ಕೊಪ್ಪಳ | ಪ್ಲಾಸ್ಟಿಕ್, ರಟ್ಟಿನ ಚಹಾ ಕಪ್‌ಗಳ ನಿಷೇಧಕ್ಕೆ ಜನಪರ ಸಂಘಟನೆ ಒಕ್ಕೂಟ ಆಗ್ರಹ

Date:

ಪ್ಲಾಸ್ಟಿಕ್ ಮತ್ತು ರಟ್ಟಿನಿಂದ ಮಾಡಿದ ಚಹಾ ಕಪ್‌ಗಳನ್ನು ನಿಷೇಧಿಸುವಂತೆ ಕೊಪ್ಪಳ ಜನಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

“ಕೊಪ್ಪಳ ನಗರಸಭೆಯಲ್ಲಿ ನಡೆಯುವ ತುರ್ತು ಸಭೆಗಳು, ಸಾಮಾನ್ಯ ಸಭೆಗಳು, ಅಧಿಕಾರಿಗಳ ಸಭೆಗಳು, ಶಾಸಕರ, ಸಚಿವರುಗಳ ಪರಿಶೀಲನಾ ಸಭೆಗಳಲ್ಲಿ ಇದೇ ಪ್ಲಾಸ್ಟಿಕ್‌ ಕಪ್‌ಗಳನ್ನು ಬಳಲಾಗುತ್ತಿದೆ. ಇದರಿಂದ ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಪತ್ರಿಕೆಗಳಲ್ಲಿ ವರದಿ ಪ್ರಕಟವಾಗುತ್ತಲೇ ಇವೆ. ಅಂತಹ ಹಾನಿಕಾರಕ ಕಪ್‌ ಬಳಕೆಯನ್ನು ನಿಷೇಧ ಮಾಡದೆ ಸಾಮಾನ್ಯ ಕಾರ್ಯಕ್ರಮಗಳಲ್ಲೂ ಬಳಕೆ ಮಾಡಲು ಅವಕಾಶ ಮಾಡಿಕೊಟ್ಟಿರುವುದು ವಿಪರ್ಯಾಸ. ಆರೋಗ್ಯದ ದೃಷ್ಟಿಯಿಂದ ಬಹುತೇಕ ಹೋಟೆಲ್‌ಗಳಲ್ಲಿ ಬಳಕೆಯಲ್ಲಿರುವ ಪ್ಲಾಸ್ಟಿಕ್ ಹಾಗೂ ರಟ್ಟಿನ ಚಹಾ ಕಪ್‌ಗಳನ್ನು ನಿಷೇಧಿಸಲು ನಗರಸಭೆ ಕ್ರಮ ಕೈಗೊಳ್ಳಬೇಕು” ಎಂದು ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್, ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಶಾ ಪಲ್ಟನ್ ಅವರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಎಸ್‌ಯುಸಿಐ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕೂಟದ ಮನವಿಯಂತೆ ಪ್ಲಾಸ್ಟಿಕ್ ಹಾಗೂ ರಟ್ಟಿನ ಚಹಾ ಕಪ್‌ಗಳನ್ನು ನಗರಸಭೆಯ ಸಭೆಗಳಲ್ಲಿ ಮತ್ತು ನಗರದ ಹೋಟೆಲ್ ಗಳಲ್ಲಿ ನಿಷೇಧಿಸಲು ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದು ಜಾರಿ ಮಾಡಿಸಲು ಪ್ರಯತ್ನಿಸುತ್ತೇನೆ ಎಂದು ಅಕ್ಬರ್ ಪಾಶಾ ಆಶ್ವಾಸನೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...