ಕೊಪ್ಪಳ | ಉಪವಾಸ ಸತ್ಯಾಗ್ರಹ ಕೈಬಿಟ್ಟ ಸಂಸದ ಸಂಗಣ್ಣ ಕರಡಿ

Date:

ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್‌ ಪರಿಕರಗಳನ್ನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಆರಂಭಿಸಿದ್ದ ಉಪವಾಸ ಸತ್ಯಾಗ್ರಹವನ್ನು ಅವರು ಹಿಂಪಡೆದಿದ್ದಾರೆ. ಅವರು ಸೋಮವಾರ (ನ.06) ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನ. 09ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ಅರೆ. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹ ಹಿಂಪಡೆದಿರುವುದಾಗಿ ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ದೊಡ್ಡನ ಗೌಡ ಪಾಟೀಲ್,ಮಾಜಿ ಸಚಿವ ಹಾಲಪ್ಪ ಆಚಾರ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಬಸವರಾಜ ದಢೇಸುಗೂರು ಸೇರಿದಂತೆ ಮಾಜಿ ಕಾಡ ಅದ್ಯಕ್ಷ ತಿಪ್ಪೇರುದ್ರಸ್ವಾಮಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...