ಕೊಪ್ಪಳ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿ‌ಪಿ‌ಐ ಪ್ರತಿಭಟನೆ

Date:

ಕೇಂದ್ರ ಸರ್ಕಾರದ ವಕ್ಫ್ ಮಸೂದೆ ವಿರೋಧಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಹಾಗೂ ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಸೂದೆಯ ಪ್ರತಿ ಹರಿದು ಹಾಕುವುದರ ಮೂಲಕ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿಭಟನೆ ನಡೆಸಿತು. ಗಂಗಾವತಿಯಲ್ಲಿ ಪ್ರತಿಭಟನಾಕಾರರನ್ನು ಕೆಲವು ನಿಮಿಷ ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು.

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಚಾಂದ್‌ ಸಲೀಂ ಮಾತನಾಡಿ, “ಸರ್ಕಾರ ಪ್ರಸ್ತಾಪಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಎಸ್‌ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಮಸೂದೆ ಮೂಲಕ ಅಸಂವಿಧಾನಿಕ ಹಾಗೂ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ ಮಾಡಲಾಗಿದೆ. ಈ ಮಸೂದೆ, ಶತಮಾನಗಳ ಕಾಲ ಸಮುದಾಯದ ಕಲ್ಯಾಣಕ್ಕಾಗಿ ರಕ್ಷಿಸಲಾಗಿದ್ದ ವಕ್ಫ್ ಆಸ್ತಿಗಳ ಸ್ವಾಯತ್ತತೆಗೆ ಧಕ್ಕೆ ತರುತ್ತದೆ. ಭಾರತದ ಅಲ್ಪಸಂಖ್ಯಾತರ ಸಮುದಾಯವನ್ನ ಬಲಹೀಗೊಳಿಸುವ ಮಸೂದೆಯಾಗಿದೆ. ಮುಸ್ಲಿಂ ಸಮುದಾಯದ ಸಾಮಜಿಕ ನ್ಯಾಯದ ವಿರುದ್ಧ ನೇರ ದಾಳಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಲೀಮ್ ಮನಿಯಾರ್ ಮಾತನಾಡಿ, “ನಾವು ಎಲ್ಲಾ ಪ್ರಜಾಸತ್ತಾತ್ಮಕ ಹಾಗೂ ಧರ್ಮನಿರಪೇಕ್ಷ ಶಕ್ತಿಗಳನ್ನು ಈ ಮಸೂದೆಯ ವಿರುದ್ಧ ರಾಷ್ಟ್ರ ವ್ಯಾಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ಆಹ್ವಾನಿಸುತ್ತೇವೆ. ಎಸ್‌ಡಿಪಿಐ ತನ್ನ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸುವ ಬದ್ಧತೆಯನ್ನು ಪುನಃ ದೃಢಪಡಿಸುತ್ತದೆ ಹಾಗೂ ಮುಸ್ಲಿಂ ಸಮುದಾಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಮೇಲಿನ ಯಾವುದೇ ಹಸ್ತಕ್ಷೇಪವನ್ನು ಅನುಮತಿಸುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಶಾಲೆಗಳಲ್ಲಿ ಬೋಧನಾ ಗುಣಮಟ್ಟ ಸುಧಾರಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮನವಿ

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮುಖಂಡರು, ಮುಸ್ಲಿಂ ಸಮುದಾಯದ ಮುಖಂಡರು, ಸಾರ್ವಜನಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...