ಕೊಪ್ಪಳ | ಪೋಕ್ಸೋ ಕಾಯ್ದೆಯ ಕುರಿತು ಜನರಲ್ಲಿ ಅರಿವಿನ ಅಗತ್ಯವಿದೆ: ನ್ಯಾ. ಡಿ ಕೆ ಕುಮಾರ್

Date:

ಬಹಳಷ್ಟು ಮಂದಿ ಕಾನೂನು ಅರಿವಿಲ್ಲದೆ ಹಲವು ‌ತಪ್ಪುಗಳನ್ನು ಮಾಡುತ್ತಾರೆ. ಅವರಿಗೆ ಪೋಕ್ಸೋ ಕಾಯ್ದೆಯಂತಹ ಇತರೆ ಹಲವಾರು ಕಾಯ್ದೆ, ಕಾನೂನುಗಳ ಕುರಿತು ಅರಿವು ಮೂಡಿಸಿದಾಗ ಅವರು ತಪ್ಪುಗಳನ್ನು ಮಾಡಲು ಹಿಂಜರಿಯುತ್ತಾರೆ ಎಂದು ಕೊಪ್ಪಳ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಎಫ್.ಟಿ.ಎಚ್.ಸಿ ಪೋಕ್ಸೋ ನ್ಯಾಯಾಧೀಶ ಡಿ.ಕೆ. ಕುಮಾರ್ ಹೇಳಿದರು.

ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ‌ಕೊಪ್ಪಳ ವತಿಯಿಂದ ಪ್ರಧಾನ ಕೌಟುಂಬಿಕ ನ್ಯಾಯಾಲಯದ ಆವರಣ ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ಬಯೋಮಂತ್ಲೀ ಸಭೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿವೆ. ಪೊಕ್ದೋ ಕಾಯ್ದೆಯಡಿ ಇದನ್ನು ಮಾಡಿದರಿಗೆ ಶಿಕ್ಷೆಯಾಗುತ್ತದೆ ಎಂದು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ‘ಕಾಲೇಜುಗಳಲ್ಲಿ ಹುಡುಗ ಮತ್ತು ಹುಡುಗಿಯರು ಇಬ್ಬರಿಗೂ ‌ಲೈಂಗಿಕ ದೌರ್ಜನ್ಯ ನಡೆಸಿದರೆ ಪೋಕ್ಸೋ ಕಾಯ್ದೆಯಡಿ ಜೈಲುವಾಸ ಹಾಗೂ ‌ತಮ್ಮ ಮನೆಯ ಮರ್ಯಾದೆ ಹೋಗುತ್ತದೆ’ ಎಂದು ಶಿಕ್ಷಕರು ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರೆ ಅವರು ಇಂತಹ ತಪ್ಪುಗಳನ್ನು ಮಾಡುವುದಿಲ್ಲ. ಇದರ ಹೊರತಾಗಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡಲು ಹಲವಾರು ಜನ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಬೇಕು” ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ ಅವರು ಮಾತನಾಡಿ, “ನಾಲ್ಸಾದ 11 ಕಾರ್ಯಕ್ರಮಗಳಿದ್ದು ಅವುಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ‌ಹಮ್ಮಿಕೊಂಡು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರು ‌ಮತ್ತು ದೌರ್ಜನ್ಯಕ್ಕೆ ಒಳಗಾದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಬೇಕಿದೆ. ವಿಶ್ವ ಜಲ ದಿನ, ಭೂ ದಿನ ಹೀಗೆ ಇತರೆ ಹಲವಾರು ಕಾರ್ಯಕ್ರಮಗಳನ್ನು ‌ಹಮ್ಮಿಕೊಂಡು ಪ್ರತಿಯೊಂದು ವಿಷಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಕಾನೂನಿನಲ್ಲಿ ಇರುವ ರಕ್ಷಣೆ. ಪರಿಶಿಷ್ಟ ‌ಜಾತಿ‌ ಹಾಗೂ ಪರಿಶೀಷ್ಟ ಪಂಗಡದ ಜನರ ಮೇಲೆ ದೌರ್ಜನ್ಯಗಳಾದಾಗ ಅವರಿಗೆ ಕಾನೂನಿನಲ್ಲಿರುವ ರಕ್ಷಣೆ ಸೇರಿದಂತೆ ಇತರೆ ‌ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ‌ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಹಮ್ಮಿಕೊಳ್ಳಬೇಕು” ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ‌ಪಂಚಾಯತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಹೇಮಂತ ಕುಮಾರ್, ಅರಣ್ಯ ಇಲಾಖೆಯ ‌ಎ.ಸಿ.ಎಫ್. ಎ.ಎಚ್.ಮುಲ್ಲಾ, ‌ಚುನಾವಣಾ ತಹಶೀಲ್ದಾರ್ ರವಿ ವಸ್ರ್ರದ ಸೇರಿದಂತೆ ಜಿಲ್ಲಾ ‌ಮಟ್ಟದ ಇತರೆ ವಿವಿಧ ಇಲಾಖೆಯ ‌ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...