ರಾಣಿಬಲಿ, ಅವುಗಳ ಸಾಗಾಟದ ಮೇಲೆ ನಿಗಾವಹಿಸಲು ಜಿಲ್ಲೆಯಲ್ಲಿ 16 ಚೆಕ್‌ಪೋಸ್ಟ್ ತೆರೆಯಲಾಗುವುದು. ಸೋಶಿಯಲ್ ಮೀಡಿಯಾದಲ್ಲಿ ಬರುವ ಯಾವುದೇ ಸುಳ್ಳು ಸುದ್ದಿಯನ್ನು ನಂಬದೆ ಅಂತಹವುಗಳನ್ನು ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಹಬ್ಬವನ್ನು ಆಚರಣೆ ಮಾಡಬೆಕು” ಎಂದು ತಿಳಿಸಿದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಹೇಮಂತ್ ಕುಮಾರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ ಎಂ ಮಲ್ಲಯ್ಯ, ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ಮುಸ್ಲಿಂ ಸಮಾಜದ ಮುಖಂಡರಾದ ಪೀರಾ ಹುಸೇನ್ ಹೊಸಳ್ಳಿ, ಎಸ್ ಬಿ ಖಾದ್ರಿ, ಸಯ್ಯದ್ ನಾಸಿರುದ್ದೀನ್ ಹುಸೇನಿ, ಮಾನ್ವಿ ಪಾಶಾ, ಆರ್ ಮಹಮ್ಮದ್ ರಫಿ, ಮಹಮ್ಮದ್ ಸಾಬ, ಪಕೃದ್ದೀನ್, ಮರ್ದಾನ್ ಸಾಬ ಗುಡಗುಡಿ, ಮಹಮ್ಮದ್ ಸಾಬ ಕುರಗಲ್, ಬಿಜಿಲಿಸಾಬ ಪಟೇಲ್, ಉಮಾರ್ ಪಾರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...