ಕೊಪ್ಪಳ | ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ; ಅಹೋರಾತ್ರಿ ಧರಣಿ

Date:

ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ವಸತಿ ನಿಲಯಗಳಲ್ಲಿ ಹೊರಗುತ್ತಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಾಯಿತು.

ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ಶಾಲೆಗಳಲ್ಲಿ ಕಳೆದ 15-20 ವರ್ಷಗಳಿಂದ ಗುತ್ತಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಉದ್ಯೋಗ ಭದ್ರತೆ ಇಲ್ಲ. ಖಾಯಂ ನೌಕರರ ವರ್ಗಾವಣೆಯಿಂದ ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್, ಕಂಪ್ಯೂಟರ್‌ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು ಸೇರಿದಂತೆ ರಾಜ್ಯದ ಸಾವಿರಾರು ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ನಾಲ್ಕು ವರ್ಷಗಳಿಂದ ವೇತನವೂ ಹೆಚ್ಚಳವಾಗಿಲ್ಲ. ಬರುವ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡಲು ಹೆಣಗಾಡುವಂತಾಗಿದೆ. ಹಾಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆ ಈಡೇರುವವರೆಗೆ ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಈ ಕೂಡಲೇ ಸಭೆ ಕರೆದು ಚರ್ಚಿಸಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 21 at 6.26.58 PM

ಮಾಸಿಕ ರೂ.31 ಸಾವಿರ ವೇತನ, ನಿವೃತ್ತಿವರೆಗೆ ಸೇವಾ ಭದ್ರತೆ, ಇಲಾಖೆಯಿಂದ ನೇರ ವೇತನ, ಖಾಸಗಿ ಎಜೆನ್ಸಿಗೆ ನೀಡಿದ ಟೆಂಡ‌ರ್ ರದ್ದುಗೊಳಿಸಬೇಕು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಬಸವರಾಜ್ ಸೂಳಿಬಾವಿ ವಿರೋಧ

ಈ ವೇಳೆ ಜಿಲ್ಲಾಧ್ಯಕ್ಷ ಗ್ಯಾನೇಶ್ ಕಡಗದ. ಪ್ರಮುಖರಾದ ಸುಂಕಪ್ಪ ಗದಗ. ಖಾಸಿಂ ಸಾಬ್ ಸರ್ದಾರ್. ರಫೀಕ್ ಜಗಿರ್ದಾರ್. ಫಕೀರಪ್ಪ, ದೊಡ್ಡಬಸವರಾಜ, ಪಾರ್ವತಿ, ಲೋಕೇಶ, ಹನುಮಂತ, ಭೀಮಣ್ಣ, ನಾಗರಾಜ, ಪಾರಮ್ಮ, ಶಾಂತಮ್ಮ, ರಮೇಶ್, ಪಾರಮ್ಮ, ವೆಂಕಟೇಶ್, ದಸ್ತಗಿರಿ ಇತರರು ಇದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...