ಕೊಪ್ಪಳ | ದಾರುಣ ಘಟನೆ: ದಲಿತ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ

Date:

ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೆ ಕತ್ತರಿಯಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ನಡೆದಿದೆ.

ಯಮನೂರಪ್ಪ ಈರಪ್ಪ ಬಂಡಿಹಾಳ ಮೃತ ದಲಿತ ಯುವಕ ಎಂದು ಗುರುತಿಸಲಾಗಿದೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ದಲಿತ ಯುವಕ ಪ್ರಶ್ನಿಸಿದ್ದಕ್ಕೆ , ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಯುವಕ ಧರ್ಮರಾಜ್ ಮಾಹಿತಿ ನೀಡಿದ್ದಾನೆ.

ಸಂಗನಾಳ ಗ್ರಾಮದ ಇಡೀ ದಲಿತ ಸಮುದಾಯದವರನ್ನು ಹೇರ್ ಕಟ್ಟಿಂಗ್ ಮಾಡಿಸಲು ಅವಕಾಶ ನೀಡುತ್ತಿಲ್ಲ. ಯಲಬುರ್ಗಾ ತಾಲೂಕಿಗೆ ಹೋಗಿ ಹೇರ್ ಕಟ್ ಮಾಡಿಸುತ್ತಾ ಬಂದಿದ್ದೇವೆ. ದಲಿತರೆಂಬ ಕಾರಣಕ್ಕೆ ಅಸ್ಪೃಶ್ಯತೆ ಆಚರಣೆ ನಡೆಯುತ್ತಿದೆ ಎಂದು ಗ್ರಾಮದ ದಲಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1001362265

ಹಲವಾರು ಸಮುದಾಯಗಳ ಜನರ ಕ್ಷೌರ ಮಾಡಲಾಗುತ್ತದೆ. ಆದರೆ ದಲಿತ ಸಮುದಾಯದವರಿಗೆ ಮಾತ್ರ ಮಾಡಲ್ಲ. ಯಾವ ಕಾರಣಕ್ಕೆ ಅಂತ ಪ್ರಶ್ನಿಸಿದರೆ, ಕೊಲೆ ಮಾಡುವ ಹಂತಕ್ಕೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಲಬುರ್ಗಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಕೂಡಲೇ ಆರೋಪಿ ಮುದುಕಪ್ಪ ಹಡಪದನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಈ ದಿನ. ಕಾಮ್ ತಂಡ ಗ್ರಾಮಕ್ಕೆ ತೆರಳಿದೆ‌.

1001362375
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...