ಕೊಪ್ಪಳ | ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Date:

  • ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಟಾಸ್ಕ್‌ಫೋರ್ಸ್‌ ಸಭೆ
  • ಪೈಪ್‌, ಮೋಟರ್‌, ಟ್ಯಾಂಕ್‌ ದುರಸ್ಥಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ

ಜನರಿಗೆ ಸಮರ್ಪಕ ನೀರು ಸರಬರಾಜಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಸೂಚಿಸಿದರು.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಟಾಸ್ಕ್‌ ಪೋರ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಬೋರ್‌ವೆಲ್‌ಗಳಲ್ಲಿ ಕುಡಿಯುವ ನೀರು ಕಡಿಮೆಯಾದರೆ ಅದಕ್ಕೆ ಪರ್ಯಾಯವಾಗಿ ಖಾಸಗಿ ಬೋರ್‌ವೆಲ್ ಗುರುತಿಸಿ, ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

ಪೈಪ್‌ಲೈನ್ ಸೋರಿಕೆ, ಮೋಟರ್ ದುರಸ್ಥಿ ಮತ್ತು ಟ್ಯಾಂಕ್ ದುರಸ್ಥಿಗೆ ಸಂಬಂಧಿಸಿದಂತೆ ಸಾಮಗ್ರಿಗಳನ್ನು ಸಿದ್ದತೆಯಲ್ಲಿ ಇಟ್ಟುಕೊಳ್ಳಬೇಕು. ಒಂದು ವೇಳೆ ಪೈಪ್‌ಲೈನ್ ಲಿಕೇಜ್ ಮತ್ತು ಮೋಟರ್ ದುರಸ್ಥಿ ಸಮಸ್ಯೆ ಬಂದರೆ ಅವುಗಳನ್ನು ತಕ್ಷಣವೇ ದುರಸ್ಥಿ ಮಾಡಬೇಕು ಎಂದು ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದು ಎಂದು ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಸಭೆಗೆ ತಿಳಿಸಿದರು.

ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿ (ಸಿಇಒ) ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತಕ್ಷಣ ಅದನ್ನು ಬಗೆಹರಿಸಬೇಕು ಎಂದು ಪಿಡಿಓಗಳಿಗೆ ತಿಳಿಸಲಾಗಿದೆ ಮತ್ತು ಈಗಾಗಲೇ ದುರಸ್ಥಿಗೆ ಬಂದಿರುವುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಉಮಾಪತಿ ಗೌಡ

ಜಿಲ್ಲಾಧಿಕಾರಿ ಮಾತಾಡಿ, ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರು ರಜಿಸ್ಟರ್‌ನ್ನು ನಿರ್ವಹಿಸಿ, ದೂರು ದಾಖಲಾದ ಸಮಯ ಮತ್ತು ದೂರಿನ ಕುರಿತು ಕೈಗೊಂಡ ಕ್ರಮದ ಬಗ್ಗೆ ರಜಿಸ್ಟರ್‌ನಲ್ಲಿ ನಮೂದಿಸಲು ಮತ್ತು ಸರ್ಕಾರದಿಂದ ಅನುಷ್ಠಾನಗೊಂಡ ಡಿಬಿಒಟಿ, ಜೆ.ಜೆ.ಎಂ ಮತ್ತು ಇತರೆ ಯೋಜನೆಗಳಡಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ಸರಿಯಾಗಿ ಸರಬರಾಜು ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಸೂಚಿಸಿದರು.

ಪೈಪ್‌ಲೈನ್ ಸೋರಿಕೆ ಮತ್ತು ಮೋಟರ್ ದುರಸ್ಥಿ, ಬೋರ್‌ವೇಲ್ ದುರಸ್ಥಿ ಹಾಗೂ ಟ್ಯಾಂಕರ್‌ಗಳು ದುರಸ್ಥಿಪಡಿಸಲು ಸಾಮಗ್ರಿಗಳನ್ನು ಸಿದ್ದಪಡಿಸಿಟ್ಟುಕೊಳ್ಳಲು ಸಂಬಂಧಿಸಿದ ಏಜೆನ್ಸಿಯವರಿಗೆ ತಿಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ವಾರಕ್ಕೊಂದು ಸಭೆ ನಡೆಸಲು ಸೂಚನೆ

ತಾಲೂಕು ಮಟ್ಟದಲ್ಲಿ ತಾಲೂಕು ಟಾಸ್ಕ್‌ ಫೋರ್ಸ್‌ ಸಮಿತಿಯವರು ವಾರಕೊಮ್ಮೆ ಸಭೆ ನಡೆಸಿ ಈ ಕಾರ್ಯಾಲಯಕ್ಕೆ ಸಭಾ ನಡವಳಿ ಸಲ್ಲಿಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಲ್ಲಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಸಮಸ್ಯೆಯನ್ನು 24 ಗಂಟೆಯೊಳಗೆ ಬಗೆಹರಿಸಲು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಇಲ್ಲ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಾನಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...